Shock; ಕಾಂಗ್ರೆಸ್ಗೆ ಐಟಿ ಇಲಾಖೆ ಹೊಸ ನೋಟಿಸ್ ಜಾರಿ
Team Udayavani, Apr 1, 2024, 12:19 AM IST
ಹೊಸದಿಲ್ಲಿ: ಚುನಾವಣೆ ಸಮೀಪಿಸುತ್ತಿರುವಂತೆಯೇ ಆದಾಯ ತೆರಿಗೆ ಇಲಾಖೆಯು ಕಾಂಗ್ರೆಸ್ಗೆ ಒಂದರ ಮೇಲೊಂದರಂತೆ ಶಾಕ್ ನೀಡುತ್ತಲೇ ಇದೆ. 2014-15ರಿಂದ 2016-17 ಹಣಕಾಸು ವರ್ಷದ ತೆರಿಗೆ ಬಾಕಿ 1,745 ಕೋಟಿ ರೂ. ಪಾವತಿಸುವಂತೆ ಹೊಸದಾಗಿ ಐಟಿ ಇಲಾಖೆ ನೋಟಿಸ್ ನೀಡಿದೆ. ಈ ಮೂಲಕ ಕಾಂಗ್ರೆಸ್ಗೆ ಈವರೆಗೆ ಒಟ್ಟಾರೆ 3,567 ಕೋಟಿ ರೂ. ತೆರಿಗೆ ಬಾಕಿ ಪಾವತಿಸುವಂತೆ ಸೂಚಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
2014-15ನೇ ಹಣಕಾಸು ವರ್ಷ ದಲ್ಲಿ 663 ಕೋಟಿ ರೂ., 2015-16ನೇ ಸಾಲಿನಲ್ಲಿ 664 ಕೋಟಿ ರೂ. ಮತ್ತು 2016-17 ಹಣಕಾಸು ವರ್ಷದಲ್ಲಿ 417 ಕೋಟಿ ರೂ. ತೆರಿಗೆ ಬಾಕಿ, ಬಡ್ಡಿ ಮತ್ತು ದಂಡಕ್ಕೆ ಸಂಬಂಧಿಸಿದಂತೆ ಐಟಿ ಇಲಾಖೆ ಹೊಸದಾಗಿ ಕಾಂಗ್ರೆಸ್ಗೆ ನೋಟಿಸ್ ನೀಡಿದೆ. ಇತ್ತೀಚೆಗೆ 2017-18ರಿಂದ 2020-21 ಸಾಲಿನ ತೆರಿಗೆ ಬಾಕಿ, ಬಡ್ಡಿ ಮತ್ತು ದಂಡವಾಗಿ 1,823 ಕೋಟಿ ರೂ. ಪಾವತಿಸುವಂತೆ ನೋಟಿಸ್ ನೀಡಿತ್ತು.
ಐಟಿ ಇಲಾಖೆ ಆರಂಭಿಸಿರುವ ಮರು ಮೌಲ್ಯಮಾಪನ ಪ್ರಕ್ರಿಯೆಗೆ ತಡೆ ಕೋರಿ ಇತ್ತೀಚೆಗೆ ಕಾಂಗ್ರೆಸ್ ಪಕ್ಷವು ದಿಲ್ಲಿ ಹೈಕೋರ್ಟ್ ಮೊರೆ ಹೋಗಿತ್ತು. ಆದರೆ ಅರ್ಜಿಯನ್ನು ದಿಲ್ಲಿ ಹೈಕೋರ್ಟ್ ತಿರಸ್ಕರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.