ಇನ್ಫಿ ಷೇರುಗಳ ಮರುಖರೀದಿ ಘೋಷಣೆ
Team Udayavani, Aug 20, 2017, 8:10 AM IST
ಹೊಸದಿಲ್ಲಿ: ಐಟಿ ದಿಗ್ಗಜ ಇನ್ಫೋಸಿಸ್‌ಗೆ ಸಿಇಒ ವಿಶಾಲ್ ಸಿಕ್ಕಾ ಅವರು ದಿಢೀರ್ ರಾಜೀನಾಮೆ ನೀಡಿದ ಬೆನ್ನಲ್ಲೇ ಕಂಪೆನಿಯು 13 ಸಾವಿರ ಕೋಟಿ ರೂ. ಮೌಲ್ಯದ ಷೇರುಗಳ ಮರುಖರೀದಿಯ ಘೋಷಣೆ ಮಾಡಿದೆ. ಷೇರು ಮಾರುಕಟ್ಟೆಯಲ್ಲಿ ನಕಾರಾತ್ಮಕ ಪರಿಣಾಮ ಬೀರುವುದನ್ನು ತಪ್ಪಿಸಲು ಕಂಪೆನಿ ಈ ನಿರ್ಧಾರ ಕೈಗೊಂಡಿದೆ.
ಅದರಂತೆ, ಇನ್ಫೋಸಿಸ್ ಕಂಪೆನಿಯು ತನ್ನದೇ ಆದ 11.3 ಕೋಟಿ ಷೇರುಗಳನ್ನು ಹೂಡಿಕೆದಾರರಿಂದ ಖರೀದಿಸಲಿದೆ. ಇದಕ್ಕಾಗಿ ಕಂಪೆನಿ 13 ಸಾವಿರ ಕೋಟಿ ರೂ. ವೆಚ್ಚ ಮಾಡಲಿದೆ. ಒಂದು ಷೇರಿಗೆ 1,150 ರೂ.ಗಳ ಲೆಕ್ಕದಲ್ಲಿ ಖರೀದಿ ನಡೆಯಲಿದೆ. ಅಂದರೆ, ಶುಕ್ರವಾರದ ವಹಿವಾಟಿನ ಅಂತ್ಯದ ವೇಳೆಗೆ ಷೇರು ದರ ಏನಿತ್ತೋ ಅದರ ಶೇ.25ರಷ್ಟು ಹೆಚ್ಚು ಮೊತ್ತಕ್ಕೆ ಖರೀದಿಸುವ ಮೂಲಕ ಮಾರುಕಟ್ಟೆಯಲ್ಲಿ ಕಂಪೆನಿಯ ಷೇರು ದರದ ಮೇಲೆ ನಕಾರಾತ್ಮಕ ಪರಿಣಾಮ ಬೀರುವುದನ್ನು ತಡೆಯಲಾಗುತ್ತದೆ.
ನೇಮಕವೇ ತಲೆನೋವು
ಏತನ್ಮಧ್ಯೆ, ಸಿಕ್ಕಾ ರಾಜೀನಾಮೆಯಿಂದ ತೆರವಾದ ಸಿಇಒ ಸ್ಥಾನವನ್ನು ಭರ್ತಿ ಮಾಡುವುದೇ ಇದೀಗ ಇನ್ಫೋಸಿಸ್‌ಗೆ
ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈಗಾಗಲೇ ಕಂಪೆನಿಯ ಆಡಳಿತ ಮಂಡಳಿಯ ಸದಸ್ಯರ ನಡುವೆ ಭಿನ್ನಾಭಿಪ್ರಾಯವಿದೆ. ಹೀಗಿರುವಾಗ, ಸಿಇಒ ಸ್ಥಾನಕ್ಕೆ ಯಾರನ್ನು ನೇಮಕ ಮಾಡುವುದು, ಅದಕ್ಕೆ ಮಂಡಳಿಯ ಎಲ್ಲ ಸದಸ್ಯರು ಒಪ್ಪುತ್ತಾರೋ ಇಲ್ಲವೋ ಎಂಬ ಪ್ರಶ್ನೆ ಮೂಡಿದೆ. ಅಂದು ಬಾಹ್ಯ ಅಭ್ಯರ್ಥಿಯಾದ ವಿಶಾಲ್ ಸಿಕ್ಕಾ ಅವರನ್ನು ನೇಮಕ ಮಾಡುವಾಗಲೇ ಹಲವು ಸವಾಲುಗಳು ಎದುರಾಗಿದ್ದವು. ಈಗ ಪರಿಸ್ಥಿತಿ ಇನ್ನಷ್ಟು ಕ್ಲಿಷ್ಟಕರವಾಗಿದೆ ಎಂದು ಕಂಪೆನಿ ಮೂಲಗಳು ಹೇಳಿವೆ.
ಕಂಪೆನಿಯು ಇನ್ನೂ ಯಾವುದೇ ಬಾಹ್ಯ ಅಭ್ಯರ್ಥಿಯ ನೇಮಕದ ಕುರಿತು ಚಿಂತನೆ ನಡೆಸಿಲ್ಲ. ಇನ್ನು ಕಂಪೆನಿಯೊಳಗೇ ಇರುವವರ ಬಗ್ಗೆ ಹೇಳುವುದಾದರೆ ಮಧ್ಯಂತರ ಸಿಇಒ ಪ್ರವೀಣ್ ರಾವ್, ಸಿಎಫ್ಒ ರಂಗನಾಥ್ ಡಿ. ಮಾವಿನಕೆರೆ, ಉಪ ಸಿಒಒ ರವಿಕುಮಾರ್ ಎಸ್., ಬ್ಯಾಂಕಿಂಗ್, ಹಣಕಾಸು ಮತ್ತು ವಿಮಾ ಸೇವೆಗಳ ಮುಖ್ಯಸ್ಥ ಮೋಹಿತ್ ಜೋಷಿ ಮತ್ತಿತರರ ಹೆಸರುಗಳು ಸಿಇಒ ಹುದ್ದೆಗೆ ಕೇಳಿಬರುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.