ಜೆಇಇ- ಅಡ್ವಾನ್ಸ್ಡ್ ಫಲಿತಾಂಶ ಪ್ರಕಟ: ಮೃದುಲ್ ಟಾಪರ್
ಮಹಿಳೆಯರಲ್ಲಿ ದೆಹಲಿಯ ಕಾವ್ಯಾ ಚೋಪ್ರಾ "ಉನ್ನತ' ಸಾಧನೆ
Team Udayavani, Oct 15, 2021, 10:30 PM IST
ನವದೆಹಲಿ: ದೇಶದ ಪ್ರತಿಷ್ಠಿತ ಐಐಟಿಗಳಲ್ಲಿನ ದಾಖಲಾತಿಗಾಗಿ ರಾಷ್ಟ್ರಮಟ್ಟದಲ್ಲಿ ನಡೆಸಲಾಗುವ ಜೆಇಇ- ಅಡ್ವಾನ್ಸ್ಡ್ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು, ದೆಹಲಿ ವಲಯದ ಅಭ್ಯರ್ಥಿ ಮೃದುಲ್ ಅಗರ್ವಾಲ್ ಮೊದಲಿಗರಾಗಿ ಹೊರಹೊಮ್ಮಿದ್ದಾರೆ.
ಐಐಟಿ ಬಾಂಬೆ ಸಂಸ್ಥೆಗೆ ದಾಖಲಾಗಿ, ಬಿ.ಟೆಕ್ ಪದವಿ ಪಡೆಯುವ ಗುರಿಯನ್ನಿಟ್ಟುಕೊಂಡಿರುವ ಮೃದುಲ್, 360 ಅಂಕಗಳ ಪೈಕಿ 348 ಅಂಕ ಪಡೆಯುವ ಮೂಲಕ, ಈವರೆಗೆ ಈ ಪರೀಕ್ಷೆ ಎದುರಿಸಿರುವ ಅಭ್ಯರ್ಥಿಗಳಲ್ಲೇ ಅತಿ ಹೆಚ್ಚು ಅಂಕ ಗಳಿಸಿದವರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಮಹಿಳೆಯರಲ್ಲಿ ಕಾವ್ಯಾಗೆ ಅಗಸ್ಥಾನ:
ದೆಹಲಿ ವಲಯದವರೇ ಆದ ಕಾವ್ಯಾ ಚೋಪ್ರಾ ಎಂಬವರು ಮಹಿಳಾ ಅಭ್ಯರ್ಥಿಗಳಲ್ಲಿ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಒಟ್ಟು 360 ಅಂಕಗಳಲ್ಲಿ ಅವರು 286 ಅಂಕ ಗಳಿಸಿದ್ದು ಸಮಗ್ರ ರ್‍ಯಾಂಕಿಂಗ್‌ನಲ್ಲಿ 98ನೇ ರ್‍ಯಾಂಕ್ ಗಳಿಸಿದ್ದಾರೆ.
ಇದನ್ನೂ ಓದಿ:ಮೂಕ ಪ್ರಾಣಿಯ ಈ ಪ್ರೀತಿಗೆ ಭಾಷೆಯಿಲ್ಲ!
ಆ ಮೂಲಕ, ಈ ಬಾರಿಯ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ಮಹಿಳೆ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಇವರು, ಇತ್ತೀಚೆಗೆ ಪ್ರಕಟವಾಗಿದ್ದ ಜೆಇಇ-ಮೈನ್ಸ್ ಪರೀಕ್ಷೆಯಲ್ಲಿ ಶೇ. 100ರಷ್ಟು ಅಂಕಗಳನ್ನು ಗಳಿಸಿ, ಆ ಪರೀಕ್ಷೆಯಲ್ಲಿ ಮೊದಲ ರ್‍ಯಾಂಕ್ ಪಡೆದಿದ್ದ 17 ಮಂದಿಯಲ್ಲಿ ಒಬ್ಬರೆನಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.