ಜೈಪುರ: ಹಳಿ ತಪ್ಪಿದ ಗೂಡ್ಸ್ ರೈಲು… 7 ರೈಲುಗಳ ಸಂಚಾರ ಸ್ಥಗಿತ
Team Udayavani, Jul 15, 2023, 12:02 PM IST
ಜೈಪುರ: ಗೂಡ್ಸ್ ರೈಲೊಂದು ಹಳಿ ತಪ್ಪಿದ ಪರಿಣಾಮ ಈ ಮಾರ್ಗದಲ್ಲಿ ಸಂಚರಿಸುವ ಸುಮಾರು ಏಳು ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜೈಪುರ-ಮದರ್ ರೈಲ್ವೆ ವಿಭಾಗದ ಅಸಲ್ಪುರ್ ಜಾಬ್ನರ್ ಮತ್ತು ಹಿರ್ನೋಡಾ ನಿಲ್ದಾಣಗಳ ನಡುವೆ ಗೂಡ್ಸ್ ರೈಲಿನ ಎರಡು ವ್ಯಾಗನ್‌ಗಳು ಹಳಿತಪ್ಪಿದ್ದು ಪರಿಣಾಮ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಈ ಪ್ರದೇಶವು ವಾಯುವ್ಯ ರೈಲ್ವೇಯ (NWR) ಜೈಪುರ ವಿಭಾಗದ ವ್ಯಾಪ್ತಿಗೆ ಒಳಪಡುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳದಲ್ಲಿ ಅಧಿಕಾರಿಗಳು ಧಾವಿಸಿದ್ದು ಹಳಿ ತಪ್ಪಿದ ರೈಲಿನ ದುರಸ್ಥಿ ಕಾರ್ಯ ಪ್ರಗತಿಯಲ್ಲಿದ್ದು ಆದಷ್ಟು ಬೇಗ ರೈಲು ಸಂಚಾರ ಆರಂಭಗೊಳ್ಳುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದಾರೆ.
ಈ ಅವಘಡದಿಂದಾಗಿ 19735 ಜೈಪುರ-ಮಾರ್ವಾರ್ ಜಂಕ್ಷನ್ ಎಕ್ಸ್‌ಪ್ರೆಸ್, 19736 ಮಾರ್ವಾರ್ ಜಂಕ್ಷನ್-ಜೈಪುರ ಎಕ್ಸ್‌ಪ್ರೆಸ್ ರೈಲು,
22977 ಜೈಪುರ-ಜೋಧಪುರ ಇಂಟರ್‌ಸಿಟಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, 22978 ಜೋಧ್‌ಪುರ-ಜೈಪುರ ಇಂಟರ್‌ಸಿಟಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, 09605 ಅಜ್ಮೀರ್-ಜೈಪುರ DEMU ವಿಶೇಷ ರೈಲು ಹಾಗೂ 09606 ಜೈಪುರ-ಅಜ್ಮೀರ್ DEMU ವಿಶೇಷ ರೈಲಿನ ಸಂಚಾರ ರದ್ದುಗೊಂಡಿದೆ.
ವಾಯುವ್ಯ ರೈಲ್ವೇಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಕ್ಯಾಪ್ಟನ್ ಶಶಿ ಕಿರಣ್ ಹೇಳಿಕೆಯಂತೆ “ಸರಕು ರೈಲಿನ PJCR ಮತ್ತು ALKP ಸಂಖ್ಯೆಗಳನ್ನು ಹೊಂದಿರುವ ಎರಡು ವ್ಯಾಗನ್‌ಗಳು ಹಳಿತಪ್ಪಿದ ಕಾರಣ ರೈಲು ಸಂಚಾರಕ್ಕೆ ತೊಂದರೆಯಾಗಿದೆ ಕೂಡಲೇ ಇದರ ದುರಸ್ಥಿ ಕಾರ್ಯ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಬೌನ್ಸರ್, ಸಿಸಿ ಕ್ಯಾಮೆರಾ ಬಳಿಕ ಟೊಮ್ಯಾಟೋ ರಕ್ಷಣೆಗೆ ಬಂದ ಬುಸ್… ಬುಸ್…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.