ಕಕ್ಷೆಗೆ ಸೇರಿಕೊಂಡ ಇಸ್ರೋ ಉಪಗ್ರಹ
Team Udayavani, Apr 13, 2018, 7:30 AM IST
ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಗುರುವಾರ ಉಡಾಯಿಸಿದ “ಐಆರ್‌ಎನ್‌ಎಸ್‌ಎಸ್-1 ಎಲ್’ ನೇವಿಗೇಷನ್ ಉಪಗ್ರಹ ಯಶಸ್ವಿಯಾಗಿ ನಿಗದಿತ ಕಕ್ಷೆ ಸೇರಿದೆ. ಅಮೆರಿಕ ಮೂಲದ ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ) ಮಾದರಿಯಲ್ಲಿ ತನ್ನದೇ ಪ್ರತ್ಯೇಕ ನೇವಿಗೇಷನ್ ವ್ಯವಸ್ಥೆ ಹೊಂದುವ ಭಾರತ ಸರಕಾರದ ಆಶಯದ ಸಾಕಾರ ಯೋಜನೆಯ ಅಂಗವಾಗಿ ಈ ಉಪಗ್ರಹ ಉಡಾಯಿಸಲಾಗಿದೆ.
ಬೆಳಗಿನ ಜಾವ 4:40ಕ್ಕೆ ಪಿಎಸ್‌ಎಲ್‌ವಿ ರಾಕೆಟ್‌ನ ಮೂಲಕ ನಭಕ್ಕೆ ಚಿಮ್ಮಿದ ಉಪಗ್ರಹ, ಉಡಾವಣೆಗೊಂಡ 19 ನಿಮಿಷಗಳ ತರುವಾಯ ತನ್ನ ಕಕ್ಷೆ ಸೇರಿಕೊಂಡಿತು. ಪಿಎಸ್‌ಎಲ್‌ವಿ ಮೂಲಕ ಈವರೆಗೆ ಹಾರಿಸಲ್ಪಟ್ಟ 43 ಉಪಗ್ರಹಗಳ ಪೈಕಿ ಯಶಸ್ವಿಯಾಗಿ ಕಕ್ಷೆ ಸೇರಿದ 41ನೇ ಉಪಗ್ರಹವಿದು. 1,425 ಕೆಜಿ ಭಾರವಿದ್ದ ಈ ಉಪಗ್ರಹವನ್ನು ಬೆಂಗಳೂರು ಮೂಲದ ಆಲ್ಫಾ ಡಿಸೈನ್ ಟೆಕ್ನಾಲಜೀಸ್ ಸಂಸ್ಥೆಯೊಂದಿಗೆ ಸೇರಿ ಇಸ್ರೊ ತಯಾರಿಸಿದೆ. ಖಾಸಗಿ ಸಂಸ್ಥೆಯ ಸಹಭಾಗಿತ್ವದೊಂದಿಗೆ ತಯಾರಾದ 2ನೇ ಉಪಗ್ರಹವಿದು.
ಮೋದಿ ಅಭಿನಂದನೆ: ಉಪಗ್ರಹದ ಯಶಸ್ವಿ ಉಡಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ, ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ಯಶಸ್ಸು ಮುಂದಿನ ದಿನಗಳಲ್ಲಿ ಭಾರತದ ಸಾಮಾನ್ಯ ಪ್ರಜೆಗೆ ಅನುಕೂಲ ಕಲ್ಪಿಸಲಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.