ಭಾರತದ ಮೊದಲ ಗಗನಯಾನಕ್ಕೆ ಹಸಿರು ನಿಶಾನೆ; ಮೂವರು ಬಾಹ್ಯಾಕಾಶಕ್ಕೆ


Team Udayavani, Dec 28, 2018, 5:21 PM IST

gaganyyan-isro-700.jpg

ಹೊಸದಿಲ್ಲಿ : ಭಾರತದ ಮೊತ್ತ ಮೊದಲ ಬಾಹ್ಯಾಕಾಶ ಕಾರ್ಯಕ್ರಮವಾಗಿರುವ ಗಗನಯಾನಕ್ಕೆ ಕೇಂದ್ರ ಸಚಿವ ಸಂಪುಟ ಇಂದು ಶುಕ್ರವಾರ ಹಸಿರು ನಿಶಾನೆ ತೋರಿದೆ. 10,000 ಕೋಟಿ ರೂ. ವೆಚ್ಚದ ಗಗನಯಾನದಲ್ಲಿ ಮೂವರನ್ನು ಬಾಹ್ಯಾಕಾಶಕ್ಕೆ ಕಳುಹಿಸಲಾಗುತ್ತದೆ. 

ಬಾಹ್ಯಾಕಾಶ ಹಾರಾಟದ ಈ ವಿನೂತನ ಕಾರ್ಯಕ್ರಮದಲ್ಲಿ ಮೂವರು ಚಾಲಕ ಸಿಬಂದಿಗಳು ಕನಿಷ್ಠ ಏಳು ದಿನಗಳ ಕಾಲ ಬಾಹ್ಯಾಕಾಶದಲ್ಲಿ  ವಿಹರಿಸುತ್ತಾರೆ.  

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ  ಭಾರತದ ಮೊತ್ತ ಮೊದಲ ಬಾಹ್ಯಾಕಾಶ ಹಾರಾಟ ಕಾರ್ಯಕ್ರಮಕ್ಕೆ ಅನುಮತಿ ನೀಡುವ ನಿರ್ಧಾರವನ್ನು ಕೈಗೊಳ್ಳಲಾಯಿತು. 

ಬಾಹ್ಯಾಕಾಶ ಹಾರಾಟ ಕಾರ್ಯಕ್ರಮಕ್ಕೆ ಮಾನವ ಕ್ರಮಾಂಕದ ಜಿಎಸ್‌ಎಲ್‌ವಿ ಎಂಕೆ-111 ವ್ಯೋಮ ವಾಹನವನ್ನು ಬಳಸಲಾಗುವುದು. ಇದರಲ್ಲಿ ಮೂವರು ಸದಸ್ಯರಿಗೆ ಅವಕಾಶವಿದ್ದು ಇದರ  ಸೌಕರ್ಯವು ಕನಿಷ್ಠ ಏಳು ದಿನಗಳ ಬಾಹ್ಯಾಕಾಶ ಇರುವಿಕೆಗೆ ಅನುಕೂಲಿಸುತ್ತದೆ. 

ಗಗನಯಾನ ಕಾರ್ಯಕ್ರಮಕ್ಕೆ ಬೆಂಬಲವಾಗಿ ಅತ್ಯಗತ್ಯವಿರುವ ಚಾಲಕ ಸಿಬಂದಿ ತರಬೇತಿ, ಹಾರಾಟ ವ್ಯವಸ್ಥೆಯ ಅರಿಯುವಿಕೆ ಮತ್ತು ಭೂ-ಮೂಲಸೌಕರ್ಯಗಳನ್ನು ವ್ಯವಸ್ಥೆಗೊಳಿಸಲಾಗುವುದು. 

ಗಗನಯಾನ ಕಾರ್ಯಕ್ರಮದ ಯಶಸ್ಸಿಗೆ ಇಸ್ರೋ, ವಿವಿಧ ರಾಷ್ಟ್ರೀಯ ಸಂಘ-ಸಂಸ್ಥೆಗಳು, ಪ್ರಯೋಗಾಲಯಗಳು, ಶಿಕ್ಷಣ ತಜ್ಞರು ಮತ್ತು ಕೈಗಾರಿಕಾ ವಯಲಯದ ಉನ್ನತರೊಂದಿಗೆ ವಿಸ್ತೃತವಾಗಿ ಕೆಲಸ ಮಾಡಲಿದೆ. 

ಗಗನಯಾನ ಕಾರ್ಯಕ್ರಮಕ್ಕೆ ಮಂಜೂರಾಗಿರುವ 10,000 ಕೋಟಿ ರೂ. ಮೊತ್ತವು, ತಂತ್ರಜ್ಞಾನ ಅಭಿವೃದ್ಧಿ , ಫ್ಲೈಟ್‌ ಹಾರ್ಡ್‌ ವೇರ್‌ ಮತ್ತು ಮೂಲ ಸೌಕರ್ಯಗಳ ಒದಗಣೆ ವೆಚ್ಚವನ್ನು ಒಳಗೊಂಡಿರುತ್ತದೆ. ಎರಡು ಮಾನವ ರಹಿತ ಹಾರಾಟಗಳು ಮತ್ತು ಒಂದು ಮಾನವ ಸಹಿತ ಹಾರಾಟವನ್ನು ಗಗನಯಾನ ಕಾರ್ಯಕ್ರಮ ಭಾಗವಾಗಿ ಕೈಗೊಳ್ಳಲಾಗುವುದು. 

ಟಾಪ್ ನ್ಯೂಸ್

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

Gujarat: ಕೋಸ್ಟ್‌ ಗಾರ್ಡ್‌ ಹೆಲಿಕಾಪ್ಟರ್‌ ಪತನ; ಮೂವರು ಮೃ*ತ್ಯು

Gujarat: ಕೋಸ್ಟ್‌ ಗಾರ್ಡ್‌ ಹೆಲಿಕಾಪ್ಟರ್‌ ಪತನ; ಮೂವರು ಮೃ*ತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

puttige

Udupi;ಗೀತಾರ್ಥ ಚಿಂತನೆ 147:ಪ್ರತ್ಯಕ್ಷ ಪ್ರಮಾಣ ಮಾತ್ರದಿಂದಲೇ ಜಗದ್ವ್ಯವಹಾರ ಅಸಾಧ್ಯ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

arrested

Mangaluru; ನಕಲಿ ಆಧಾರ್, ದಾಖಲೆ ಸೃಷ್ಟಿಸಿಕೊಡುತ್ತಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.