ಜೈಲಲ್ಲಿ  ಶಶಿಕಲಾ ಮೌನವ್ರತ! ವಿಚಾರಣೆಗೆ ಸಹಕರಿಸದ ಜಯ ಆಪ್ತೆ


Team Udayavani, Jan 31, 2018, 10:49 AM IST

Silent-New.jpg

ಚೆನ್ನೈ: ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಅವರ ಆಪ್ತ ಸ್ನೇಹಿತೆ, ಪರಪ್ಪನ ಅಗ್ರಹಾರದಲ್ಲಿರುವ “ಮೌನವ್ರತಧಾರಿ’ ಶಶಿಕಲಾ ಅವರ ಬಾಯಿ ಬಿಡಿಸಲು ಆದಾಯ ತೆರಿಗೆ ಅಧಿಕಾರಿಗಳು ಹೆಣಗಾಡುತ್ತಿದ್ದಾರೆ.

ಕಳೆದ ನ.7 ರಂದು ಶಶಿಕಲಾಗೆ ಸೇರಿದ 187 ಸ್ಥಳಗಳಲ್ಲಿ ಭರ್ಜರಿ “ಆಪರೇಶನ್‌ ಕ್ಲೀನ್‌ ಮನಿ’ ದಾಳಿ ನಡೆಸಿದ್ದ ಆದಾಯ ತೆರಿಗೆ ಅಧಿಕಾರಿಗಳು 1400 ಕೋಟಿ ಅಕ್ರಮ ಆಸ್ತಿಯನ್ನು ಪತ್ತೆ ಮಾಡಿದ್ದರು. ಈ ಬಗ್ಗೆ ಬೆಂಗಳೂರಿನ ಜೈಲಿನಲ್ಲಿರುವ ಶಶಿಕಲಾ ಬಳಿ ಹೇಳಿಕೆ ಪಡೆಯಲು ಆಗಿನಿಂದಲೂ ಐಟಿ ಅಧಿಕಾರಿಗಳು ಯತ್ನಿಸುತ್ತಿದ್ದರೂ ಅವರು ಒಂದಲ್ಲಾ ಒಂದು ನೆಪ ಹೇಳಿ ತಪ್ಪಿಸಿಕೊಳ್ಳುತ್ತಿದ್ದಾರೆ.

ಅಲ್ಲದೆ ಜನವರಿ ಮೊದಲ ವಾರವೇ ಪರಪ್ಪನ ಅಗ್ರಹಾರಕ್ಕೆ ಸಮನ್ಸ್‌ ಕಳುಹಿಸಿರುವ ಅಧಿಕಾರಿಗಳು, ಶಶಿಕಲಾ ಉತ್ತರಕ್ಕಾಗಿ ಕಾಯುತ್ತಲೇ ಇದ್ದಾರೆ. ವಿಚಿತ್ರವೆಂದರೆ, ಅವರು ಫೆ.10ರ ವರೆಗೆ ಮೌನವ್ರತ ತಾಳಿದ್ದೇನೆ. ಯಾವುದೇ ಕಾರಣಕ್ಕೂ ಬಾಯಿ ಬಿಡುವುದಿಲ್ಲವೆಂದು ಹೇಳಿದ್ದಾರೆ.

ಐಟಿ ಅಧಿಕಾರಿಗಳಿಗೆ ಸಂದಿಗ್ಧಕ್ಕೆ ಕಾರಣವಾಗಿರುವುದೂ ಇದೇ ಅಂಶ. ಜಯಲಲಿತಾ ಅವರ ವೇದ ನಿಲಯಂನಲ್ಲಿ ಸಿಕ್ಕಿರುವ ಭಾರಿ ಪ್ರಮಾಣದ ದಾಖಲೆಗಳು, ಆಸ್ತಿ ಪತ್ರಗಳ ಬಗ್ಗೆ ಮಾಹಿತಿ ಪಡೆಯಬೇಕಾದರೆ ಶಶಿಕಲಾ ಅವರ ಹೇಳಿಕೆ ಪಡೆಯಲೇಬೇಕು. ಆದರೆ, ಪರಪ್ಪನ ಅಗ್ರಹಾರದಲ್ಲೇ ಇದ್ದುಕೊಂಡು ಮಾಹಿತಿ ನೀಡದೇ ತಪ್ಪಿಸಿಕೊಳ್ಳುತ್ತಿರುವ ಶಶಿಕಲಾ ಐಟಿ ಅಧಿಕಾರಿಗಳಿಗೆ ತಲೆನೋವಾಗಿದ್ದಾರೆ. 

ಹೀಗಾಗಿ, ವಿಧಿ ಇಲ್ಲದೇ ಫೆ.10ರ  ವರೆಗೆ ಕಾಯಲು ನಿರ್ಧರಿಸಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು, ನಂತರವೇ ಶಶಿಕಲಾ ಇರುವ ಕಾರಾಗೃಹಕ್ಕೆ ತೆರಳಿ ಹೇಳಿಕೆ ದಾಖಲಿಸಿಕೊಳ್ಳಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. 

ಜೈಲಿಗೆ ದಿನಕರನ್‌ ಭೇಟಿ
ಈ ಬೆಳವಣಿಗೆಗಳ ಮಧ್ಯೆ ಶಶಿಕಲಾ ಅವರ ಸಂಬಂಧಿ ಟಿಟಿವಿ ದಿನಕರನ್‌ ಅವರು, ಮಂಗಳವಾರ ಪರಪ್ಪನ ಅಗ್ರಹಾರಕ್ಕೆ
ಆಗಮಿಸಿ ಭೇಟಿ ಮಾಡಿದ್ದಾರೆ. ಈ ವೇಳೆ ಮೌನವ್ರತ ಧರಿಸಿರುವ ಶಶಿಕಲಾ ದಿನಕರನ್‌ ಅವರನ್ನು ಭೇಟಿಯಾದರೋ ಅಥವಾ ಇಲ್ಲವೋ ಎಂಬುದು ತಿಳಿದುಬಂದಿಲ್ಲ.

ಟಾಪ್ ನ್ಯೂಸ್

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal-2

BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

1-ewewqe

Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ

1-wwwe

NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Mangaluru: ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.