ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು
ಎರಡೂ ಕಡೆಯವರು ಈ ಬಗ್ಗೆ ಊಹಾಪೋಹಾಗಳನ್ನು ಸೃಷ್ಟಿಸಿಕೊಳ್ಳಬಾರದು
Team Udayavani, May 4, 2024, 12:02 PM IST
ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧಿಸಿದಂತೆ ಮಾ.21ರಿಂದಲೂ ಬಂಧನದಲ್ಲಿರುವ ದಿಲ್ಲಿ ಸಿಎಂ ಅರವಿಂದ್
ಕೇಜ್ರಿವಾಲ್‌ಗೆ ಕೊನೆಗೂ ಮಧ್ಯಂತರ ಜಾಮೀನು ಸಿಗುವ ಸೂಚನೆ ಸಿಕ್ಕಿದೆ. ಖುದ್ದು ಸುಪ್ರೀಂಕೋರ್ಟ್ ಈ ಬಗ್ಗೆ ಸುಳಿವು ನೀಡಿದ್ದು, ಲೋಕಸಭೆ ಚುನಾವಣೆ ದೃಷ್ಟಿಯಿಂದ ಮಧ್ಯಂತರ ಜಾಮೀನು ವಿಚಾರವನ್ನು ಪರಿಗಣಿಸುವುದಾಗಿ ಹೇಳಿದೆ.
ಇದನ್ನೂ ಓದಿ:ಬಿಗ್‌ಬಾಸ್ ವಿಜೇತ ಎಲ್ವಿಶ್ ಯಾದವ್ ವಿರುದ್ಧ ಅಕ್ರಮ ವರ್ಗಾವಣೆ ಕೇಸ್ ದಾಖಲಿಸಿದ ಇ.ಡಿ
ಬಂಧನ ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರ ನ್ಯಾಯಪೀಠವು ಆಲಿಸಿದೆ.ಅರ್ಜಿ ವಿಚಾರಣೆ ಶುಕ್ರವಾರ ಪೂರ್ಣಗೊಳ್ಳದ ಕಾರಣ ಮೇ 7ರ ಮಂಗಳವಾರಕ್ಕೆ ಮುಂದಿನ ವಿಚಾರಣೆಗೆ ದಿನಾಂಕ ನಿಗದಿ ಪಡಿಸಿದೆ.
ಮಂಗಳವಾರವೂ ವಿಚಾರಣೆ ಪೂರ್ಣಗೊಳ್ಳದೇ ಹೋದ ಸಂದರ್ಭದಲಿ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಧ್ಯಂತರ ಜಾಮೀನು ಕುರಿತಾದ ವಿಷಯವನ್ನು ಪರಿಗಣಿಸುವ ಸಾಧ್ಯತೆಗಳಿದೆ. ಈ ಹಿನ್ನೆಲೆಯಲ್ಲಿ ವಾದ ಮಂಡಿಸಲು ಸಿದ್ದರಾಗಿ ಬರುವಂತೆಯೂ ಜಾರಿ ನಿರ್ದೇನಾಲಯದ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್
ಜನರಲ್ ಎಸ್.ವಿ.ರಾಜು ಅವರಿಗೆ ತಿಳಿಸಿದೆ. ಜತೆಗೆ ಮಧ್ಯಂತರ ಜಾಮೀನು ಅರ್ಜಿಯನ್ನು ಪರಿಗಣಿಸುವುದಾಗಿ ಹೇಳಿದ್ದೇವೆ ವಿನಃ ಜಾಮೀನು ನೀಡುತ್ತೇವೆ ಎಂದಿಲ್ಲ ಹಾಗಾಗಿ ಎರಡೂ ಕಡೆಯವರು ಈ ಬಗ್ಗೆ ಊಹಾಪೋಹಾಗಳನ್ನು ಸೃಷ್ಟಿಸಿಕೊಳ್ಳಬಾರದು ಎಂದೂ ನ್ಯಾಯಪೀಠ ಹೇಳಿದೆ.
ಅನಾರೋಗ್ಯ ಪೀಡಿತ ಪತ್ನಿಯ ಭೇಟಿಗೆ ಸಿಸೋಡಿಯಾಗೆ ಹೈಕೋರ್ಟ್ ಸಮ್ಮತಿ
ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧಿಸಿದ ಪ್ರಕರಣದಲ್ಲಿ ಜೈಲಿನಲ್ಲಿರುವ ಆಪ್ ನಾಯಕ ಮನೀಷ್ ಸಿಸೋಡಿಯಾ ಅವರು ವಾರಕ್ಕೊಮ್ಮೆ ತಮ್ಮ ಅನಾರೋಗ್ಯ ಪೀಡಿತ ಪತ್ನಿಯನ್ನು ಭೇಟಿಯಾಗುವುದಕ್ಕೆ ದೆಹಲಿ ಹೈಕೋರ್ಟ್ ಅನುಮತಿ ನೀಡಿದೆ.
ಅಕ್ರಮ ಹಣವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಸಿಸೋಡಿಯಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಏ.30ರಂದು ವಿಚಾರಣಾ ನ್ಯಾಯಾಲಯ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಮೂರ್ತಿ ಸ್ವರ್ಣಕಾಂತ್ ಶರ್ಮಾ ಅವರ ಪೀಠವು ಸಿಸೋಡಿ ಯಾಗೆ ಜಾಮೀನು ನೀಡಬಹುದೇ ಎಂಬ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಇಡಿ ಮತ್ತು ಸಿಬಿಐಗೆ ನೋಟಿಸ್ ಜಾರಿಗೊಳಿಸಿದೆ. ಅರ್ಜಿಗಳು ವಿಚಾರಣೆ ಯಲ್ಲಿರುವಾಗಲೂ ವಾರಕ್ಕೊಮ್ಮೆ ಸಿಸೋಡಿಯಾ ಪತ್ನಿಯನ್ನು ಭೇಟಿಯಾಗಬಹುದೆಂದು ಸ್ಥಳೀಯ ಕೋರ್ಟ್ ಆದೇಶವನ್ನು ಮುಂದುವರಿಸಲು ಸಮ್ಮತಿಸಿದೆ. ಮೇ 8ಕ್ಕೆ ಮುಂದಿನ ವಿಚಾರಣೆ ನಿಗದಿಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.