UP mosque wall: ಮಸೀದಿ ಗೋಡೆ ಮೇಲೆ ʼಜೈ ಶ್ರೀರಾಮ್ʼ ಬರೆದು, ಹಾನಿ; ಕ್ರಮಕ್ಕೆ ಆಗ್ರಹ
Team Udayavani, Dec 25, 2023, 10:40 AM IST
ಲಕ್ನೋ: ಮಸೀದಿಯ ಗೋಡೆ ಮೇಲೆ ʼಜೈ ಶ್ರೀರಾಮ್ʼ ಘೋಷಣೆಯನ್ನು ಬರೆದು, ಹಾನಿ ಮಾಡಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಶನಿವಾರ (ಡಿ.23 ರಂದು) ಉತ್ತರ ಪ್ರದೇಶದ ಅಲಿಗಢ್‌ನ ದೆಹಲಿ ಗೇಟ್ ಮಸೀದಿಯೊಂದರ ʼಜೈ ಶ್ರೀರಾಮ್ʼ ಎನ್ನುವ ಬರಹವನ್ನು ಬರೆಯಲಾಗಿದೆ. ಆ ಬಳಿಕ ಗೋಡೆಯನ್ನು ಧ್ವಂಸ ಮಾಡಲಾಗಿದೆ. ಈ ಘಟನೆಯ ವಿಡಿಯೋ ಕ್ಯಾಮಾರದಲ್ಲಿ ಸೆರೆಯಾಗಿದೆ.
ಘಟನೆ ನಂತರ ಸಮಾಜವಾದಿ ಪಕ್ಷದ (ಎಸ್‌ಪಿ) ನಿಯೋಗವು ಪೊಲೀಸರನ್ನು ಭೇಟಿ ಮಾಡಿ, ಈ ಬಗ್ಗೆ ಔಪಚಾರಿಕ ದೂರು ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮೃಗಾಂಕ್ ಶೇಖರ್ ಪಾಠಕ್ ತಿಳಿಸಿದ್ದಾರೆ.
ಇದನ್ನೂ ಓದಿ: ತನ್ನ ಜಮೀನಿನಿಂದ ಹೂಕೋಸು ಕಿತ್ತು ತಂದಿದ್ದಕ್ಕೆ ತಾಯಿಯನ್ನೇ ಕಂಬಕ್ಕೆ ಕಟ್ಟಿ ಥಳಿಸಿದ ಮಗ
ಕೆಲವು ಸಮಾಜ ವಿರೋಧಿಗಳು ಇಂತಹ ಚಟುವಟಿಕೆಗಳಲ್ಲಿ ತೊಡಗುವ ಮೂಲಕ ನಗರದ ವಾತಾವರಣವನ್ನು ಹಾಳು ಮಾಡಿದ್ದಾರೆ. ಕೂಡಲೇ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸುವುದಾಗಿ ನಿಯೋಗದಲ್ಲಿದ್ದ ಸಮಾಜವಾದಿ ಪಕ್ಷದ ಸಚಿವ ಮನೋಜ್ ಯಾದವ್ ಎಚ್ಚರಿಸಿದ್ದಾರೆ.
ಶೀಘ್ರದಲ್ಲಿ ಈ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲಾಗುವುದೆಂದು ಪೊಲೀಸರು ಹೇಳಿದ್ದಾರೆ.
अलीगढ़ में दंगा भड़काने की कोशिश, एक मस्जिद पर शर्पसंदों द्वारा जय श्रीराम लिखा गया, पुलिस ने मौके पर पहुंचकर धार्मिक नारे को रंग पुतवा कर मीटवाया, आपसी समझौते के बाद शांति बहाल। pic.twitter.com/VNKDLHjel2
— Millat Times (@Millat_Times) December 24, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
MUST WATCH
ಹೊಸ ಸೇರ್ಪಡೆ
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.