ಜಲ್ಲಿಕಟ್ಟು;ತುರ್ತು ಸುಗ್ರೀವಾಜ್ಞೆ ಹೊರಡಿಸಿ;ಪ್ರಧಾನಿಗೆ ಸಿಎಂ ಸೆಲ್ವಂ
Team Udayavani, Jan 19, 2017, 3:22 PM IST
ಹೊಸದಿಲ್ಲಿ : ತಮಿಳು ನಾಡಿನ ಸಾಂಸ್ಕೃತಿಕ ಹಾಗೂ ಸಾಂಪ್ರದಾಯಿಕ ಜಲ್ಲಿಕಟ್ಟು ಕ್ರೀಡೆಯ ಮೇಲಿನ ನಿಷೇಧದ ತೆರವನ್ನು ಆಗ್ರಹಿಸಿ ಚೆನ್ನೈನ ಮರೀನಾ ಬೀಚ್ನಲ್ಲಿ ಸಹಸ್ರಾರು ಜನರು ಪ್ರತಿಭಟನೆ ನಿರತರಾಗಿರುವ ನಡುವೆಯೇ ಮುಖ್ಯಮಂತ್ರಿ ಓ ಪನ್ನೀರಸೆಲ್ವಂ ಅವರು ಇಂದು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಜಲ್ಲಿಕಟ್ಟು ನಿಷೇಧದಿಂದ ರಾಜ್ಯದಲ್ಲಿ ಉಂಟಾಗಿರುವ ಉದ್ವಿಗ್ನತೆ ಹಾಗೂ ಬಿಕ್ಕಟ್ಟನ್ನು ನಿವಾರಿಸುವ ನಿಟ್ಟಿನಲ್ಲಿ ಅಧ್ಯಾದೇಶವೊಂದನ್ನು ತರುವಂತೆ ಕೋರಿದ್ದಾರೆ.
ಜಲ್ಲಿಕಟ್ಟು ಕ್ರೀಡೆಯ ಮೇಲೆ ಸುಪ್ರೀಂ ಕೋರ್ಟ್ ಹೇರಿರುವ ನಿಷೇಧವನ್ನು ತೆರವುಗೊಳಿಸುವ ಸಲುವಾಗಿ ಸುಗ್ರೀವಾಜ್ಞೆಯನ್ನು ತರುವ ಅಗತ್ಯದ ಬಗ್ಗೆ ತಾನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವರಿಕೆ ಮಾಡಿರುವುದಾಗಿ ಸೆಲ್ವಂ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
“ಜಲ್ಲಿಕಟ್ಟು ಮೇಲಿನ ನಿಷೇಧವನ್ನು ತೆರವುಗೊಳಿಸುವಂತೆ ಪ್ರಧಾನಿಗೆ ನಾವು ಮನವಿಯನ್ನು ಅರ್ಪಿಸಿದ್ದೇವೆ; ಈ ಸಂಬಂಧ ಸುಗ್ರೀವಾಜ್ಞೆಯನ್ನು ತರುವಂತೆ ಕೇಳಿಕೊಂಡಿದ್ದೇವೆ’ ಎಂದು ಸೆಲ್ವಂ ಹೇಳಿದರು.
ತಮಿಳು ನಾಡಿನಲ್ಲಿ ಪೊಂಗಲ್ ಸಂದರ್ಭದಲ್ಲಿ ನಡೆಯುವ ಜಲ್ಲಿಕಟ್ಟು ಕ್ರೀಡೆಯು ರಾಜ್ಯದ ಅತ್ಯಂತ ಮಹತ್ವದ ಸಾಂಸ್ಕೃತಿಕ ಹಾಗೂ ಪಾರಂಪರಿಕ ಕ್ರೀಡೆಯಾಗಿದೆ ಎಂದು ಸೆಲ್ವಂ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
MUST WATCH
ಹೊಸ ಸೇರ್ಪಡೆ
ಕೊಪ್ಪಳ: ಫ್ಲೈಟ್ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.