ಫಲಾನುಭವಿಗಳ ಮಾಹಿತಿ ತಿಳಿವ ಹಕ್ಕು ಸರ್ಕಾರಕ್ಕಿಲ್ಲವೇ?
Team Udayavani, Jan 31, 2018, 7:00 AM IST
ನವದೆಹಲಿ: “ವಿವಿಧ ರೀತಿಯ ಸಮಾಜ ಕಲ್ಯಾಣ ಯೋಜನೆಗಳನ್ನು ಜಾರಿ ಮಾಡುವ ಸರ್ಕಾರಗಳಿಗೆ ಅದು ನಿಜವಾದ ಫಲಾನುಭವಿಗಳನ್ನು ತಲುಪುತ್ತದೆಯೋ ಇಲ್ಲವೋ ಎನ್ನುವುದನ್ನು ತಿಳಿಯುವ ಹಕ್ಕೂ ಇಲ್ಲವೇ?’
ಹೀಗೆಂದು ಪ್ರಶ್ನಿಸಿದ್ದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಸಾಂವಿಧಾನಿಕ ಪೀಠ. ಆಧಾರ್ ಕಾರ್ಡ್‌ಗಾಗಿ ದೇಶದ ಜನರ ಬಯೋಮೆಟ್ರಿಕ್ ಮತ್ತು ಇತರ ಮಾಹಿತಿಗಳನ್ನು ಸಂಗ್ರಹಿಸಿದ್ದರಿಂದ ಅನಾಹುತ ಸಂಭವಿಸುತ್ತದೆ ಎಂದು ಆಧಾರ್ ವಿರೋಧಿಸಿ ಅರ್ಜಿ ಸಲ್ಲಿಸಿದವರ ಪರ ವಾದಿಸಿದ ಹಿರಿಯ ನ್ಯಾಯವಾದಿ ಶ್ಯಾಮ್ ದಿವಾನ್ ಕಳವಳ ವ್ಯಕ್ತಪಡಿಸಿದ್ದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, ಸರ್ಕಾರಕ್ಕೆ ಯೋಜನೆಯ ಫಲಾನುಭವಿಗಳ ಬಗ್ಗೆ ತಿಳಿಯುವ ಹಕ್ಕೂ ಇಲ್ಲವೇ ಎಂದು ಪ್ರಶ್ನೆ ಮಾಡಿದರು.
“ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿವಿಧ ಯೋಜನೆಗಳ ಫಲಾನುಭವಿಗಳು ಯಾರು ಎಂದು ತಿಳಿಯಲು ಆಧಾರ್ ಮಾಹಿತಿ ಬಳಸಿಕೊಂಡಿರಬಹುದು. ಅದನ್ನು ನೀವು (ವಕೀಲರು) ಸಾರ್ವಜನಿಕರ ಮೇಲೆ ನಿಗಾ ಇರಿಸಲು ಬಳಸಿಕೊಳ್ಳಲಾಗುತ್ತದೆ ಎಂಬ ದೃಷ್ಟಿಯಿಂದ ನೋಡಿರುವ ಸಾಧ್ಯತೆ ಇದೆ’ ಎಂದರು.
ಅದಕ್ಕೆ ಪೂರಕವಾಗಿ ಆಧಾರ್ ಜಾರಿ ಯಿಂದಾಗಿ ಸೀಮೆ ಎಣ್ಣೆ, ಎಲ್‌ಪಿಜಿ ಬಳಕೆ ದಾರರ ಖಾತೆಗೆ ನೇರವಾಗಿ ಸಬ್ಸಿಡಿ ಹಣ ವರ್ಗಾವಣೆಯಾದ ಬಗ್ಗೆ ಕೇಂದ್ರ ಸರ್ಕಾರ ನೀಡಿದ ಮಾಹಿತಿಯನ್ನು ನ್ಯಾಯಪೀಠ ನೀಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru; ಸದ್ಯ ಖಾಸಗಿ ಬಸ್ ಟಿಕೆಟ್ ದರ ಏರಿಕೆ ಇಲ್ಲ
Kasaragod:ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; 10 ಮಂದಿಗೆ ಅವಳಿ ಜೀವಾವಧಿ ಸಜೆ
Bus ಪ್ರಯಾಣ ದರ ಏರಿಕೆ; ಮೊದಲು ಉದ್ದೇಶ ಅರಿಯಲಿ: ಖಾದರ್
Hunsur: ಹೊಸ ವರ್ಷಾಚರಣೆ: ಕೇಕ್ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
“ನಿಮ್ಹಾನ್ಸ್ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.