![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Sep 22, 2023, 11:12 AM IST
ನವದೆಹಲಿ: ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಜಮ್ಮು ಮತ್ತು ಕಾಶ್ಮೀರದ ಉನ್ನತ ಪೊಲೀಸ್ ಅಧಿಕಾರಿಯನ್ನು ಬಂಧಿಸಲಾಗಿದೆ.
ಜಮ್ಮು ಕಾಶ್ಮೀರದ ಪೊಲೀಸ್ ಉಪ ಅಧೀಕ್ಷಕರಾಗಿರುವ ಶೇಖ್ ಆದಿಲ್ ಮುಷ್ತಾಕ್ ಅವರನ್ನು ಭ್ರಷ್ಟಾಚಾರ ಮತ್ತು ಉಗ್ರರ ಜೊತೆಗೆ ನಂಟು ಹೊಂದಿರುವ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಉನ್ನತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಷ್ಟು ಮಾತ್ರವಲ್ಲದೆ ಭಯೋತ್ಪಾದಕರಿಗೆ ಸಹಾಯ ಮಾಡಿದ ಮತ್ತು ಸಹ ಪೊಲೀಸ್ ಅಧಿಕಾರಿಯನ್ನು ಬಲೆಗೆ ಬೀಳಿಸಲು ಯತ್ನಿಸಿದ ಆರೋಪ ಅವರ ಕೂಡ ಇವರ ಮೇಲಿದೆ.
ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಆದಿಲ್ ವಿರುದ್ಧದ ಪ್ರಕರಣದ ತನಿಖೆಗೆ ಐವರು ಸದಸ್ಯರ ವಿಶೇಷ ತನಿಖಾ ತಂಡವನ್ನು ನೇಮಿಸಲಾಗಿದೆ. ಕಳೆದ ಮಾರ್ಚ್‌ನಲ್ಲಿ ಆದಿಲ್ ಅವರನ್ನು ತನಿಖೆಗಾಗಿ ಸೇವೆಯಿಂದ ಅಮಾನತುಗೊಳಿಸಲಾಗಿತ್ತು.
ಇದನ್ನೂ ಓದಿ: Justin Trudeau: ಭಾರತ ಅಭಿವೃದ್ಧಿ ಪ್ರಧಾನ ದೇಶ, ಯಾವುದೇ ಕಾರಣಕ್ಕೂ ಪ್ರಚೋದಿಸಲ್ಲಾ: ಟ್ರುಡೊ
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.