ಭಾರತದೊಳಗೆ ಜೆಎಂಬಿ ಲಗ್ಗೆ
Team Udayavani, Jun 1, 2019, 5:50 AM IST
ಹೊಸದಿಲ್ಲಿ: ದೇಶದಲ್ಲಿ ನಿಷೇಧಕ್ಕೆ ಒಳಗಾಗಿರುವ ಬಾಂಗ್ಲಾದೇಶದ ಉಗ್ರ ಸಂಘಟನೆ ಸಂಘಟನೆ “ಜಮ್ಮಾತ್ ಉಲ್ ಮುಜಾಹಿದ್ದೀನ್ ಬಾಂಗ್ಲಾದೇಶ’ (ಜೆಎಂಬಿ), ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ತ್ರಿಪುರಾಗಳ ಗಡಿಭಾಗಗಳಲ್ಲಿ ತನ್ನ ಶಾಶ್ವತ ನೆಲೆಗಳನ್ನು ಸ್ಥಾಪಿಸಲು ಮುಂದಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ. ಭಾರತ-ಬಾಂಗ್ಲಾ ಗಡಿ ಪ್ರದೇಶದಿಂದ ಭಾರತದೊಳಗೆ ಸುಮಾರು 10 ಕಿ.ಮೀ. ದೂರದಲ್ಲಿ ಈ ನೆಲೆಗಳನ್ನು ಸ್ಥಾಪಿಸಲು ಅವುಗಳು ಹವಣಿಸುತ್ತಿವೆ. ಜೆಎಂಬಿಯ ಮುಖ್ಯಸ್ಥ ಸಲೌದ್ದೀನ್ ಸಲೇಹಿನ್, ಪಾಕಿಸ್ತಾನದ ಲಷ್ಕರ್-ಎ-ತೊಯ್ಯಬಾ ಜತೆಗೆ ಕೈ ಜೋಡಿಸಿದ್ದಾನೆ ಎಂದು “ದ ಹಿಂದುಸ್ಥಾನ್ ಟೈಮ್ಸ್’ ವರದಿ ಮಾಡಿದೆ. ಬಾಂಗ್ಲಾದಲ್ಲಿ ಆ ಸಂಘಟನೆ 2005ರಲ್ಲೇ ನಿಷೇಧಿಸ್ಪಟ್ಟಿದೆ.
ಶಂಕಿತ ಹೇಳಿದ ಸತ್ಯ: 2018ರ ಬೌದ್ಧ ಗಯಾದಲ್ಲಿ ಸಂಭವಿಸಿದ್ದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ 12 ಶಂಕಿತರ ಮುಖ್ಯಸ್ಥ ಜಹೀದುಲ್ ಇಸ್ಲಾಂ, ವಿಚಾರಣೆ ವೇಳೆ ಈ ವಿಚಾರ ಬಾಯಿಬಿಟ್ಟಿದ್ದ. ಮ್ಯಾನ್ಮಾರ್ನಲ್ಲಿ ರೊಹಿಂಗ್ಯ ಮುಸ್ಲಿಮರ ಮೇಲಿನ ದೌರ್ಜನ್ಯಗಳಿಗೆ ಪ್ರತೀಕಾರವಾಗಿ ಬೌದ್ಧ ನೆಲೆಗಳ ಮೇಲೆ ದಾಳಿ ನಡೆಸಲು ಜೆಎಂಬಿ ನಿರ್ಧರಿಸಿದೆ ಎಂದು ಆತ ಹೇಳಿದ್ದ ಎನ್ನಲಾಗಿದೆ.
ಶಾಶ್ವತ ನೆಲೆಗಳ ಸ್ಥಾಪನೆಗೂ ಮುನ್ನ, ಪಶ್ಚಿಮ ಬಂಗಾಳದ ಬುರ್ದವಾನ್, ಮುರ್ಶಿ ದಾಬಾದ್, ಅಸ್ಸಾಂನ ಡಾರಂಗ್ನ ಲಾರ್ಕುಚಿ, ಜೋಗಿಪರಾ, ಬಾಪೆìಟಾದ ಪಂಪಾರಾ ದಲ್ಲಿರುವ ಮಸೀದಿಗಳಲ್ಲಿ ವಿಧ್ವಂಸಕ ಕೃತ್ಯಗಳ ಬಗ್ಗೆ ಕೋರ್ಸ್ಗಳನ್ನು ನಡೆಸಲಾಗಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.