ಜಬಲ್ಪುರದ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ: 4 ಕ್ಕೂ ಹೆಚ್ಚು ಬಲಿ
Team Udayavani, Aug 1, 2022, 4:47 PM IST
ಜಬಲ್ಪುರ: ನಗರದ ಆಸ್ಪತ್ರೆಯೊಂದರಲ್ಲಿ ಸೋಮವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ವರದಿಗಳ ಪ್ರಕಾರ, ಭೀಕರ ಅವಘಡದಲ್ಲಿ 4 ಜನರು ಸಾವನ್ನಪ್ಪಿದ್ದು,ಹಲವರು ಗಾಯಗೊಂಡಿದ್ದಾರೆ.
ನ್ಯೂ ಲೈಫ್ ಮೆಡಿಸಿಟಿ ಆಸ್ಪತ್ರೆಯಲ್ಲಿ ಅವಘಡ ಸಂಭವಿಸಿದ್ದು, ಸ್ಥಳದಲ್ಲಿ ಹಲವಾರು ಅಗ್ನಿಶಾಮಕ ದಳದ ತಂಡಗಳು ಬೆಂಕಿಯನ್ನು ನಿಯಂತ್ರಿಸಲು ಮತ್ತು ರೋಗಿಗಳನ್ನು ಸ್ಥಳಾಂತರಿಸಲು ಪ್ರಯತ್ನಿಸುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾಲ್ವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದು ಭಾರಿ ಬೆಂಕಿಯಾಗಿದ್ದು, ನಮ್ಮ ತಂಡಗಳು ಆಸ್ಪತ್ರೆಯಲ್ಲಿ ಸಿಲುಕಿದ್ದ ಎಲ್ಲ ಜನರನ್ನು ರಕ್ಷಿಸಿವೆ ಎಂದು ಜಬಲ್ಪುರ ಸಿಎಸ್ಪಿ ಅಖಿಲೇಶ್ ಗೌರ್ ತಿಳಿಸಿದ್ದಾರೆ.
ಬೆಂಕಿಗೆ ಶಾರ್ಟ್ ಸರ್ಕ್ಯೂಟ್ ಕಾರಣ ಇರಬಹುದು, ಆಸ್ಪತ್ರೆಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಜಬಲ್ಪುರ್ ಆಸ್ಪತ್ರೆಯ ಬೆಂಕಿ ಅವಘಡಕ್ಕೆ ತೀವ್ರ ಕಳವಳ ವ್ಯಕ್ತ ಪಡಿಸಿದ್ದು, ಸಾವನ್ನಪ್ಪಿದವರಿಗೆ ತಲಾ 5 ಲಕ್ಷ ರೂ.ಪರಿಹಾರ ಘೋಷಿಸಿದ್ದಾರೆ.
ಹೆಚ್ಚಿನ ವಿವರ ನೀರಿಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.