ಭಗತ್ ಸಿಂಗ್ ಟೆರರಿಸ್ಟ್ ಎಂದ ಜಮ್ಮು ವಿವಿ ಪ್ರೊಫೆಸರ್; ತನಿಖೆಗೆ ಆದೇಶ
Team Udayavani, Nov 30, 2018, 2:38 PM IST
ಜಮ್ಮು-ಕಾಶ್ಮೀರ: ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಭಗತ್ ಸಿಂಗ್ ಅವರನ್ನು “ಭಯೋತ್ಪಾದಕ” ಎಂದು ಜಮ್ಮು ಯೂನಿರ್ವಸಿಟಿಯ ಪ್ರೊಫೆಸರ್ ಮೊಹಮ್ಮದ್ ತಾಜುದ್ದೀನ್ ಅವರು ಹೇಳಿರುವುದಾಗಿ ಆರೋಪಿಸಿ ಯೂನಿರ್ವಸಿಟಿಯ ಕೆಲವು ವಿದ್ಯಾರ್ಥಿಗಳು ದೂರು ನೀಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಪ್ರೊಫೆಸರ್ ಮೊಹಮ್ಮದ್ ಸುಮಾರು 2ಗಂಟೆಗಳ ಕಾಲ ನೀಡಿದ ಉಪನ್ಯಾಸದಲ್ಲಿ ಭಗತ್ ಸಿಂಗ್ ಅವರನ್ನು ಭಯೋತ್ಪಾದಕ ಎಂದು ಉಲ್ಲೇಖಿಸಿರುವ 25 ಸೆಕೆಂಡ್ ನ ಕ್ಲಿಪ್ ಅನ್ನು ಕಟ್ ಮಾಡಿ ಪುರಾವೆಯನ್ನಾಗಿ ವಿದ್ಯಾರ್ಥಿಗಳು ಯೂನಿರ್ವಸಿಟಿಯ ಉಪಕುಲಪತಿಗೆ ದೂರು ನೀಡಿದ್ದಾರೆ ಎಂದು ವರದಿ ವಿವರಿಸಿದೆ.
ಉಪಕುಲಪತಿ ಮನೋಜ್ ಕೆ ಧಾರ್ ಅವರು ಎಎನ್ಐ ಜೊತೆ ಮಾತನಾಡುತ್ತ, ದೂರನ್ನು ದಾಖಲಿಸಿರುವ ಬಗ್ಗೆ ಅವರು ಖಚಿತಪಡಿಸಿದ್ದಾರೆ. ಅಲ್ಲದೇ ಈ ಘಟನೆ ಬಗ್ಗೆ ತನಿಖೆ ನಡೆಸಲು ಆರು ಜನರನ್ನೊಳಗೊಂಡ ಸಮಿತಿಯನ್ನು ನಿಯೋಜಿಸಲಾಗಿದೆ. ವಿಚಾರಣೆ ಪೂರ್ಣಗೊಳ್ಳುವವರೆಗೂ ಆರೋಪಿತ ಪ್ರೊಫೆಸರ್ ಗೆ ಪಾಠ ಮಾಡುವಂತಿಲ್ಲ ಎಂದು ಸೂಚನೆ ನೀಡಲಾಗಿದೆ ಎಂಬುದಾಗಿ ಉಪಕುಲಪತಿ ತಿಳಿಸಿದ್ದಾರೆ.
ಕಳೆದ ಗುರುವಾರ ಕೆಲವು ವಿದ್ಯಾರ್ಥಿಗಳು ಸಂಜೆ ನನ್ನ ಬಂದು ಭೇಟಿಯಾಗಿ, ಈ ಘಟನೆ ಬಗ್ಗೆ ಮಾಹಿತಿ ನೀಡಿದ್ದರು. ಅಷ್ಟೇ ಅಲ್ಲ ಸೀಡಿಯನ್ನು ಸಾಕ್ಷಿಯಾಗಿ ನೀಡಿದ್ದರು. ಕೂಡಲೇ ನಾನು ತನಿಖೆ ನಡೆಸಲು ಸಮಿತಿಯನ್ನು ರಚಿಸಿದ್ದೆ ಎಂದು ಉಪಕುಲಪತಿ ಧಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.