ಪ್ರಿಯಾಂಕಾ ರಾಜಕೀಯಕ್ಕೆ?
Team Udayavani, Aug 4, 2018, 6:00 AM IST
ನವದೆಹಲಿ: ಮುಂದಿನ ಲೋಕಸಭಾ ಚುನಾವಣೆ ಮೂಲಕ ಪ್ರಿಯಾಂಕಾ ವಾದ್ರಾ ಸಕ್ರಿಯ ರಾಜಕಾರಣಕ್ಕೆ ಪ್ರವೇಶಿಸುವ ಸಾಧ್ಯತೆ ದಟ್ಟವಾಗಿದೆ. ಕಾಂಗ್ರೆಸ್ ವರಿಷ್ಠ ನಾಯಕಿ ಸೋನಿಯಾ ಗಾಂಧಿ ಅವರ ರಾಯ ಬರೇಲಿ ಕ್ಷೇತ್ರದಿಂದ ಪುತ್ರಿ ಪ್ರಿಯಾಂಕಾ ಸ್ಪರ್ಧಿಸುವ ಸಾಧ್ಯತೆ ಯಿದೆ ಎಂದು ಕಾಂಗ್ರೆಸ್ ಮೂಲ ಗಳು ತಿಳಿಸಿವೆ. ಇದೇ ವೇಳೆ ರಾಹುಲ್ ಗಾಂಧಿ ಸತತ ನಾಲ್ಕನೇ ಬಾರಿಗೆ ಅಮೇಥಿಯಿಂದಲೇ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಮೂಲಗಳನ್ನು ಉಲ್ಲೇಖೀಸಿ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಪ್ರಧಾನಿ ಅಭ್ಯರ್ಥಿ ಘೋಷಣೆ ಈಗಿಲ್ಲ: ರಾಹುಲ್ ಗಾಂಧಿಯವರನ್ನು ಪ್ರಧಾನಿ ಅಭ್ಯ ರ್ಥಿಯಾಗಿ ಬಿಂಬಿಸುವುದಕ್ಕಿಂತ ಮಹಾಮೈತ್ರಿ ಯಾಸರೆಯೇ ಮುಖ್ಯ ಎಂದು ಕಾಂಗ್ರೆಸ್ ನಿರ್ಧರಿಸಿದೆ. ರಾಹುಲ್ ನಾಯಕತ್ವಕ್ಕೆ ಮಹಾ ಮೈತ್ರಿಕೂಟದ ಪ್ರಮುಖ ಪಕ್ಷಗಳಿಂದ ಪೂರಕ ಅಭಿಪ್ರಾಯ ವ್ಯಕ್ತವಾಗದಿರುವ ಬೆನ್ನಲ್ಲೇ, ಚು ನಾವಣಾ ಫಲಿತಾಂಶದ ಬಳಿಕವಷ್ಟೇ ಪ್ರಧಾನಿ ಅಭ್ಯರ್ಥಿ ಕುರಿತು ನಿರ್ಧರಿಸಲಾಗುವುದು ಎಂದು ಕಾಂಗ್ರೆಸ್ ಸ್ಪಷ್ಟೀಕರಣ ನೀಡಿದೆ.
ಇತ್ತೀಚೆಗೆ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ವಿಪಕ್ಷಗಳ ಮಿತ್ರಕೂಟದ ನೇತೃತ್ವವನ್ನು ರಾಹುಲ್ ವಹಿಸಬೇಕು ಎಂದು ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ ಶುಕ್ರವಾರ ಕಾಂಗ್ರೆಸ್ ಈ ವಿಚಾರದ ಕುರಿತು ಸ್ಪಷ್ಟನೆ ನೀಡಿದ್ದು, ಚುನಾವಣೆಗೆ ಮುನ್ನ ಪ್ರಧಾನಿ ಅಭ್ಯರ್ಥಿಯನ್ನು ಬಿಂಬಿಸುವುದಿಲ್ಲ. ಉತ್ತರಪ್ರದೇಶ, ಬಿಹಾರ ಹಾಗೂ ಮಹಾ ರಾಷ್ಟ್ರಗಳಲ್ಲಿ ಸಮರ್ಪಕ ಮೈತ್ರಿ ಮಾಡಿಕೊಂಡು ಬಿಜೆಪಿ ಸೋಲಿಸುವುದೇ ನಿರ್ಣಾಯಕವಾಗಿದೆ ಎಂದು ಪಕ್ಷದ ಮೂಲಗಳು ಹೇಳಿವೆ.
ಇದೇ ವೇಳೆ, ಶಿವಸೇನೆ ಜತೆಗಿನ ಮೈತ್ರಿಯ ಸಾಧ್ಯತೆಯನ್ನು ಕಾಂಗ್ರೆಸ್ ತಳ್ಳಿಹಾಕಿದೆ. ಮತ್ತೂಂದೆಡೆ, ಎಎಪಿ ಜತೆಗಿನ ಮೈತ್ರಿಯನ್ನು ರಾಜ್ಯ ಘಟಕದ ವಿವೇಚನೆಗೆ ಕಾಂಗ್ರೆಸ್ ನಾಯಕತ್ವ ಬಿಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Isro: ಡಿ.20ಕ್ಕೆ ಸ್ಪೇಡೆಕ್ಸ್ ಲಾಂಚ್ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.