ಬರೋಬ್ಬರಿ 72 ವರ್ಷ ಹಳೆಯ ಕೇಸು ಕೊನೆಗೂ ಇತ್ಯರ್ಥ!
ಜಡ್ಜ್ ಹುಟ್ಟುವುದಕ್ಕೂ 10 ವರ್ಷ ಮೊದಲು ದಾಖಲಾಗಿದ್ದ ಪ್ರಕರಣ
Team Udayavani, Jan 18, 2023, 7:20 AM IST
ಕೋಲ್ಕತ್ತಾ:ಬರೋಬ್ಬರಿ 72 ವರ್ಷಗಳಿಂದಲೂ ಇತ್ಯರ್ಥವಾಗದೇ ಉಳಿದಿದ್ದ ದೇಶದ ಅತ್ಯಂತ ಹಳೆಯ ಪ್ರಕರಣವೊಂದು ಈಗ ಇತ್ಯರ್ಥಗೊಂಡಿದೆ!
ಮತ್ತೊಂದು ವಿಶೇಷವೆಂದರೆ, ಸೋಮವಾರ ಈ ಪ್ರಕರಣವನ್ನು ಇತ್ಯರ್ಥಗೊಳಿಸಿದ ಕಲ್ಕತ್ತಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಅವರು ಜನಿಸಿದ್ದೇ ಈ ಕೇಸು ದಾಖಲಾದ 10 ವರ್ಷಗಳ ಬಳಿಕ!
ಹೌದು, ಅಚ್ಚರಿಯಾದರೂ ಇದು ಸತ್ಯ. 1951ರ ಜ.1ರಂದು ಬರ್ಹಾಂಪುರ ಬ್ಯಾಂಕ್ ಲಿ.ನ ವಿಸರ್ಜನೆ ಪ್ರಶ್ನಿಸಿ ಅರ್ಜಿ ಸಲ್ಲಿಕೆಯಾಗಿತ್ತು.
ಕಳೆದ ವರ್ಷ ಸೆಪ್ಟೆಂಬರ್‌ನಲ್ಲೂ ಈ ಅರ್ಜಿ ವಿಚಾರಣೆಗೆ ಬಂದಿತ್ತಾದರೂ, ಸಂಬಂಧಪಟ್ಟ ಯಾರೂ ಕೋರ್ಟ್‌ಗೆ ಹಾಜರಾಗಿರಲಿಲ್ಲ. ಈ ಕುರಿತು ಪರಿಶೀಲಿಸಿದಾಗ, 2006ರಲ್ಲೇ ಪ್ರಕರಣವು ಮಧ್ಯಸ್ಥಿಕೆ ಮೂಲಕ ಇತ್ಯರ್ಥವಾಗಿದೆ ಎಂಬ ವಿಚಾರ ಗೊತ್ತಾಯಿತು.
ಹೀಗಾಗಿ, ಮುಖ್ಯ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಅವರು, ಕೇಸು ಇತ್ಯರ್ಥಗೊಂಡಿರುವುದಾಗಿ ಪ್ರಕಟಿಸಿದರು.
1952ರಲ್ಲಿ ದಾಖಲಾಗಿರುವ ಒಟ್ಟು 5 ಪ್ರಕರಣಗಳು ಇನ್ನೂ ಇತ್ಯರ್ಥಕ್ಕೆ ಬಾಕಿಯಿವೆ. ಈ ಪೈಕಿ 2 ಪ್ರಕರಣಗಳು ಬಾಕಿ ಉಳಿದಿರುವುದು ಕಲ್ಕತ್ತಾ ಹೈಕೋರ್ಟ್‌ನಲ್ಲೇ. ಮತ್ತೊಂದು ಪ್ರಕರಣ ಮದ್ರಾಸ್ ಹೈಕೋರ್ಟ್‌ನಲ್ಲಿದ್ದರೆ, ಉಳಿದವು ಬಂಗಾಳದ ಮಾಲ್ಡಾದ ಸಿವಿಲ್ ಕೋರ್ಟ್‌ನಲ್ಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.