ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ : ಆರ್‌ಬಿಐ ಸಮೀಕ್ಷೆ

Team Udayavani, Feb 9, 2020, 5:21 PM IST

RBI

ಹೊಸದಿಲ್ಲಿ: ದೇಶದ ಆರ್ಥಿಕತೆಯ ಕುರಿತು ಕೇಂದ್ರಿಯ ಬ್ಯಾಂಕ್‌ ದೇಶದ 13 ಪ್ರಮುಖ ನಗರಗಳಲ್ಲಿ ಸಮೀಕ್ಷೆ ನಡೆಸಿದ್ದು, ಆರ್ಥಿಕ ಕ್ಷೇತ್ರದ ಸ್ಥಿತಿಗತಿಗಳನ್ನು ಅನಾವರಣ ಮಾಡಿದೆ.

ದೇಶದ 13 ಪ್ರಮುಖ ನಗರಗಳ ಒಟ್ಟು 5,389 ಮನೆಗಳನ್ನು ಆಯ್ದುಕೊಂಡು ಕೇಂದ್ರೀಯ ಬ್ಯಾಂಕ್‌ ಸಮೀಕ್ಷೆ ನಡೆಸಿದ್ದು, ದೇಶದ ಆರ್ಥಿಕತೆಯ ಬಗ್ಗೆ ಜನಾಭಿಪ್ರಾಯವನ್ನು ಸಂಗ್ರಹ ಮಾಡಿದೆ.

ಕಳೆದ ಒಂದು ವರ್ಷದಲ್ಲಿ ಹದಗೆಟ್ಟಿದೆ :
ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾ (ಆರ್‌ಬಿಐ) ಬಿಡುಗಡೆ ಮಾಡಿದ ಸಮೀಕ್ಷಾ ವರದಿಯಲ್ಲಿ “ದೇಶದ ಸಾಮಾನ್ಯ ಆರ್ಥಿಕ ಪರಿಸ್ಥಿತಿ ಡೋಲಾಯಮಾನವಾಗಿದೆ ‘ ಎಂದು ಅರ್ಧಕ್ಕಿಂತ ಹೆಚ್ಚು ಕುಟುಂಬಗಳು ಒಪ್ಪಿಕೊಂಡಿವೆ.

2019ರ ಮಾರ್ಚ್‌ನಲ್ಲಿ ಶೇ32.5ಕ್ಕೆ ಹೋಲಿಸಿದರೆ, 2020ರ ಜನವರಿಯಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಶೇ54.9ರಷ್ಟು ಕುಟುಂಬಗಳು ದೇಶದ ಸಾಮಾನ್ಯ ಆರ್ಥಿಕ ಪರಿಸ್ಥಿತಿ ಕಳೆದ ಒಂದು ವರ್ಷದಲ್ಲಿ ಹದಗೆಟ್ಟಿದೆ ಎಂಬ ಅಭಿಪ್ರಾಯವನ್ನು ಹಂಚಿಕೊಂಡಿದ್ದು, ಶೇ 27.1ರಷ್ಟು ಜನರು, ದೇಶದ ಪರಿಸ್ಥಿತಿ ಸುಧಾರಿಸಿದೆ ಎಂದು ಹೇಳಿದ್ದಾರೆ.

ಯಾವುದೇ ಬದಲಾವಣೆ ಕಂಡು ಬಂದಿಲ್ಲ:
2019ರ ಜನವರಿಗೆ ಹೋಲಿಸಿದರೆ ಯಾವುದೇ ರೀತಿಯ ಬದಲಾವಣೆ ಕಂಡುಬಂದಿಲ್ಲ ಎಂದು ಶೇ.18ರಷ್ಟು ಕುಟುಂಬಗಳು ಒಪ್ಪಿಕೊಂಡಿವೆ ಎಂದು ಸಮೀಕ್ಷೆಯಲ್ಲಿ ತಿಳಿಸಲಾಗಿದೆ. ಸಮೀಕ್ಷೆಯಲ್ಲಿ ಅಹಮದಾಬಾದ್‌, ಬೆಂಗಳೂರು, ಭೋಪಾಲ…, ಚೆನ್ನೈ, ಹೊಸದಿಲ್ಲಿ, ಗುವಾಹಟಿ, ಹೈದರಾಬಾದ್‌, ಜೈಪುರ, ಕೋಲ್ಕತಾ, ಲಕ್ನೋ, ಮುಂಬೈ, ಪಾಟ್ನಾ ಮತ್ತು ತಿರುವನಂತಪುರಂ ಸೇರಿವೆ.

ಭವಿಷ್ಯದಲ್ಲಿ ಸುಧಾರಣೆ ಕಾಣಬಹುದು
ಸಮೀಕ್ಷೆಯಲ್ಲಿ ಶೇ 48.4ರಷ್ಟು ಜನರು ಮುಂದಿನ ವರ್ಷದಲ್ಲಿ ಉದ್ಯೋಗ ಪರಿಸ್ಥಿತಿ ಸುಧಾರಿಸುತ್ತದೆ ಎಂದಿದ್ದಾರೆ. ಪ್ರಸ್ತುತ ಉದ್ಯೋಗದ ಸನ್ನಿವೇಶಕ್ಕೆ ಸಂಬಂಧಿಸಿದಂತೆ ಸುಮಾರು ಶೇ.57ರಷ್ಟು ಜನರು, ಒಂದು ವರ್ಷದ ಹಿಂದೆ ಇದೇ ಅವಧಿಗೆ ಹೋಲಿಸಿದರೆ ಪರಿಸ್ಥಿತಿ ಹದಗೆಟ್ಟಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಿರುದ್ಯೋಗವು ಭಾರತೀಯ ಆರ್ಥಿಕತೆಯ ಪ್ರಮುಖ ಹಿನ್ನೆಡೆಯ ಅಂಶಗಳಲ್ಲಿ ಒಂದಾಗಿದೆ.

ನಿರುದ್ಯೋಗ ಸಮಸ್ಯೆ
ಅಧಿಕೃತ ಮಾಹಿತಿಯ ಪ್ರಕಾರ, ನಿರುದ್ಯೋಗ ದರವು 2017-18ರಲ್ಲಿ ನಾಲ್ಕು ದಶಕಗಳ ಗರಿಷ್ಠ ಮಟ್ಟಕ್ಕೆ ತಲುಪಿದೆ.ಗೃಹ ಬಳಕೆಯ ವಸ್ತುಗಳ ಬೆಲೆಗಳು ಕಳೆದ ವರ್ಷಕ್ಕಿಂತ ಹೆಚ್ಚಾಗಿವೆ. ಖರ್ಚು ಸಹ ಏರಿಕೆಯಾಗಿದೆ. ಮುಂದಿನ ವರ್ಷದಲ್ಲಿ ಖರ್ಚಿನಲ್ಲಿ ಮತ್ತಷ್ಟು ಏರಿಕೆಯನ್ನು ನಿರೀಕ್ಷಿಸಲಾಗುತ್ತಿದೆ. ಶೇ 84.9ರಷ್ಟು ಕುಟುಂಬಸ್ಥರು ಹಣದುಬ್ಬರ ಪ್ರಸ್ತುತ ಏರಿಕೆಯಾಗಿದೆ ಎಂದಿದ್ದಾರೆ. 2019ರ ಡಿಸೆಂಬರ್‌ನಲ್ಲಿ ಗ್ರಾಹಕರ ಹಣದುಬ್ಬರವು ಶೇ 7.3ಕ್ಕಿಂತ ಹೆಚ್ಚಳವಾಗಿದೆ.

ಟಾಪ್ ನ್ಯೂಸ್

BBK11: ದಯವಿಟ್ಟು ಬಿಗ್‌ ಬಾಸ್‌ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್

BBK11: ದಯವಿಟ್ಟು ಬಿಗ್‌ ಬಾಸ್‌ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್

Belagavi: Kannadigas’ tax money wasted to please fake Gandhis: Jagadish Shettar

Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

5-kundapura

Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Shiradi

Road Project: ಶಿರಾಡಿ ಘಾಟ್‌ ಸುರಂಗ ಯೋಜನೆಗೆ ಡಿಪಿಆರ್‌ ರಚಿಸಿ: ಕೇಂದ್ರ ಸೂಚನೆ

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

BBK11: ದಯವಿಟ್ಟು ಬಿಗ್‌ ಬಾಸ್‌ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್

BBK11: ದಯವಿಟ್ಟು ಬಿಗ್‌ ಬಾಸ್‌ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್

Belagavi: Kannadigas’ tax money wasted to please fake Gandhis: Jagadish Shettar

Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.