ಎದ್ದು ನಿಂತು ರಾಷ್ಟ್ರಗೀತೆ ಹಾಡಿದ ಮಾತ್ರಕ್ಕೆ ದೇಶಪ್ರೇಮವಲ್ಲ
Team Udayavani, Oct 24, 2017, 6:00 AM IST
ಹೊಸದಿಲ್ಲಿ: ರಾಷ್ಟ್ರಗೀತೆ ಪ್ರಸಾರ ವಾದಾಗ ಎದ್ದು ನಿಲ್ಲುವುದು ರಾಷ್ಟ್ರಪ್ರೇಮವನ್ನು ಅಳೆಯುವ ಮಾನದಂಡ ವಲ್ಲ. ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಯನ್ನು ಪ್ರಸಾರ ಮಾಡಬೇಕೆ ಅಥವಾ ಬೇಡವೆ ಎಂಬುದನ್ನು ಕೇಂದ್ರ ಸರಕಾರ ತೀರ್ಮಾನಿಸಬೇಕು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಅಲ್ಲದೆ ಈ ಸಂಬಂಧ ಕಾನೂನು ತಿದ್ದುಪಡಿ ಮಾಡಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸಲಹೆ ನೀಡಿದೆ. ಆದರೆ ಈ ಹಿಂದೆ ಕಡ್ಡಾಯ ವಾಗಿ ಥಿಯೇಟರ್‌ಗಳಲ್ಲಿ ರಾಷ್ಟ್ರಗೀತೆ ಪ್ರಸಾರ ಮಾಡುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಈ ಕಾನೂನು ತಿದ್ದುಪಡಿ ವೇಳೆ ಪರಿಗಣಿಸಬೇಕಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ| ಎ.ಎಂ. ಖಾನ್ವಿಲ್ಕರ್ ಮತ್ತು ನ್ಯಾ| ಡಿ.ವೈ. ಚಂದ್ರಚೂಡ್ ಅವರನ್ನೊಳಗೊಂಡ ಪೀಠ ಹೇಳಿದೆ. ಅಲ್ಲದೆ ಅಗತ್ಯವಾದರೆ ಸುಪ್ರೀಂ ಕೋರ್ಟ್ ಆದೇಶವನ್ನೂ ತಿದ್ದುಪಡಿ ಮಾಡುವುದಾಗಿ ಕೋರ್ಟ್ ಹೇಳಿದೆ.
ರಾಷ್ಟ್ರಗೀತೆ ಕಡ್ಡಾಯವಾಗಿ “ಹಾಡಲೇಬೇಕು’ ಎನ್ನುವು ದರ ಬದಲಿಗೆ “ಹಾಡ ಬಹುದು’ ಎಂದು ತಿದ್ದುಪಡಿ ಮಾಡುವಂತೆಯೂ ನ್ಯಾಯಪೀಠ ಸಲಹೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.