India ಬಾಹ್ಯಾಕಾಶಕ್ಕೆ ನೆಗೆಯಲಿದ್ದಾಳೆ “ವ್ಯೋಮಮಿತ್ರ’: ಸಚಿವ ಜಿತೇಂದ್ರ ಸಿಂಗ್‌ ಮಾಹಿತಿ

"ಗಗನಯಾನ' ಪ್ರಯೋಗದ 2ನೇ ಹಂತದಲ್ಲಿ ಮಹಿಳಾ ರೊಬೋಟ್‌ ಬಳಕೆ

Team Udayavani, Aug 26, 2023, 9:19 PM IST

ಬಾಹ್ಯಾಕಾಶಕ್ಕೆ ನೆಗೆಯಲಿದ್ದಾಳೆ “ವ್ಯೋಮಮಿತ್ರ’: ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಮಾಹಿತಿ

ನವದೆಹಲಿ:ಭಾರತದ ಮಹತ್ವಾಕಾಂಕ್ಷೆಯ “ಗಗನಯಾನ’ ಯೋಜನೆಯ ಭಾಗವಾಗಿ “ವ್ಯೋಮಮಿತ್ರ’ ಎಂಬ ಮಹಿಳಾ ರೊಬೋಟ್‌ ಅನ್ನು ಬಾಹ್ಯಾಕಾಶಕ್ಕೆ ಕಳುಹಿಸಲಾಗುವುದು ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಮಾಹಿತಿ ನೀಡಿದ್ದಾರೆ.

ಶನಿವಾರ ಖಾಸಗಿ ಸುದ್ದಿವಾಹಿನಿಯೊಂದರ ಸಮಾವೇಶದಲ್ಲಿ ಮಾತನಾಡಿದ ಅವರು, ಅಕ್ಟೋಬರ್‌ ಮೊದಲ ಅಥವಾ ಎರಡನೇ ವಾರದಲ್ಲೇ ಬಾಹ್ಯಾಕಾಶನೌಕೆಯ ಪ್ರಯೋಗಿಕ ಉಡಾವಣೆ ನಡೆಯಲಿದೆ. ನಂತರದ ಪ್ರಯೋಗದಲ್ಲಿ ವ್ಯೋಮಮಿತ್ರ ರೊಬೋಟ್‌ ಅನ್ನು ಬಾಹ್ಯಾಕಾಶಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.

ಕೊರೊನಾ ಸೋಂಕಿನಿಂದಾಗಿ ಗಗನಯಾನ ಯೋಜನೆ ವಿಳಂಬವಾಯಿತು. ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸುವುದಷ್ಟೇ ಅಲ್ಲ, ವಾಪಸ್‌ ಕರೆತರುವುದೂ ಅಷ್ಟೇ ಮುಖ್ಯ. ಹೀಗಾಗಿ, ಎರಡನೇ ಆವೃತ್ತಿಯಲ್ಲಿ ಮಹಿಳಾ ರೊಬೋಟನ್ನು ಕಳುಹಿಸುತ್ತೇವೆ. ಆಕೆ ಮಾನವನು ನಡೆಸುವ ಎಲ್ಲ ಚಟುವಟಿಕೆಗಳನ್ನೂ ಅನುಸರಿಸುವ ಸಾಮರ್ಥ್ಯ ಹೊಂದಿದ್ದಾಳೆ. ಎಲ್ಲವೂ ಸಮರ್ಪಕವಾಗಿ ನಡೆದರೆ, ನಮ್ಮ ಮುಂದಿನ ಹೆಜ್ಜೆಯೂ ಸುಗಮವಾಗುತ್ತದೆ ಎಂದೂ ಸಚಿವ ಸಿಂಗ್‌ ಹೇಳಿದ್ದಾರೆ.

2020ರಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಬೆಂಗಳೂರಿನಲ್ಲಿ ವ್ಯೋಮಮಿತ್ರ ರೊಬೋಟ್‌ ಅನ್ನು ಅನಾವರಣಗೊಳಿಸಿತ್ತು.

ಕೈ-ಬಿಜೆಪಿ ಜಗಳ:
ಚಂದ್ರಯಾನ-3ರ ಲ್ಯಾಂಡರ್‌ ಚಂದ್ರನಲ್ಲಿ ಇಳಿದ ಸ್ಥಳಕ್ಕೆ ಶಿವಶಕ್ತಿ ಎಂದು ಹೆಸರು ನೀಡಲು ಪ್ರಧಾನಿ ಮೋದಿಯವರಿಗೆ ಅಧಿಕಾರ ನೀಡಿದ್ದು ಯಾರು ಎಂದು ಕಾಂಗ್ರೆಸ್‌ ನಾಯಕ ರಶೀದ್‌ ಅಳ್ವಿ ಪ್ರಶ್ನಿಸಿದ್ದಾರೆ. ಸುದ್ದಿವಾಹಿನಿಯ ಚರ್ಚೆಯ ವೇಳೆ ಅವರು ಬಗ್ಗೆ ಪ್ರಶ್ನೆಯನ್ನೆತ್ತಿದ್ದರು. “ಚಂದ್ರನ ಮೇಲಿನ ಸ್ಥಳಕ್ಕೆ ಪ್ರಧಾನಿ ಹೆಸರು ಇರಿಸುವುದು ಎಂದರೆ ಅದು ಹಾಸ್ಯಾಸ್ಪದ. ಅವರಿಗೆ ಅಂಥ ಅಧಿಕಾರ ಕೊಟ್ಟವರು ಯಾರು? ಈ ವಿಚಾರ ಕೇಳಿದ ಜಗತ್ತಿನ ಜನರು ನಮ್ಮನ್ನು ನೋಡಿ ಲೇವಡಿ ಮಾಡಲಿದ್ದಾರೆ. ಚಂದ್ರನ ದಕ್ಷಿಣ ಭಾಗದಲ್ಲಿ ಇಳಿದದ್ದು ನಮ್ಮ ಸಾಧನೆಯನ್ನು ಒಪ್ಪಿಕೊಳ್ಳೋಣ’ ಎಂದು ಹೇಳಿದ್ದಾರೆ.

ಅದಕ್ಕೆ ತಿರುಗೇಟು ನೀಡಿದ ಬಿಜೆಪಿ ನಾಯಕ ಶೆಹಜಾದ್‌ ಪೂನಾವಾಲ “ಕಾಂಗ್ರೆಸ್‌ ಹಿಂದೂ ವಿರೋಧಿ ಎನ್ನುವುದನ್ನು ಮತ್ತೂಮ್ಮೆ ಸ್ಪಷ್ಟಪಡಿಸಿದೆ. ಹಿಂದೊಮ್ಮೆ ಆ ಪಕ್ಷ ರಾಮ ಇದ್ದದ್ದು ಹೌದೇ ಎಂದು ಪ್ರಶ್ನೆ ಮಾಡಿತ್ತು. ಶಿವಶಕ್ತಿ ಮತ್ತು ತಿರಂಗ ಎನ್ನುವ ಹೆಸರು ದೇಶಕ್ಕೆ ಸಂಬಂಧ ಇರುವ ಹೆಸರು. ಲ್ಯಾಂಡರ್‌ ವಿಕ್ರಮ ಹೆಸರನ್ನು ವಿಕ್ರಂ ಸಾರಾಭಾಯಿ ಹೆಸರಿನ ನೆನಪಿನಲ್ಲಿ ನೀಡಲಾಗಿದೆ. ಯುಪಿಎ ಅವಧಿಯಲ್ಲಿ ಆಗಿದ್ದರೆ ಚಂದ್ರಯಾನಕ್ಕೆ ಇಂದಿರಾ ಪಾಯಿಂಟ್‌, ರಾಜೀವ್‌ ಪಾಯಿಂಟ್‌’ ಎಂದು ಹೆಸರಿಸುತ್ತಿದ್ದರು ಎಂದು ಟೀಕಿಸಿದ್ದಾರೆ. 2008ರಲ್ಲಿ ಚಂದ್ರಯಾನ-2 ಇಳಿದಿದ್ದ ಸ್ಥಳಕ್ಕೆ “ಜವಾಹರ್‌ಪಾಯಿಂಟ್‌’ ಎಂಬ ಹೆಸರು ನೀಡಲಾಗಿತ್ತು.

ಶಿವಶಕ್ತಿ ಸುತ್ತ ರೋವರ್‌ ಪ್ರದಕ್ಷಿಣೆ
ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3ರ ಕುರಿತಾದ ನೂತನ ವಿಡಿಯೋ ಒಂದನ್ನು ಶನಿವಾರ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ)ಹಂಚಿಕೊಂಡಿದ್ದು, ಅದರದಲ್ಲಿ ಚಂದ್ರನ ಮೇಲ್ಮೆ„ನಲ್ಲಿ ಲ್ಯಾಂಡರ್‌ ಇಳಿದಿರುವ ಜಾಗ “ಶಿವಶಕ್ತಿ’ಯ ಸುತ್ತಾ ಪ್ರಜ್ಞಾನ್‌ ರೋವರ್‌ ತಿರುಗುವುದನ್ನು ಸೆರೆ ಹಿಡಿಯಲಾಗಿದೆ. ಇಸ್ರೋದ ಎಕ್ಸ್‌ (ಟ್ವಿಟರ್‌) ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ರೋವರ್‌ ಯಶಸ್ವಿಯಾಗಿ ಚಂದ್ರನ ರಹಸ್ಯಗಳನ್ನು ಅನ್ವೇಷಿಸುತ್ತಿರುವುದು ಕಂಡು ಬಂದಿದೆ.

ಮತ್ತೊಮ್ಮೆ ಪ್ರಶಂಸೆ:
ಭಾರತದ ಸಾಧನೆಯನ್ನು ನೆರೆ ರಾಷ್ಟ್ರ ಪಾಕಿಸ್ತಾನ ಪ್ರಶಂಸಿಸುವುದು ಮುಂದುವರಿಸಿದೆ. ಪಾಕಿಸ್ತಾನದ ವಿದೇಶಾಂಗ ಕಚೇರಿ ವ್ಯವಹಾರಗಳ ವಕ್ತಾರೆ ಮುಮ್ತಾಜ್‌ ಝಾರಾ ಬಲೂಚ್‌, ಶ್ರೀಮಂತ ರಾಷ್ಟ್ರಗಳು ಈ ವರೆಗೆ ಸಾಧಿಸಲು ಅಸಾಧ್ಯವಾದದ್ದನ್ನು ಭಾರತ ಕಡಿಮೆ ವೆಚ್ಚದಲ್ಲಿ ಸಾಧಿಸಿ ತೋರಿಸಿದೆ. ಚಂದ್ರಯಾನ-3 ಅತಿದೊಡ್ಡ ವೈಜ್ಞಾನಿಕ ಸಾಧನೆಯಾಗಿದ್ದು, ಅದರ ಸಂಪೂರ್ಣ ಶ್ರೇಯಸ್ಸು ಇಸ್ರೋ ವಿಜ್ಞಾನಿಗಳಿಗೆ ಸಲ್ಲಬೇಕು ಎಂದಿದ್ದಾರೆ.

ಟಾಪ್ ನ್ಯೂಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMW ಕಾರು, 4BHK ಫ್ಲಾಟ್ ಗಿಫ್ಟ್

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.