ಮಾ.24ರಂದು ದಾಳಿ, ತಾಕತ್ತಿದ್ದರೆ ತಡೆಯಿರಿ: ಯೋಗಿಗೆ ಐಸಿಸ್ ಬೆದರಿಕೆ
Team Udayavani, Mar 22, 2017, 4:50 PM IST
ವಾರಾಣಸಿ : ಇದೇ ಮಾರ್ಚ್ 24ರಂದು ಪೂರ್ವಾಂಚಲದಲ್ಲಿ ನಾವು ವಿನಾಶವನ್ನು ಉಂಟುಮಾಡಲಿದ್ದೇವೆ; ತಾಕತ್ತಿದ್ದರೆ ತಡೆಯಿರಿ’ ಎಂದು ಎಚ್ಚರಿಸುವ ಐಸಿಸ್ ಉಗ್ರ ಸಂಘಟನೆಯದ್ದೆಂದು ಹೇಳಲಾದ ಪತ್ರವೊಂದು ವಾರಾಣಸಿಯ ಮಿರ್ಜಾಮುರಾದ್ ನಲ್ಲಿ ಪತ್ತೆಯಾಗಿದ್ದು ನೂತನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಈ ಮೂಲಕ ಹೊಸ ಉಗ್ರ ಸವಾಲೊಂದು ಎದುರಾಗಿದೆ.
ಐಸಿಸ್ ಸಹಿ ಇರುವ ಈ ಬೆದರಿಕೆ ಪತ್ರದಲ್ಲಿ ಪಾಕಿಸ್ಥಾನ್ ಜಿಂದಾಬಾದ್ ಎಂಬ ಘೋಷಣೆಯೂ ಇದೆ.
ರಾಜ್ಯ ಪೊಲೀಸ್ ಇಲಾಖೆ ಮತ್ತು ಗುಪ್ತಚರ ದಳ ಈ ಪತ್ರವನ್ನು ಗಂಭೀರವಾಗಿ ಪರಿಗಣಿಸಿದೆ. ಕಾರಣ ಇದು ಪ್ರಧಾನಿ ನರೇಂದ್ರ ಮೋದಿ ಅವರು ಸಂಸದೀಯ ಕ್ಷೇತ್ರದಲ್ಲೇ ಪತ್ತೆಯಾಗಿದೆ.
ಪೊಲೀಸರು ಈ ಬಗ್ಗೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಕೇಸು ದಾಖಲಿಸಿಕೊಂಡಿದ್ದು ಸ್ಥಳೀಯರನ್ನು ಪ್ರಶ್ನಿಸುತ್ತಿದ್ದಾರೆ ಎಂದು ಗ್ರಾಮಾಂತರ ಎಸ್‌ಪಿ ಆಶಿಶ್ ತಿವಾರಿ ದೃಢೀಕರಿಸಿದ್ದಾರೆ.
ಈ ವರ್ಷದ ಆದಿಯಲ್ಲಿ ಪ್ರಧಾನಿ ಮೋದಿ ಹಾಗೂ ರಕ್ಷಣಾ ಸಚಿವ ಮನೋಹರ್ ಪರ್ರೀಕರ್ ಅವರನ್ನು ಕೊಲ್ಲುವ ಬೆದರಿಕೆಯ ಐಸಿಸ್ ಪತ್ರ ಪತ್ತೆಯಾಗಿತ್ತು. ದೇಶದಲ್ಲಿ ಗೋಹತ್ಯೆಯನ್ನು ನಿಷೇಧಿಸಲಾಗಿರುವುದಕ್ಕೆ ವ್ಯಕ್ತವಾದ ಆಕ್ರೋಶ ಅದಾಗಿತ್ತೆಂದು ತಿಳಿಯಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ
Maharashtra Elections: ವಿಪಕ್ಷ ನಾಯಕ ರಾಹುಲ್ ಛೋಟಾ ಪೋಪಟ್: ಬಿಜೆಪಿ ವಕ್ತಾರ ಲೇವಡಿ
Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್ ಮತ್ತು ಬಾಬಾ ನಡುವಿನ ಹೋರಾಟ
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.