Semiconductor sector ಬೆಂಗಳೂರು, ದಿಲ್ಲಿ ಸಂಸ್ಥೆಗಳಿಂದ ಹೂಡಿಕೆ ಶೀಘ್ರ
ಗುಜರಾತ್ ಸರ ಕಾರದ ಅಧಿಕಾರಿಗಳ ಹೇಳಿಕೆ
Team Udayavani, Dec 31, 2023, 12:31 AM IST
ಅಹ್ಮದಾಬಾದ್: ಭಾರತದ ಸೆಮಿಕಂಡಕ್ಟರ್ ತಯಾರಿಕೆ ಯೋಜನೆಗೆ ಪೂರಕವಾಗಿ ಗುಜರಾತ್ ಸರ ಕಾರ 2022ರಲ್ಲಿ ಜಾರಿಗೆ ತಂದ ಸೆಮಿ ಕಂಡಕ್ಟರ್ ನೀತಿ ಬಗ್ಗೆ ಬೆಂಗಳೂರು, ದಿಲ್ಲಿ ಸೇರಿದಂತೆ ಹಲವು ವಿದೇಶಿ ಸಂಸ್ಥೆಗಳೂ ಕೂಡ ಆಕರ್ಷಿತವಾಗಿದ್ದು, ಗುಜರಾತ್‌ನಲ್ಲಿ ಈ ಸಂಸ್ಥೆಗಳು ಹೂಡಿಕೆ ಮಾಡಲು ಯೋಜಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜನವರಿಯಲ್ಲಿ ನಡೆಯಲಿರುವ ವೈಬ್ರೆಂಟ್ ಗುಜರಾತ್ ಗ್ಲೋಬಲ್ ಶೃಂಗಸಭೆ 2024ಕ್ಕೂ ಮುನ್ನ ಗುಜರಾತ್ ಸರ ಕಾರದ ಅಧಿಕಾರಿಗಳು ಸಭೆಯೊಂದನ್ನು ಆಯೋಜಿಸಿದ್ದರು. ಆ ಸಭೆಯಲ್ಲಿ ಈ ವಿಚಾರವನ್ನು ಹಂಚಿಕೊಂಡಿದ್ದಾರೆ ಎಂದು ರಾಜ್ಯ ಸರ ಕಾರ ತಿಳಿಸಿದೆ.
ಮಾಹಿತಿಗಳ ಪ್ರಕಾರ, ಜಾಗತಿಕ ಮಟ್ಟದಲ್ಲಿ ಸೆಮಿಕಂಡಕ್ಟರ್ ಪೂರೈಕೆ ಸರಪಳಿಯನ್ನು ಸಮ ರ್ಪಕವಾಗಿ ನಿರ್ವಯಹಿಸುವಲ್ಲಿ ಗುಜರಾತ್‌ನ ಸೆಮಿಕಂಡಕ್ಟರ್ ನೀತಿಯು ಪರಿಣಾಮಕಾರಿ ಯಾಗಿ ಕಾರ್ಯನಿರ್ವಹಿಸುತ್ತಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಮೈಕ್ರಾನ್ ಟಕ್ನಾಲಜಿಸ್ ಸಂಸ್ಥೆ 2.75 ಶತಕೋಟಿ ಡಾಲರ್ ಮೌಲ್ಯದ ಘಟಕವನ್ನು ಅಹ್ಮದಾಬಾದ್‌ನಲ್ಲಿ ತೆರೆಯುವ ನಿರ್ಧಾರ ಕೈಗೊಂಡಿದೆ. ಇದೇ ಕಾರಣದಿಂದ ಬೆಂಗಳೂರು, ದಿಲ್ಲಿ, ಜಪಾನ್, ದಕ್ಷಿಣ ಕೊರಿಯಾದ ಕೆಲವು ಸೆಮಿಕಂಡಕ್ಟರ್ ಸಂಸ್ಥೆಗಳೂ ಕೂಡ ಗುಜರಾತ್‌ನಲ್ಲಿ ಸೆಮಿಕಂಡಕ್ಟರ್ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಯೋಜಿಸಿವೆ ಎನ್ನಲಾಗಿದೆ.
ಇನ್ನು ಈ ಕುರಿತಂತೆ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಕೂಡ ಪ್ರತಿಕ್ರಿಯಿ, ಜಾಗತಿಕ ಮಟ್ಟದ ಹಲವು ಕಂಪೆನಿಗಳಿಗೆ ರಾಜ್ಯ ಪ್ರಮುಖ ಆಯ್ಕೆಯಾಗಿದ್ದು, ಮುಂಬರಲಿರುವ ಶೃಂಗಸಭೆ ದೇಶದಲ್ಲಿ ಈ ಕ್ಷೇತ್ರದ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಲಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.