ಜ.22: ಮುಕ್ತ ನ್ಯಾಯಾಲಯದಲ್ಲಿ ಶಬರಿಮಲೆ ತೀರ್ಪು ಪುನರ್ ವಿಮರ್ಶೆ
Team Udayavani, Nov 13, 2018, 5:30 PM IST
ಹೊಸದಿಲ್ಲಿ : ಎಲ್ಲ ವಯೋವರ್ಗದ ಮಹಿಳೆಯರು ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನವನ್ನು ಪ್ರವೇಶಿಸಬಹುದಾಗಿದೆ ಎಂದು ತಾನು ನೀಡಿದ್ದ ತೀರ್ಪಿನ ಮರು ವಿಮರ್ಶೆ ಕೋರಿ ಸಲ್ಲಿಸಲಾಗಿರುವ ಎಲ್ಲ ಅರ್ಜಿಗಳ ವಿಚಾರಣೆಯನ್ನು ಜನವರಿ 22ರಂದು ಮುಕ್ತ ನ್ಯಾಯಾಲಯದಲ್ಲಿ ಕೈಗೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್ ಇಂದು ಹೊರಡಿಸಿರುವ ತನ್ನ ಆದೇಶದಲ್ಲಿ ಹೇಳಿದೆ.
ಹಾಗಿದ್ದರೂ ತಾನು ಕೊಟ್ಟಿರುವ ತೀರ್ಪಿಗೆ ಯಾವುದೇ ತಡೆಯಾಜ್ಞೆಯನ್ನು ನೀಡೆನೆಂದು ಸುಪ್ರೀಂ ಕೋರ್ಟ್ ಹೇಳಿದೆ. ಅರ್ಥಾತ್ ಶಬರಿಮಲೆ ದೇವಳವನ್ನು ಎಲ್ಲ ವಯೋವರ್ಗದ ಮಹಿಳೆಯರು ಈಗಲೂ ಪ್ರವೇಶಿಸಬಹುದಾಗಿದೆ !
ಶಬರಿಮಲೆ ದೇವಳ ಪ್ರವೇಶಕ್ಕೆ ಸಂಬಂಧಿಸಿದ ತೀರ್ಪಿನ ಪುನರ್ ವಿಮರ್ಶೆ ಕೋರಿ ಸಲ್ಲಿಸಲಾಗಿರುವ ಸುಮಾರು 48 ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟಿನ ವರಿಷ್ಠ ನ್ಯಾಯಮೂರ್ತಿ ರಂಜನ್ ಗೊಗೋಯ್ ಮತ್ತು ಜಸ್ಟಿಸ್‌ಗಳಾದ ಆರ್ ಎಫ್ ನಾರಿಮನ್, ಎ ಎಂ ಖಾನ್‌ವಿಲ್ಕರ್, ಡಿವೈ ಚಂದ್ರಚೂಡ್ ಮತ್ತು ಇಂದೂ ಮಲ್ಹೋತ್ರ ಅವರನ್ನು ಒಳಗೊಂಡ ಪೀಠವು ಸೋಮವಾರ ಕೈಗೆತ್ತಿಕೊಂಡಿತ್ತು.
ಕೇರಳದ ಶಬರಿಮಲೆ ದೇವಳವನ್ನು ಎಲ್ಲ ವಯೋವರ್ಗದ ಮಹಿಳೆಯರು ಪ್ರವೇಶಿಸಬಹುದಾಗಿದೆ ಎಂದು ಆಗಿನ ವರಿಷ್ಠ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸಂವಿದಾನ ಪೀಠ 4:1 ಅಂತರದಲ್ಲಿ ಕಳೆದ ಸೆ.28ರಂದು ಐತಿಹಾಸಿಕ ತೀರ್ಪು ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್
IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.