ನಾಯ್ಡು ವಿರುದ್ಧ ಕಾಂಗ್ರೆಸ್‌ ಭೂ ಅವ್ಯವಹಾರದ ಅಸ್ತ್ರ


Team Udayavani, Jul 25, 2017, 8:20 AM IST

Venkaiah-Naidu-900.jpg

ಹೊಸದಿಲ್ಲಿ: ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ, ಎಂ.ವೆಂಕಯ್ಯ ನಾಯ್ಡು ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ಭೂ ಅವ್ಯವಹಾರ ಕುರಿತ ಆರೋಪವೊಂದನ್ನು ಕಾಂಗ್ರೆಸ್‌ ಲೋಕಸಭೆಯಲ್ಲಿ ಪ್ರಸ್ತಾವಿಸಿದ್ದು, ಬಿಜೆಪಿಗೆ ಮುಜುಗರ ತಂದೊಡ್ಡಿದೆ. ಪಾರದರ್ಶಕತೆ, ಸಂಭಾವ್ಯತೆ ಬಗ್ಗೆ ಯಾವಾಗಲೂ ಮಾತನಾಡುವ ನಾಯ್ಡು ಅವರು ಈ ಬಗ್ಗೆ ಮಾತನಾಡಲಿ ಎಂದು ಕಾಂಗ್ರೆಸ್‌ ಸವಾಲೆಸೆದಿದೆ. ಆಂಧ್ರದ ನೆಲ್ಲೂರಿನಲ್ಲಿ ಬಡವರಿಗೆ, ಭೂಮಿ ರಹಿತರಿಗೆ ಮೀಸಲಾದ ಭೂಮಿಯನ್ನು ನಾಯ್ಡು ಅವರು ವಶಪಡಿಸಿಕೊಂಡಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ಜೈರಾಂ ರಮೇಶ್‌ ಆರೋಪಿಸಿದರು. ಅಲ್ಲದೇ ಈ ಬಗ್ಗೆ  ಜನತೆಯ ಪ್ರತಿಭಟನೆ, ರಾಜಕೀಯ ಒತ್ತಡದ ಬಳಿಕ ಅದನ್ನು ವಾಪಸ್‌ ಮಾಡಿದ್ದಾರೆ ಎಂದು ಆರೋಪಿಸಿದರು.

ಈ ಬಗ್ಗೆ ಮಾಧ್ಯಮ ಮಂದಿಯೊಂದಿಗೆ ಪ್ರತಿಕ್ರಿಯಿಸಿದ ನಾಯ್ಡು ಅವರು, ‘ಈ ವಿಚಾರದಲ್ಲಿ ಕೆಲವರು ಕೋರ್ಟ್‌ಗೆ ಹೋಗಿದ್ದಾರೆ. ಕೋರ್ಟ್‌ ಅದನ್ನು ವಜಾಗೊಳಿಸಿದೆ. ಚುನಾವಣೆ  ವೇಳೆ ಅವರು ಯಾವ ಮಟ್ಟಕ್ಕೂ ಇಳಿಯುತ್ತಾರೆ ಎಂಬುದು ಬೇಸರ ತರಿಸಿದೆ’ ಎಂದಿದ್ದಾರೆ. ಇನ್ನು, ‘ನಾಯ್ಡು ವಿರುದ್ಧದ ಆರೋಪ ನಿರಾಧಾರ ಮತ್ತು ಋಜುವಾತು ಆಗದ ವಿಚಾರ’ ಎಂದು ಕೇಂದ್ರ ಸಚಿವ ಅನಂತ್‌ ಕುಮಾರ್‌ ಹೇಳಿದ್ದಾರೆ.

ಇನ್ನು, 2017 ಜೂ 20ರಂದು ಆರೋಪ ಮಾಡಿದ್ದ ಜೈರಾಂ, ‘ನಾಯ್ಡು ಅವರು ಪುತ್ರಿಗೆ ಸೇರಿದ ಸ್ವರ್ಣ ಭಾರತ ಟ್ರಸ್ಟ್‌ ಹೈದ್ರಾಬಾದ್‌ ಮೆಟ್ರೋಪಾಲಿಟನ್‌ ಅಭಿವೃದ್ಧಿ ಪ್ರಾಧಿಕಾರಕ್ಕೆ ನೀಡಬೇಕಿದ್ದ 2 ಕೋಟಿ ಮೊತ್ತಕ್ಕೆ ತೆಲಂಗಾಣ ಸರಕಾರ ಗುಟ್ಟಾಗಿ ವಿನಾಯಿತಿ ನೀಡಿದೆ’ ಎಂದಿದ್ದರು. ಅಲ್ಲದೇ 2014 ಜುಲೈನಲ್ಲಿ ತೆಲಂಗಾಣ ಸರಕಾರ ನಾಯ್ಡು ಪುತ್ರಗೆ ಸೇರಿದ ಹರ್ಷ ಟೊಯೊಟಾದಿಂದ ಟೆಂಡರ್‌ ಕರೆಯದೇ 271 ಕೋಟಿ ರೂ. ಮೌಲ್ಯದ ಕಾರುಗಳ ಖರೀದಿಗೆ ಮುಂದಾಗಿದೆ ಎಂದು ದೂರಿದ್ದರು.

ಒಎನ್‌ಜಿಸಿ ತೆಕ್ಕೆ ಸೇರಿದ ಎಚ್‌ಪಿಸಿಎಲ್‌: ಸರಕಾರಿ ಸ್ವಾಮ್ಯದ ಮೂರನೇ ಅತಿ ದೊಡ್ಡ ಕಂಪನಿ ಹಿಂದುಸ್ತಾನ್‌ ಪೆಟ್ರೋಲಿಯಂ ಕಾರ್ಪೋರೇಷನ್‌ (ಎಚ್‌ಪಿಸಿಎಲ್‌) ಇದೀಗ ಸರಕಾರಿ ಸ್ವಾಮ್ಯದ ಇನ್ನೊಂದು ಕಂಪನಿ ಒಎನ್‌ಜಿಸಿ ತೆಕ್ಕೆ ಸೇರಿದೆ. ಒಎನ್‌ಜಿಸಿ ಸರಕಾರದ ಬಳಿ ಇದ್ದ ಎಲ್ಲಾ ಶೇ. 51.11 ಷೇರುಗಳನ್ನು ಖರೀದಿಸಿದೆ. ಆದಾಗ್ಯೂ ಎಚ್‌ಪಿಸಿಎಲ್‌ ಸರಕಾರಿ ಸ್ವಾಮ್ಯದ ಕಂಪನಿಯಾಗಿಯೇ ಮುಂದುವರಿಯಲಿದೆ. ಈ ಬಗ್ಗೆ ಹೇಳಿಕೆ ನೀಡಿದ ಕೇಂದ್ರ ತೈಲ ಸಚಿವ ಧರ್ಮೇಂದ್ರ ಪ್ರಧಾನ್‌, ಷೇರು ಖರೀದಿಗೆ ಆರ್ಥಿಕ ವ್ಯವಹಾರಗಳ ಕುರಿತ ಸಂಪುಟ ಸಮಿತಿ ಸಮ್ಮತಿ ಸೂಚಿಸಿದೆ ಎಂದಿದ್ದಾರೆ. 

ಬ್ಯಾಂಕ್‌ ನಿಯಂತ್ರಣ ತಿದ್ದುಪಡಿ ಕಾಯ್ದೆ ಮಂಡನೆ: ಬ್ಯಾಂಕ್‌ಗಳಲ್ಲಿರುವ ನಿರ್ಬಂಧಿತ ಆಸ್ತಿ ಕುರಿತಂತೆ ನಿರ್ದೇಶನಗಳನ್ನು ನೀಡಲು ಆರ್‌ಬಿಐಗೆ ಅನುಕೂಲ ಮಾಡಿಕೊಡುವ ‘ಬ್ಯಾಂಕ್‌ ನಿಯಂತ್ರಣ ತಿದ್ದುಪಡಿ ಕಾಯ್ದೆ 2017’ನ್ನು ಸಚಿವ ಅರುಣ್‌ ಜೇಟ್ಲಿ ಮಂಡಿಸಿದರು. ಮಸೂದೆ ಬಗ್ಗೆ ಆಕ್ಷೇಪ ವ್ಯಕ್ತಪ ಡಿಸಿದ, ಟಿಎಂಸಿ ಸದಸ್ಯರಾದ ಸುಗತಾ ರಾಯ್‌, ಅಪನಗದೀಕರಣ ಬಳಿಕ ಹಣ ಎಣಿಕೆ ಮಾಡಲು ಸಾಧ್ಯವಾಗಿಲ್ಲ. ಅಂಥದ್ದರಲ್ಲಿ, ಸಣ್ಣ ಮತ್ತು ಅತಿ ಸಣ್ಣ ಆರ್ಥಿಕ ವಿಚಾರಗಳ ಬಗ್ಗೆ ಬ್ಯಾಂಕ್‌ ಆಡಳಿತ ಮಂಡಳಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ಆರ್‌ಬಿಐಗೆ ಈ ಬಗ್ಗೆ ಅನುಮತಿಸುವುದು ವ್ಯರ್ಥ ಎಂದಿದ್ದಾರೆ.

1, 2, 10 ರೂ. ನಾಣ್ಯಗಳನ್ನು ಸ್ವೀಕರಿಸುತ್ತಿಲ್ಲ
1, 2, 10 ರೂ. ನಾಣ್ಯಗಳನ್ನು ಅಂಗಡಿಗಳಲ್ಲಿ ಸ್ವೀಕರಿಸುತ್ತಿಲ್ಲ ಎಂಬ ವಿಚಾರ ರಾಜ್ಯಸಭೆಯಲ್ಲಿ ಪ್ರಸ್ತಾಪವಾಗಿದೆ. ಶೂನ್ಯ ವೇಳೆಯಲ್ಲಿ ಈ ವಿಚಾರವನ್ನು ಪ್ರಸ್ತಾವಿಸಿದ ಜೆಡಿಯು ಸಂಸದ ಅಲಿ ಅನ್ವರ್‌ ಅನ್ಸಾರಿ ಅವರು, ಅಂಗಡಿಗಳು ಮಾತ್ರವಲ್ಲದೆ, ಕೆಲವೆಡೆ ಬ್ಯಾಂಕುಗಳೂ ಈ ನಾಣ್ಯಗಳನ್ನು ಸ್ವೀಕರಿಸುತ್ತಿಲ್ಲ. ಇದರಿಂದ ಬಡವರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದರು. ಅಲ್ಲದೇ ಲೇವಡಿ ಮಾಡುತ್ತ, 2ನೇ ಬಾರಿಗೆ ಅಪನಗದೀಕರಣ ನಡೆಸಿದಲ್ಲಿ ನಾಣ್ಯಗಳನ್ನು ವಾಪಸ್‌ ಪಡೆದುಕೊಳ್ಳಬೇಕು ಎಂದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌ ಶಾ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.