ಐಟಿ ರಿಟರ್ನ್ಸ್ ಗಡುವು ವಿಸ್ತರಣೆ
Team Udayavani, May 2, 2021, 6:00 AM IST
ಹೊಸದಿಲ್ಲಿ: ಆದಾಯ ತೆರಿಗೆ ಪಾವತಿದಾರರಿಗೆ ಹಲವು ವಿಭಾಗಗಳಲ್ಲಿ ಗಡುವನ್ನು ವಿಸ್ತರಿಸಲಾಗಿದೆ. ಪ್ರಸ್ತುತ ಕೊರೊನಾ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿ ಇರುವುದರಿಂದ ಗಡುವನ್ನು ವಿಸ್ತರಿಸಬೇಕೆಂದು ದೇಶಾದ್ಯಂತ ಮನವಿಗಳು ಬಂದಿದ್ದವು. ಇದನ್ನು ಸಚಿವಾಲಯ ಪುರಸ್ಕರಿಸಿದೆ.
ಈ ವರ್ಷ ಎ. 1ಕ್ಕೆ ಸಲ್ಲಿಸಬೇಕಾಗಿದ್ದ ಆದಾಯ ತೆರಿಗೆ ರಿಟರ್ನ್ಸ್ ಗಡುವನ್ನು ಮೇ 31ರ ವರೆಗೆ ವಿಸ್ತರಿಸಿದೆ. ಹಾಗೆಯೇ 2020-21ರ ವಿತ್ತೀಯ ವರ್ಷದ ಆದಾಯ ತೆರಿಗೆ ರಿಟರ್ನ್ಸ್ ವಿಳಂಬಿತ ಸಲ್ಲಿಕೆಗೆ ಅಂತಿಮ ಗಡುವು ಮಾ. 31 ಆಗಿತ್ತು. ಅದನ್ನು ಪರಿಷ್ಕರಿಸಿ ಮೇ 31ರ ವರೆಗೆ ವಿಸ್ತರಿಸಲಾಗಿದೆ. ತೆರಿಗೆ ಕಡಿತಗೊಂಡ ಮಾಹಿತಿಯಿರುವ ಚಲನ್‌ಗಳನ್ನು ಎ. 30ರೊಳಗೆ ಸಲ್ಲಿಸಲು ಈ ಹಿಂದೆ ತಿಳಿಸಲಾಗಿತ್ತು. ಅದಕ್ಕೂ ಮೇ 31ರ ವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ. ಆದಾಯ ತೆರಿಗೆ ಆಯುಕ್ತರಿಗೆ ಮನವಿ ಸಲ್ಲಿಸಲು, ವಿವಾದ ಇತ್ಯರ್ಥಕ್ಕೆ ಆಕ್ಷೇಪಣೆ ಸಲ್ಲಿಸುವುದಕ್ಕೂ ಮೇ 31ರ ವರೆಗೆ ಅವಕಾಶವಿದೆ.
1.41 ಲಕ್ಷ ಕೋ.ರೂ. ಜಿಎಸ್‌ಟಿ ಸಂಗ್ರಹ
ಎಪ್ರಿಲ್‌ನಲ್ಲಿ ದಾಖಲೆಯ 1.41 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದೆ. ಮಾರ್ಚ್‌ಗೆ ಹೋಲಿಸಿದರೆ, ಇದು ಶೇ. 14 ಹೆಚ್ಚು. ಎಪ್ರಿಲ್‌ನಲ್ಲಿ ಸ್ಥಳೀಯ ವಹಿವಾಟು ಮೂಲಕವೇ ಹೆಚ್ಚು ತೆರಿಗೆ ಹರಿದು ಬಂದಿದೆ. ಇದು ಕೂಡ ಕಳೆದ ತಿಂಗಳಿಗೆ ಹೋಲಿಸಿದರೆ ಶೇ. 21ರಷ್ಟು ಹೆಚ್ಚು ಎಂದು ಕೇಂದ್ರ ಸರಕಾರ ತಿಳಿಸಿದೆ. ಕಳೆದ ಏಳು ತಿಂಗಳುಗಳಿಂದ ಪ್ರತೀ ತಿಂಗಳು 1 ಲಕ್ಷ ಕೋಟಿ ರೂ.ಗಿಂತಲೂ ಹೆಚ್ಚು ಜಿಎಸ್‌ಟಿ ಸಂಗ್ರಹವಾಗುತ್ತಿದೆ. ಈ ಮೂಲಕ ದೇಶದ ಆರ್ಥಿಕತೆ ಹಳಿಗೆ ಬರುತ್ತಿರುವುದು ನಿಚ್ಚಳವಾಗಿದೆ ಎಂದು ವಿತ್ತ ಸಚಿವಾಲಯ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.