ಶ್ರೀನಗರ: ಕಾಶ್ಮೀರಿ ಪಂಡಿತರ ವರ್ಗಾವಣೆ ಶುರು
ಶಿಕ್ಷಣ ಇಲಾಖೆಯಲ್ಲಿರುವ ಪಂಡಿತರು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್
Team Udayavani, May 23, 2022, 9:10 PM IST
ಶ್ರೀನಗರ: ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರಿ ನೌಕರ ರಾಹುಲ್ ಭಟ್‌ರನ್ನು ಉಗ್ರರು ಹತ್ಯೆ ಮಾಡಿದ ಬೆನ್ನಲ್ಲೇ, ರಾಜ್ಯದ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಪಂಡಿತರನ್ನು ಸುರಕ್ಷಿತ ಸ್ಥಳಗಳಿಗೆ ವರ್ಗಾವಣೆ ಮಾಡುವ ಕೆಲಸ ಆರಂಭವಾಗಿದೆ. ಪಂಡಿತರ ರಕ್ಷಣೆ ನಿಟ್ಟಿನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಪ್ರಧಾನಿಯವರ ಕಾಶ್ಮೀರಿ ಪಂಡಿತರ ಪುನರ್ವಸತಿ ಯೋಜನೆಯಲ್ಲಿ ಇಲಾಖೆಗೆ ನೇಮಕವಾಗಿರುವ ಕಾಶ್ಮೀರಿ ಪಂಡಿತರನ್ನು ಶಿಕ್ಷಣ ಇಲಾಖೆಯು ವರ್ಗಾವಣೆ ಮಾಡುತ್ತಿದೆ. ಶಿಕ್ಷಕರು, ಪ್ರಯೋಗಾಲಯ ಸಹಾಯಕರು, ಕಿರಿಯ ಸಹಾಯಕರನ್ನು ಹೆಚ್ಚು ಸುರಕ್ಷಿತ ಸ್ಥಳ ಅಥವಾ ಅವರ ಮನೆಗೆ ಸಮೀಪದ ಸ್ಥಳಕ್ಕೆ ವರ್ಗಾವಣೆ ಮಾಡಲಾಗುತ್ತಿದೆ.
ಗಂಡ-ಹೆಂಡತಿ ಇಬ್ಬರೂ ಇಲಾಖೆಯಲ್ಲಿದ್ದರೆ ಅವರನ್ನು ಒಂದೇ ಕಚೇರಿಯಲ್ಲಿ ನೇಮಕ ಮಾಡಲು ಯತ್ನಿಸಲಾಗುತ್ತಿದೆ. ಈಗಾಗಲೇ 50ಕ್ಕೂ ಅಧಿಕ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದ್ದು, ಇನ್ನೂ ಅನೇಕರ ವರ್ಗಾವಣೆ ಪ್ರಗತಿಯಲ್ಲಿದೆ ಎಂದು ತಿಳಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 4000 ಕಾಶ್ಮೀರಿ ಪಂಡಿತರು ಪುನರ್ವಸತಿ ಯೋಜನೆಯಲ್ಲಿ ಸರ್ಕಾರಿ ಕೆಲಸ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.