ಅಯೋಧ್ಯೆಗೆ ಬಿಗಿ ಭದ್ರತೆ : ಜೈಶ್ ಉಗ್ರ ಮಸೂದ್ ಅಜರ್ನಿಂದ ದಾಳಿಗೆ ಕರೆ
Team Udayavani, Dec 25, 2019, 10:14 PM IST
ನವದೆಹಲಿ: ಕುಖ್ಯಾತ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯು ಸದ್ಯದಲ್ಲೇ ಅಯೋಧ್ಯೆಯ ಮೇಲೆ ದಾಳಿ ನಡೆಸುವ ಷಡ್ಯಂತ್ರವೊಂದನ್ನು ರೂಪಿಸಿದೆ ಎಂದು ಕೇಂದ್ರ ಗುಪ್ತಚರ ಇಲಾಖೆಯು ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ, ಉತ್ತರ ಪ್ರದೇಶ ರಾಜ್ಯ ಸರ್ಕಾರ, ಅಯೋಧ್ಯೆಯಾದ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಿದೆ.
ಉಗ್ರ ಮಸೂದ್ ಅಜರ್, “ಟೆಲಿಗ್ರಾಂ’ ಎಂಬ ಸಾಮಾಜಿಕ ಜಾಲತಾಣದ ಮೂಲಕ ತನ್ನ ಬೆಂಬಲಿಗರಿಗೆ ಅಯೋಧ್ಯೆ ಹಾಗೂ ಭಾರತದ ಇನ್ನಿತರ ಭಾಗಗಳ ಮೇಲೆ ಭೀಕರ ದಾಳಿಯನ್ನು ನಡೆಸುವಂತೆ ಕರೆ ನೀಡಿದ್ದಾನೆಂದು ಗುಪ್ತಚರ ಇಲಾಖೆ, ಭದ್ರತಾ ಪಡೆಗಳಿಗೆ ಹಾಗೂ ಸರ್ಕಾರಕ್ಕೆ ಮಾಹಿತಿ ನೀಡಿದೆ.
ಇತ್ತೀಚೆಗಷ್ಟೇ, ಪಾಕಿಸ್ತಾನ ಮೂಲದ ಏಳು ಉಗ್ರರು ಈಗಾಗಲೇ ಭಾರತದೊಳಕ್ಕೆ ನುಸುಳಿ ಬಂದಿದ್ದು, ಅವರು ಉತ್ತರ ಪ್ರದೇಶದ ಗೋರಖ್ಪುರ, ಅಯೋಧ್ಯೆ ನಗರಗಳಲ್ಲಿ ತಲೆಮರೆಸಿಕೊಂಡಿದ್ದಾರೆ. ಇವರಲ್ಲಿ ಐವರ ಗುರುತು ಪತ್ತೆಯಾಗಿದ್ದು, ಅವರನ್ನು ಅಬು ಹಮ್ಜಾ, ಮೊಹಮ್ಮದ್ ಯಾಕೂಬ್, ನಿಸಾರ್ ಅಹ್ಮದ್, ಮೊಹಮ್ಮದ್ ಶಾಬಾಜ್, ಮೊಹಮ್ಮದ್ ಖುಯಾಮಿ ಚೌಧರಿ ಎಂದು ಗುರುತಿಸಲಾಗಿದೆ ಎಂದು ಗುಪ್ತಚರ ಇಲಾಖೆ ಹೇಳಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.