Jammu Kashmir; ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ


Team Udayavani, Aug 26, 2024, 11:33 AM IST

Jammu and Kashmir; BJP has announced the first list of candidates for the assembly elections

ಶ್ರೀನಗರ: ಅತ್ಯಂತ ಮಹತ್ವದ ಜಮ್ಮು ಕಾಶ್ಮೀರದ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಮೂರು ಹಂತದಲ್ಲಿ ನಡೆಯುವ ಚುನಾವಣೆಗೆ ರಾಜಕೀಯ ಪಕ್ಷಗಳು ತನ್ನ ಕಸರತ್ತು ಆರಂಭಿಸಿವೆ. ಇದೀಗ 90 ಕ್ಷೇತ್ರಗಳ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ 44 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಜಮ್ಮು ಕಾಶ್ಮೀರದಲ್ಲಿ ಸೆಪ್ಟೆಂಬರ್‌ 19, 25 ಮತ್ತು ಅಕ್ಟೋಬರ್‌ 1ರಂದು ಮತದಾನ ನಡೆಯಲಿದೆ. ಅಕ್ಟೋಬರ್‌ 4ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರ ಬೀಳಲಿದೆ. ಜಮ್ಮು ಕಾಶ್ಮೀರದ ಆರ್ಟಿಕಲ್‌ 370 ರದ್ದಾಗಿ ರಾಜ್ಯ ಸ್ಥಾನಮಾನ ಕೊನೆಗೊಂಡ ಬಳಿಕ ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಜಮ್ಮು ಕಾಶ್ಮೀರದಲ್ಲಿ 2014ರಲ್ಲಿ ಕೊನೆಯದಾಗಿ ವಿಧಾನಸಭೆ ಚುನಾವಣೆ ನಡೆದಿತ್ತು.

ಮೊದಲ ಪಟ್ಟಿಯಲ್ಲಿ ಕಾಣೆಯಾಗಿರುವ ಎರಡು ಪ್ರಮುಖ ಹೆಸರುಗಳೆಂದರೆ ಮಾಜಿ ಉಪಮುಖ್ಯಮಂತ್ರಿ ನಿರ್ಮಲ್ ಸಿಂಗ್ ಮತ್ತು ಕವೀಂದರ್ ಗುಪ್ತಾ ಮತ್ತು ಈಗ ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿಯ ಮುಖ್ಯಸ್ಥರಾಗಿರುವ ರವೀಂದರ್‌ ರೈನಾ.

ನ್ಯಾಷನಲ್ ಕಾನ್ಫರೆನ್ಸ್‌ನಿಂದ ಕಣಕ್ಕಿಳಿದ ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್‌ ಅವರ ಸಹೋದರ ದೇವೇಂದ್ರ ರಾಣಾ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಬಿಜೆಪಿಯಿಂದ ಇಬ್ಬರು ಕಾಶ್ಮೀರಿ ಪಂಡಿತರನ್ನೂ ಕಣಕ್ಕಿಳಿಸಲಾಗಿದೆ. ಪಕ್ಷವು ಮೊದಲ ಪಟ್ಟಿಯಲ್ಲಿ 14 ಮುಸ್ಲಿಂ ಅಭ್ಯರ್ಥಿಗಳನ್ನು ಹೆಸರಿಸಿದೆ.

ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಸಭೆಯಲ್ಲಿ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ. ರವಿವಾರ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್‌ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಭಾಗಿಯಾಗಿದ್ದರು.

ಬಿಜೆಪಿಯು ಪಟ್ಟಿಯಲ್ಲಿ 1ನೇ ಹಂತಕ್ಕೆ 15, 2ನೇ ಹಂತಕ್ಕೆ 10, 3ನೇ ಹಂತಕ್ಕೆ 19 ಅಭ್ಯರ್ಥಿಗಳನ್ನು ಹೆಸರಿಸಿದೆ.

ಪಟ್ಟಿಯಲ್ಲಿರುವ ಪ್ರಮುಖ ಹೆಸರುಗಳು ಪಾಂಪೋರ್‌ ಕ್ಷೇತ್ರದಿಂದ ಸೈಯದ್ ಶೋಕತ್ ಗಯೂರ್ ಅಂದ್ರಾಬಿ ಮತ್ತು ಅನಂತನಾಗ್ ಪಶ್ಚಿಮದಿಂದ ಮೊಹಮ್ಮದ್ ರಫೀಕ್ ವಾನಿ.

ಟಾಪ್ ನ್ಯೂಸ್

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.