ಇಸ್ರೇಲ್ ಪಿಎಂಗೆ ಮೈಸೂರು ಸೈನಿಕರ ಕಂಚಿನ ಪ್ರತಿಮೆ ಗಿಫ್ಟ್?
Team Udayavani, Jan 14, 2018, 11:42 AM IST
ನವದೆಹಲಿ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಜ.14ರಿಂದ 17ರ ವರೆಗೆ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಮೈಸೂರು, ಹೈದರಾಬಾದ್ ಮತ್ತು ಜೋಧ್‌ಪುರದ ಅಶ್ವಾರೋಹಿ ಪಡೆಯ ಮೂರು ಕಂಚಿನ ಪ್ರತಿಮೆಗಳನ್ನು ಸ್ಮರಣಿಕೆಯನ್ನಾಗಿ ನೀಡಲಾಗುತ್ತದೆ.
ಈ ಮೂರು ಪಡೆಗಳು 1918ರ ಸೆ.23ರಂದು ಮೊದಲ ವಿಶ್ವ ಮಹಾಯುದ್ಧದ ಕೊನೆಯ ಸಂದರ್ಭದಲ್ಲಿ ಸೈನಿ ಮತ್ತು ಪ್ಯಾಲೆಸ್ತೀನ್ ಪರ ನಡೆದ ಹೋರಾಟದಲ್ಲಿ ಹೈಫಾ ನಗರವನ್ನು ಒಟ್ಟಮನ್ಸ್ ಪಡೆಯಿಂದ ವಶಪಡಿಸುವಲ್ಲಿ ಯಶಸ್ವಿಯಾಗಿದ್ದವು. ಈ ಕಾಳಗದಲ್ಲಿ 44 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದರು.
“ಹೈಫಾ ದಿನಾಚರಣೆ’ಯನ್ನು ಇದುವರೆಗೆ ಪ್ರತಿವರ್ಷ ಸೆ.23ರಂದು ಆಚರಿಸಲಾಗುತ್ತದೆ. ಗಮನಾರ್ಹ ಅಂಶವೆಂದರೆ 2003ರಲ್ಲಿ ಇಸ್ರೇಲ್‌ನ ಪ್ರಧಾನಿಯಾಗಿದ್ದ ಏರಿಯಲ್ ಶೆರೋನ್ ಭಾರತಕ್ಕೆ ಭೇಟಿ ನೀಡಿದ ಬಳಿಕ ಇದೇ ಮೊದಲ ಬಾರಿಗೆ ಹಾಲಿ ಪಿಎಂ ಬೆಂಜಮಿನ್ ನೆತನ್ಯಾಹು 2 ದಿನಗಳ ಪ್ರವಾಸ ಕೈಗೊಂಡಿದ್ದಾರೆ.
ಭಾರತ ಮತ್ತು ಇಸ್ರೇಲ್ ಪಿಎಂಗಳ ಮೊದಲ ಭೇಟಿ ನವದೆಹಲಿಯ ತೀನ್‌ಮೂರ್ತಿ ಭವನದಲ್ಲಿ ನಡೆಯಲಿದೆ. 17ರಂದು ಗುಜರಾತ್ ಪ್ರವಾಸದ ವೇಳೆ ಅಹಮದಾಬಾದ್ ಏರ್‌ಪೋರ್ಟ್‌ನಿಂದ ಸಾಬರಮತಿ ಆಶ್ರಮದ ವರೆಗೆ 8 ಕಿಮೀ ರೋಡ್ ಶೋ ನಡೆಸಲಿದ್ದಾರೆ. ಈ ಹಿಂದೆ ಜಪಾನ್ ಪ್ರಧಾನಿ ಶಿಂಜೋ ಅಬೆ ಪ್ರವಾಸ ಕೈಗೊಂಡಿದ್ದ ವೇಳೆ ಇದೇ ಮಾದರಿ ರೋಡ್ ಶೋ ನಡೆಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್?
India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!
MUST WATCH
ಹೊಸ ಸೇರ್ಪಡೆ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.