ಇದು ಭಾರತದ ಏಕೈಕ ಜೀವಂತ ಜ್ವಾಲಾಮುಖಿ! ಎಲ್ಲಿದೆ ಗೊತ್ತಾ…
Team Udayavani, Feb 18, 2017, 5:19 PM IST
ಪಣಜಿ: ಜ್ವಾಲಾಮುಖಿ ಸ್ಫೋಟ, ಜ್ವಾಲಾಮುಖಿ ಹೀಗೆ ವಿದೇಶದಲ್ಲಿ ಸಂಭವಿಸುವ ಘಟನೆಗಳ ಬಗ್ಗೆಯೇ ಹೆಚ್ಚು ವರದಿಯಾಗೋದನ್ನು ಓದಿರುತ್ತೀರಿ. ಆದರೆ ಭಾರತದಲ್ಲಿಯೂ ಜ್ವಾಲಾಮುಖಿ ಹೊಂದಿರುವ ಪ್ರದೇಶವೊಂದಿದೆ! ನೂರಾರು ವರ್ಷಗಳಿಂದ ಸ್ತಬ್ಧವಾಗಿದ್ದ ಈ ಜ್ವಾಲಾಮುಖಿ ಇದೀಗ ಜನವರಿ ತಿಂಗಳಲ್ಲಿ 4 ಗಂಟೆಗಳ ಕಾಲ ಹೊಗೆಯುಗುಳಿರುವ ವಿಷಯ ಬೆಳಕಿಗೆ ಬಂದಿದೆ.
ಹೌದು ಭಾರತದ ಏಕೈಕ ಜೀವಂತ ಜ್ವಾಲಾಮುಖಿ ಎಂದೇ ಹೆಸರಾಗಿರುವ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಪ್ರದೇಶ ಸಮೀಪದ ಬರ್ರೆನ್ ದ್ವೀಪ ಪ್ರದೇಶದಲ್ಲಿ ಈ ಜ್ವಾಲಾಮುಖಿ ಇದೆ ಎಂದು ಗೋವಾ ಮೂಲದ ನ್ಯಾಷನಲ್ ಇನ್ಸ್ ಟಿಟ್ಯೂಟ್ ಆಫ್ ಓಸಿಯನೋಗ್ರಫಿ(ಎನ್ಐಓ) ವಿಜ್ಞಾನಿಗಳು ಬಿಡುಗಡೆ ಮಾಡಿರುವ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
ಎನ್ಐಓ ಸಂಶೋಧನಾ ತಂಡದ ಪ್ರಕಾರ, ಜನವರಿ 23ರಂದು ಜ್ವಾಲಾಮುಖಿ ಪ್ರದೇಶದಲ್ಲಿ ಸ್ವಲ್ಪ ಪ್ರಮಾಣದ ಕೆಂಪು ದ್ರವವನ್ನು ಹೊರ ಸೂಸಿದೆ. ಹಾಗಾಗಿ ಮತ್ತೆ ಜ್ವಾಲಾಮುಖಿ ಸ್ಫೋಟಗೊಳ್ಳಬಹುದೇ ಎಂಬ ಆತಂಕ ಸಂಶೋಧಕರದ್ದು. ಈಗಾಗಲೇ ಜ್ವಾಲಾಮುಖಿಯ ಬೂದಿಯನ್ನು ಆಧುನಿಕ ತಂತ್ರಜ್ಞಾನದ ಮೂಲಕ ಸಂಗ್ರಹಿಸಿದ್ದು, ಅದರ ಬಗ್ಗೆ ಪರೀಕ್ಷೆ ನಡೆಸಲಾಗುತ್ತಿದೆ ಎಂದು ವಿವರಿಸಿದೆ.
ಸುಮಾರು 150 ವರ್ಷಗಳ ಹಿಂದೆ ಇಲ್ಲಿ ಜ್ವಾಲಾಮುಖಿ ಸ್ಫೋಟಗೊಂಡಿದೆ ಎಂಬುದು ಸಂಶೋಧಕರ ಅಭಿಪ್ರಾಯ. ಆದರೆ ಈ ಸಂಶೋಧಕರ ತಂಡ ದ್ವೀಪ ಪ್ರದೇಶದೊಳಕ್ಕೆ ಹೋಗಿಲ್ಲ ಎಂದು ಪ್ರಕಟಣೆ ಹೇಳಿದೆ. ಯಾಕೆಂದರೆ ಇದು ಅತೀ ಅಪಾಯಕಾರಿ ಪ್ರದೇಶವಾಗಿದೆಯಂತೆ. ಬರ್ರೆನ್ ದ್ವೀಪಪ್ರದೇಶ ಅಂಡಮಾನ್ ಈಶಾನ್ಯ ದಿಕ್ಕಿನಿಂದ ಸುಮಾರು 140 ಕಿಲೋ ಮೀಟರ್ ದೂರದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.