ISIS Link; ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ 3 ವಿದ್ಯಾರ್ಥಿಗಳ ಬಂಧನ
Team Udayavani, Nov 12, 2023, 12:17 PM IST
ಹೊಸದಿಲ್ಲಿ: ಉತ್ತರ ಪ್ರದೇಶ ಪೊಲೀಸ್ ನ ಉಗ್ರ ನಿಗ್ರಹ ಪಡೆಯು ಐಸಿಸ್ ಉಗ್ರಗಾಮಿ ಸಂಘಟನೆಯ ಜೊತೆ ನಂಟು ಹೊಂದಿರುವ ಆರೋಪದಡಿ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ ಮೂವರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ಐಸಿಸ್ ನ ಅಲಿಗಢ ಘಟಕದೊಂದಿಗೆ ಸಂಪರ್ಕ ಹೊಂದಿರುವ ಶಂಕೆಯ ಮೇಲೆ ನೋಮನ್, ನಾಜಿಮ್ ಮತ್ತು ನಾವೇದ್ ಎಂಬ ಮೂವರನ್ನು ಬಂಧಿಸಲಾಗಿದೆ. ಈ ಮೂವರಿಂದ ಉಗ್ರ ಪ್ರಚೋದನಕಾರಿ ಬರಹಗಳೂ ಪತ್ತೆಯಾಗಿದೆ ಎಂದು ಮೂಲಗಳು ವರದಿ ಮಾಡಿದೆ.
ಎಎಂಯು ವಿದ್ಯಾರ್ಥಿಗಳಾದ ನೋಮನ್, ನಾಜಿಮ್ ಮತ್ತು ನಾವೇದ್ ಅವರು ಐಸಿಸ್‌ನ ಅಲಿಘರ್ ಮಾಡ್ಯೂಲ್‌ನೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಖಚಿತಪಡಿಸಿದ ನಂತರ ಬಂಧಿತ ಯುವಕರನ್ನು ಜೈಲಿಗೆ ಕಳುಹಿಸಲು ಎಟಿಎಸ್ ಕಾನೂನು ಕ್ರಮ ಕೈಗೊಳ್ಳುತ್ತಿದೆ.
ಉತ್ತರ ಪ್ರದೇಶ ಎಟಿಎಸ್ ಈ ಹಿಂದೆ ಅಲಿಘರ್ ನಲ್ಲಿ ಇಬ್ಬರು ಶಂಕಿತ ಭಯೋತ್ಪಾದಕರನ್ನು ಬಂಧಿಸಿತ್ತು. ಇಬ್ಬರೂ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು. ಇದರ ನಂತರ, ಐಸಿಸ್ ನ ಅಲಿಘರ್ ಮಾಡ್ಯೂಲ್ ಗೆ ಸಂಬಂಧಿಸಿದ ಉಳಿದ ಶಂಕಿತ ಭಯೋತ್ಪಾದಕರನ್ನು ಭೇದಿಸಲು ಎಟಿಎಸ್ ಪ್ರಮುಖ ಕ್ರಮ ಕೈಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.