INDvsPAK; ರಿಜ್ವಾನ್ ಎದುರಲ್ಲಿ ‘ಜೈ ಶ್ರೀರಾಮ್’ ಘೋಷಣೆ; ಕಿಡಿಕಾರಿದ ಉದಯನಿಧಿ ಸ್ಟಾಲಿನ್
Team Udayavani, Oct 15, 2023, 11:15 AM IST
ಅಹಮದಾಬಾದ್/ಚೆನ್ನೈ: ಭಾರತ-ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ವಿಶ್ವಕಪ್ ಪಂದ್ಯ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಶನಿವಾರ ನಡೆಯಿತು. ಬಾಬರ್ ಅಜಂ ಪಡೆಯನ್ನು ಸುಲಭವಾಗಿ ಸೋಲಸಿದ ಟೀಂ ಇಂಡಿಯಾ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ನೆಗೆಯಿತು.
ಈ ಪಂದ್ಯದ ವೇಳೆ ಪಾಕಿಸ್ತಾನದ ಆಟಗಾರ ಮುಹಮ್ಮದ್ ರಿಜ್ವಾನ್ ಡ್ರೆಸ್ಸಿಂಗ್ ರೂಮ್ ಗೆ ತೆರಳುತ್ತಿದ್ದಾಗ ಪ್ರೇಕ್ಷಕರು “ಜೈ ಶ್ರೀ ರಾಮ್” ಘೋಷಣೆಗಳನ್ನು ಕೂಗುವ ವೀಡಿಯೊಗಳು ವೈರಲ್ ಆಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಸಚಿವ, ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್, ‘’ಅಭಿಮಾನಿಗಳ ವರ್ತನೆ ಸ್ವೀಕಾರಾರ್ಹವಲ್ಲ” ಎಂದಿದ್ದಾರೆ.
ಎಕ್ಸ್ ಜಾಲತಾಣದಲ್ಲಿ (ಟ್ವಿಟ್ಟರ್) ಪೋಸ್ಟ್ ಹಾಕಿರುವ ಉದಯನಿಧಿ ಸ್ಟಾಲಿನ್, “ಭಾರತವು ತನ್ನ ಕ್ರೀಡಾ ಮನೋಭಾವ ಮತ್ತು ಆತಿಥ್ಯಕ್ಕೆ ಹೆಸರುವಾಸಿಯಾಗಿದೆ. ಆದರೆ ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಾಕಿಸ್ತಾನದ ಆಟಗಾರರಿಗೆ ನೀಡಿದ ಆತಿಥ್ಯ ಸ್ವೀಕಾರಾರ್ಹವಲ್ಲ. ಕ್ರೀಡೆಗಳು ಏಕೀಕರಣಗೊಳ್ಳುವಂತೆ ಮಾಡಬೇಕು. ದೇಶಗಳ ನಡುವೆ ಬಲ, ನಿಜವಾದ ಸಹೋದರತ್ವವನ್ನು ಬೆಳೆಸಬೇಕು, ಆದರೆ ದ್ವೇಷವನ್ನು ಹರಡುವ ಸಾಧನವಾಗಿ ಬಳಸುವುದು ಖಂಡನೀಯ” ಎಂದಿದ್ದಾರೆ.
ಪಾಕಿಸ್ತಾನದ ವಿಕೆಟ್ ಕೀಪರ್ ಬ್ಯಾಟರ್ ರಿಜ್ವಾನ್ 69 ಎಸೆತಗಳಲ್ಲಿ 49 ರನ್ ಗಳಿಸಿ ಔಟಾದರು. ನಂತರ ಡ್ರೆಸ್ಸಿಂಗ್ ಕೋಣೆಗೆ ಹಿಂತಿರುಗುತ್ತಿದ್ದಾಗ ಪ್ರೇಕ್ಷಕರು “ಜೈ ಶ್ರೀ ರಾಮ್” ಎಂದು ಘೋಷಣೆ ಕೂಗುವುದನ್ನು ವೀಡಿಯೊದಲ್ಲಿ ಕಾಣಬಹುದು.
Pàkistan batsman Muhammad Rizwan was returning to the pavilion after getting out.
He had to face ‘Jai Shri Ram’ chants from the crowd of Narendra Módi stadium during #IndiaVsPakistan WC today.
Thoughts? pic.twitter.com/IvbpFnE8fh
— Amock (@Politics_2022_) October 14, 2023
ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಅವರು ಮಾತನಾಡುತ್ತಿದ್ದ ವೇಳೆಯೂ ಅಭಿಮಾನಿಗಳು ಕೂಡ ಬೊಬ್ಬೆ ಹೊಡೆದರು.
ಭಾರತವು ಏಳು ವಿಕೆಟ್‌ಗಳಿಂದ ಪಾಕಿಸ್ತಾನವನ್ನು ಸೋಲಿಸಿದ ನಂತರ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಬಾಬರ್ ಅಜಮ್ ಗೆ ಸಹಿ ಮಾಡಿದ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದರು.
ಸತತ ಮೂರು ಪಂದ್ಯಗಳನ್ನು ಗೆದ್ದಿರುವ ಟೀಂ ಇಂಡಿಯಾ ಮುಂದಿನ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಎದುರಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.