Jammu-Kashmir polls: ವಿಧಾನಸಭೆ ಚುನಾವಣೆಗೆ ಎರಡನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ
Team Udayavani, Aug 27, 2024, 5:16 PM IST
ಹೊಸದಿಲ್ಲಿ: ಜಮ್ಮು ಕಾಶ್ಮೀರ ಚುನಾವಣೆಗೆ (Jammu-Kashmir polls) ಸೋಮವಾರ ಅಭ್ಯರ್ಥಿಗಳ ಪಟ್ಟಿಯನ್ನೊಮ್ಮೆ ಬಿಡುಗಡೆ ಮಾಡಿ ಮತ್ತೆ ಹಿಂಪಡೆದು ತುಸು ಸಮಯದ ಬಳಿಕ ಮತ್ತೊಂದು ಪಟ್ಟಿ ಬಿಡುಗಡೆ ಮಾಡಿದ್ದ ಭಾರತೀಯ ಜನತಾ ಪಕ್ಷವು (BJP) ಮಂಗಳವಾರ (ಆ.27) ಎರಡನೇ ಪಟ್ಟಿ ರಿಲೀಸ್ ಮಾಡಿದೆ.
ಸೋಮವಾರ ಪರಿಷ್ಕೃತ ಪಟ್ಟಿಯಲ್ಲಿ 15 ಮಂದಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿತ್ತು. ಇದೀಗ ಮತ್ತೆ 29 ಮಂದಿ ಅಭ್ಯರ್ಥಿಗಳ ಹೆಸರು ಬಿಡುಗಡೆ ಮಾಡಲಾಗಿದೆ. ಹೀಗಾಗಿ 90 ವಿಧಾನಸಭೆ ಕ್ಷೇತ್ರಗಳ ಜಮ್ಮು ಕಾಶ್ಮೀರದಲ್ಲಿ ಬಿಜೆಪಿ 44 ಹೆಸರು ಅಂತಿಮಗೊಳಿಸಿದೆ.
ಮುಂಬರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯು ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತಗಳಲ್ಲಿ ನಡೆಯಲಿದೆ. ಮತಗಳ ಎಣಿಕೆಯನ್ನು ಅಕ್ಟೋಬರ್ 4 ರಂದು ನಿಗದಿಪಡಿಸಲಾಗಿದೆ.
ಎರಡನೇ ಹಂತದ ಮತದಾನ ನಡೆಯುವ 10 ಕ್ಷೇತ್ರಗಳ ಅಭ್ಯರ್ಥಿಗಳು ಮತ್ತು ಮೂರನೇ ಹಂತದಲ್ಲಿ ಮತದಾನ ನಡೆಯುವ 19 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆ ಮಾಡಲಾಗಿದೆ.
भाजपा की केन्द्रीय चुनाव समिति ने आगामी जम्मू व कश्मीर विधानसभा चुनाव 2024 के लिए अपनी तीसरी सूची में निम्नलिखित नामों पर स्वीकृति प्रदान की है। pic.twitter.com/YcZT9DJBmG
— BJP (@BJP4India) August 27, 2024
ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ಮುಂದಿನ ಸರ್ಕಾರ ರಚಿಸುವ ವಿಶ್ವಾಸವನ್ನು ವ್ಯಕ್ತಪಡಿಸಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನಡುವಿನ ಚುನಾವಣಾ ಪೂರ್ವ ಮೈತ್ರಿಯು ತಮ್ಮ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮಂಗಳವಾರ ಹೇಳಿದ್ದಾರೆ.
ನ್ಯಾಷನಲ್ ಕಾನ್ಫರೆನ್ಸ್ ಜತೆಗಿನ ಮೈತ್ರಿಯ ಬಳಿಕ ಕಾಂಗ್ರೆಸ್ ಏಳು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಸೋಮವಾರ ನ್ಯಾಷನಲ್ ಕಾನ್ಫರೆನ್ಸ್ ಪಕ್ಷವು 18 ಮಂದಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
Ambedkar; ಅವಮಾನ ಖಂಡಿಸಿ ಕಾಂಗ್ರೆಸ್ ಆಂದೋಲನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.