Chandigarh: ಆಪ್‌ಗೆ ದೊಡ್ಡ ಹೊಡೆತ… 3 ಕೌನ್ಸಿಲರ್‌ಗಳು ಬಿಜೆಪಿಗೆ ಸೇರ್ಪಡೆ
Team Udayavani, Feb 19, 2024, 9:00 AM IST
ಚಂಡೀಗಢ: ಆಮ್ ಆದ್ಮಿ ಪಕ್ಷದ ಮೂವರು ಕೌನ್ಸಿಲರ್‌ಗಳು ಚಂಡೀಗಢ ಪೂನಂ ದೇವಿ, ನೇಹಾ ಮುಸಾವತ್ ಮತ್ತು ಗುರ್ಚರಣ್ ಕಲಾ ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.
ಮೂವರು ಕೌನ್ಸಿಲರ್‌ಗಳು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರನ್ನು ಭೇಟಿಯಾದರು. ವಿನೋದ್ ತಾವ್ಡೆ ಚಂಡೀಗಢ ಮೇಯರ್ ಚುನಾವಣೆಯ ಉಸ್ತುವಾರಿಯೂ ಆಗಿದ್ದಾರೆ. ಇದರೊಂದಿಗೆ ಮೇಯರ್ ಚುನಾವಣೆಯಲ್ಲಿ ಅಕ್ರಮ ನಡೆದ ಪ್ರಕರಣದ ವಿಚಾರಣೆಗೂ ಮುನ್ನವೇ ಆಪ್ ಗೆ ದೊಡ್ಡ ಹೊಡೆತ ಬಿದ್ದಂತಾಗಿದೆ.
ಚಂಡೀಗಢದಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್‌ನ ಇನ್ನೂ ಕೆಲವು ಕೌನ್ಸಿಲರ್‌ಗಳು ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಂದಿ ಬಿಜೆಪಿ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆಮ್ ಆದ್ಮಿ ಪಕ್ಷ ಸುಳ್ಳು ಭರವಸೆಗಳನ್ನು ನೀಡುತ್ತಿದೆ ನೇಹಾ ಮುಸಾವತ್ ಆರೋಪ :
ಬಿಜೆಪಿ ಸೇರಿದ ನೇಹಾ ಮುಸಾವತ್ ಮಾತನಾಡಿ ‘ಆಮ್ ಆದ್ಮಿ ಪಕ್ಷ ನನ್ನನ್ನು ಮೇಯರ್ ಅಭ್ಯರ್ಥಿಯನ್ನಾಗಿ ಮಾಡಿದೆ ಎಂದು ಸುಳ್ಳು ಭರವಸೆ ನೀಡಿದೆ. ಮೇಯರ್ ಹುದ್ದೆಗೆ ನನ್ನನ್ನು ಅತ್ಯಂತ ವಿದ್ಯಾವಂತ ಅಭ್ಯರ್ಥಿ ಎಂದು ಪರಿಗಣಿಸಲಾಗಿತ್ತು, ಆದರೆ ಸಮಯ ಬಂದಾಗ ಬೇರೆಯವರನ್ನು ಅಭ್ಯರ್ಥಿ ಎಂದು ಘೋಷಿಸಿ ಸುಳ್ಳು ಭರವಸೆ ನೀಡುವ ಮೂಲಕ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಬಡವರು, ದಲಿತರ ಕಲ್ಯಾಣಕ್ಕಾಗಿ ಪ್ರಧಾನಿ ಮೋದಿ ಅವರು ಮಾಡಿರುವ ಕೆಲಸಗಳಿಂದ ಪ್ರಭಾವಿತನಾಗಿದ್ದೇನೆ ಅದೇ ಕಾರಣದಿಂದ ಇಂದು ಬಿಜೆಪಿ ಸೇರುತ್ತಿದ್ದೇನೆ ಎಂದು ಹೇಳಿದ್ದಾರೆ.
ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರು ಚಂಡೀಗಢ ಕೌನ್ಸಿಲರ್‌ಗಳಾದ ಪೂನಂ ದೇವಿ, ನೇಹಾ ಮುಸಾವತ್, ಗುರ್ಚರಣ್ ಕಲಾ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಬಿಜೆಪಿ ಅವರನ್ನು ಗೌರವಿಸುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: Court ವಿಚಾರಣೆಗೂ ಮೊದಲೇ ಚಂಡೀಗಢ ಮೇಯರ್ ಸ್ಥಾನಕ್ಕೆ ಬಿಜೆಪಿಯ ಮನೋಜ್ ಸೋಂಕರ್ ರಾಜೀನಾಮೆ
#WATCH | Delhi: Neha Musawat, who joined the BJP today, says, “AAP party made false promises to us. Today after getting inspired by the works of PM Modi, I have joined BJP…”
She was Aam Aadmi Party Chandigarh councillor. https://t.co/nQZTWeFdeC pic.twitter.com/c00mk2hkG4
— ANI (@ANI) February 18, 2024
#WATCH | Delhi: Punam Devi, who joined the BJP today says, “I joined BJP after getting inspired from the works done by PM Modi… I have left AAP because they are a fake party…”
She was Aam Aadmi Party Chandigarh councillor. https://t.co/nQZTWeFdeC pic.twitter.com/izejCwf9vw
— ANI (@ANI) February 18, 2024
#WATCH | Delhi: National General Secretary Vinod Tawde says, “Chandigarh councillors Punam Devi, Neha Musawat, and Gurcharan Kala have joined BJP today. They are unhappy with the behaviour of their party with them. BJP will respect them and they will help in the development of… https://t.co/nQZTWeFdeC pic.twitter.com/yIYScUg42O
— ANI (@ANI) February 18, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.