ಜಮ್ಮು ಕಾಶ್ಮೀರ : ಉಗ್ರರ ದಾಳಿಗೆ ಓರ್ವ ಜವಾನ, ಪೌರನಿಗೆ ಗಾಯ
Team Udayavani, Apr 26, 2018, 4:28 PM IST
ಶ್ರೀನಗರ : ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿನ ಚೆಕ್ ಪಾಯಿಂಟ್ ಮೇಲೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಭದ್ರತಾ ಪಡೆ ಜವಾನ ಮತ್ತು ಓರ್ವ ನಾಗರಿಕ ಗಾಯಗೊಂಡರೆಂದು ಪೊಲೀಸರು ತಿಳಿಸಿದ್ದಾರೆ.
ಚೆಕ್ ಪಾಯಿಂಟ್ ಕಡೆಗೆ ಧಾವಿಸಿ ಬರುತ್ತಿದ್ದ ಖಾಸಗಿ ಕಾರೊಂದನ್ನು ನಿಲ್ಲಿಸುವಂತೆ ಭದ್ರತಾ ಸಿಬಂದಿಗಳು ಸೂಚಿಸಿದಾಗ ಕಾರನ್ನು ನಿಲ್ಲಿಸುವ ಬದಲು ಅದರೊಳಗಿದ್ದವರು ಗುಂಡಿನ ದಾಳಿ ನಡೆಸಿದರು. ಪರಿಣಾಮವಾಗಿ ಓರ್ವ ಭದ್ರತಾ ಸಿಬಂದಿ ಮತ್ತು ಓರ್ವ ನಾಗರಿಕ ಗಾಯಗೊಂಡರು.
ಅನಂತ್ನಾಗ್ನ ಲಾಜಿಬಾಲ್ ಪ್ರದೇಶವಾಗಿ ಉಗ್ರರು ಸಾಗಿ ಬರುತ್ತಿದ್ದಾರೆಂಬ ಮಾಹಿತಿ ಪಡೆದಿದ್ದ ಪೊಲೀಸ್ ಮತ್ತು ಸಿಆರ್ಪಿಎಫ್ ಸಿಬಂದಿಗಳು ಚೆಕ್ ಪಾಯಿಂಟ್ ನಿರ್ಮಿಸಿದ್ದರು. ಗುಂಡಿನ ದಾಳಿ ನಡೆಸಿರುವ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ನಡೆಸಲು ದಕ್ಷಿಣ ಕಾಶ್ಮೀರದಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ
Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?
Promotion: ಕೊಡಗಿನ ಮಧು ಮೊಣ್ಣಪ್ಪ ಸುಬೇದಾರ್ ಮೇಜರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.