ಒಂಟಿಯಾಗಿರ್ಬೇಡಿ ಮೋದಿ,ನನ್ನನ್ನ ಮದ್ವೆ ಆಗಿ !!
Team Udayavani, Oct 7, 2017, 10:16 AM IST
ಹೊಸದಿಲ್ಲಿ: ಅತ್ಯಂತ ವಿಲಕ್ಷಣ ಘಟನೆಯೊಂದರಲ್ಲಿ ಜೈಪುರದ 40 ರ ಹರೆಯದ ಮಹಿಳೆಯೊಬ್ಬಳು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮದುವೆಯಾಗಬೇಕೆಂಬ ಹಠದಲ್ಲಿ ದೆಹಲಿಯ ಜಂತರ್‌ಮಂತರ್‌ನಲ್ಲಿ ಕಳೆದೊಂದು ತಿಂಗಳಿನಿಂದ ಧರಣಿ ಕುಳಿತಿದ್ದಾಳೆ.
ಓಂ ಶಾಂತಿ ಶರ್ಮಾ ಎಂಬ ಮಹಿಳೆ ಸೆಪ್ಟೆಂಬರ್ 8 ರಿಂದ ಜಂತರ್‌ಮಂತರ್‌ನಲ್ಲಿ ಕುಳಿತಿದ್ದು,’ನನ್ನ ಮಾನಸಿಕ ಸ್ಥಿತಿ ಸರಿಯಾಗಿಯೇ ಇದೆ. ನನಗೆ ಈ ಹಿಂದೆ ವಿವಾಹವಾಗಿದ್ದು, ಆದರೆ ನಮ್ಮ ಸಂಬಂಧ ಸರಿ ಹೋಗದ ಕಾರಣ ಇದೀಗ ಒಂಟಿಯಾಗಿದ್ದೇನೆ. ಮೋದಿ ಅವರೂ ನನ್ನ ಹಾಗೆ ಒಂಟಿಯಾಗಿದ್ದಾರೆ ಅವರು ನನ್ನನ್ನು ಮದುವೆಯಾಗಲಿ’ ಎಂದು ಹೇಳಿಕೊಂಡಿದ್ದಾಳೆ.
‘ಈ ವಿಚಾರ ಕೇಳಿ ಜನರು ನಗುತ್ತಾರೆ ಎಂದು ನನಗೆ ಗೊತ್ತಿದೆ. ನಾವು ಹಿರಿಯರಿಗೆ ಸಹಕಾರ ಮಾಡುವುದು ನಮ್ಮ ಸಂಸ್ಕೃತಿ.ಚಿಕ್ಕಂದಿನಿಂದಲೂ ನಾನು ಹಿರಿಯರಿಗೆ ಗೌರವ ನೀಡಿಕೊಂಡು ಬಂದವಳು. ನಾನು ಮೋದಿ ಅವರ ಕೆಲಸದಲ್ಲಿ ನೆರವಾಗಬೇಕೆಂದು ಮದುವೆ ಮಾಡಿಕೊಳ್ಳಿ ಎಂದು ಬೇಡಿಕೊಳ್ಳುತ್ತಿದ್ದೇನೆ’ ಎಂದಿದ್ದಾಳೆ.
ಮೊದಲ ವಿವಾಹದಿಂದ ಪಡೆದ 20 ವರ್ಷದ ಮಗಳನ್ನೂ ಹೊಂದಿರುವ ಶರ್ಮಾ ಸಿರಿವಂತ ಮಹಿಳೆ. ಆಕೆಯ ಬಳಿ ಸಾಕಷ್ಟು ಹಣ ಮತ್ತು ಜಮೀನು ಇದೆ ಎನ್ನಲಾಗಿದೆ.
‘ಮೋದಿ ಅವರು ಬಂದು ನನ್ನನ್ನು ಭೇಟಿಯಾಗುವ ವರೆಗೆ ನಾನು ಇಲ್ಲಿಂದ ಕದಲುವುದಿಲ್ಲ’ ಎಂದು ಪಟ್ಟು ಹಿಡಿದಿದ್ದಾಳೆ.
ಗುರುದ್ವಾರಗಳಲ್ಲಿ ಊಟ ಸೇವಿಸಿ, ಸಾರ್ವಜನಿಕ ಶೌಚಾಲಯಗಳನ್ನು ಬಳಸಿಕೊಂಡು ದಿನ ಕಳೆಯುತ್ತಿರುವ ಶಾಂತಿ ಶರ್ಮಾಗೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಸ್ಥಳ ಬಿಟ್ಟು ಬೇರೆ ಕಡೆ ಕೂರಲು ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.