ಭಾರತದ ಪ್ರಮುಖ ಸಾಫ್ಟ್ ವೇರ್ ಕಂಪೆನಿಯಾದ ಇನ್ಫೋಸಿಸ್ ರಷ್ಯಾ ಕಚೇರಿ ಬಂದ್?
Team Udayavani, Apr 2, 2022, 7:55 AM IST
ಹೊಸದಿಲ್ಲಿ: ಭಾರತದ ಪ್ರಮುಖ ಸಾಫ್ಟ್ ವೇರ್ ಕಂಪೆನಿಯಾದ ಇನ್ಫೋಸಿಸ್ ಸಂಸ್ಥೆಯು ರಷ್ಯಾದಲ್ಲಿರುವ ತನ್ನ ಶಾಖೆಯನ್ನು ಮುಚ್ಚಲು ನಿರ್ಧರಿಸಿ ರುವುದಾಗಿ ಬಿಬಿಸಿ ವರದಿ ಮಾಡಿದೆ.
ರಷ್ಯಾವು ಉಕ್ರೇನ್ನ ಮೇಲೆ ದಾಳಿ ಆರಂಭಿಸಿದಾಗಿನಿಂದ ಮಾಸ್ಕೋದಲ್ಲಿರುವ ತನ್ನ ಕಚೇರಿಯನ್ನು ಮುಚ್ಚುವ ಬಗ್ಗೆ ಇನ್ಫೋಸಿಸ್ ಚಿಂತನೆ ನಡೆಸಿದ್ದು ಅದರಂತೆ ಈಗ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.
ಇದೇ ಶಾಖೆಯಲ್ಲಿ ಇನ್ಫೋಸಿಸ್ನ ಸಹ ಸಂಸ್ಥಾಪಕ ನಾರಾಯಣ ಮೂರ್ತಿಯವರ ಮಗಳಾದ ಅಕ್ಷತಾ ಮೂರ್ತಿ, 3,900 ಕೋಟಿ ರೂ. ಮೌಲ್ಯದ ಷೇರುಗಳನ್ನು ಹೊಂದಿದ್ದಾರೆ.
ಅಕ್ಷತಾ ಅವರು ಯುನೈಟೆಡ್ ಕಿಂಗ್ಡಮ್ನ ಹಣಕಾಸು ಸಚಿವ ರಿಷಿ ಸುನಕ್ರವರ ಪತ್ನಿ. ಉಕ್ರೇನ್ ಮೇಲೆ ಯುದ್ಧ ಆರಂಭವಾದ ಅನಂತರ ಯು.ಕೆ. ಸರಕಾರ ರಷ್ಯಾದ ಮೇಲೆ ಆರ್ಥಿಕ ದಿಗ್ಬಂಧನ ಹೇರಿರುವ ಹಿನ್ನೆಲೆಯಲ್ಲಿ, ಅಕ್ಷತಾ ಅವರು ರಷ್ಯಾದಲ್ಲಿರುವ ಇನ್ಫೋಸಿಸ್ ಕಚೇರಿಯಿಂದ ಆದಾಯ ಗಳಿಸುತ್ತಿರುವುದು ವಿವಾದಕ್ಕೆ ಕಾರಣವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.