ಬಾಂಧವ್ಯದಲ್ಲಿ ಹೊಸ ಶಕೆ
Team Udayavani, Mar 20, 2022, 7:10 AM IST
ಹೊಸದಿಲ್ಲಿ: ಭಾರತ ಮತ್ತು ಜಪಾನ್ ಬಾಂಧವ್ಯದಲ್ಲಿ ಹೊಸ ಶಕೆ ಆರಂಭವಾಗಿದ್ದು, ಮುಂದಿನ ಐದು ವರ್ಷಗಳಲ್ಲಿ ಬರೋಬ್ಬರಿ 3.20 ಲಕ್ಷ ಕೋಟಿ ರೂ. ಮೊತ್ತವನ್ನು ಭಾರತದಲ್ಲಿ ಹೂಡಿಕೆ ಮಾಡುವುದಾಗಿ ಜಪಾನ್ ಘೋಷಿಸಿದೆ.
ಎರಡು ದಿನಗಳ ಭಾರತ ಪ್ರವಾಸದಲ್ಲಿ ರುವ ಜಪಾನ್ ಪ್ರಧಾನಿ ಫುಮಿಯೋ ಕಿಶಿದಾ ಅವರು ಶನಿವಾರ ದಿಲ್ಲಿಯ ಹೈದರಾಬಾದ್ ಹೌಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಈ ಘೋಷಣೆ ಮಾಡಿದ್ದಾರೆ.
ಇದಲ್ಲದೆ, ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ವೃದ್ಧಿಸುವ ಹಾಗೂ ಪ್ರತ್ಯೇಕ ಸ್ವತ್ಛ ಇಂಧನ ಪಾಲುದಾರಿಕೆ ಹೊಂದುವ ನಿಟ್ಟಿನಲ್ಲಿ ಉಭಯ ದೇಶಗಳು ಮಹತ್ವದ ಹೆಜ್ಜೆಯಿಟ್ಟಿವೆ. ಜತೆಗೆ ಸೈಬರ್ ಭದ್ರತೆ, ಸುಸ್ಥಿರ ಅಭಿವೃದ್ಧಿ ಮತ್ತು ತ್ಯಾಜ್ಯ ನೀರು ನಿರ್ವಹಣೆ ಸಂಬಂಧ 3 ಒಪ್ಪಂದಗಳಿಗೂ ಸಹಿ ಹಾಕಿವೆ.
ಭಾರತ ಮತ್ತು ಜಪಾನ್ ನಡುವಿನ 14ನೇ ವಾರ್ಷಿಕ ಶೃಂಗದಲ್ಲಿ ಮೋದಿ ಹಾಗೂ ಕಿಶಿದಾ ಅವರು, ಎರಡೂ ದೇಶಗಳ ನಡುವಿನ ಆರ್ಥಿಕ ಮತ್ತು ಸಾಂಸ್ಕೃತಿಕ ಬಾಂಧವ್ಯವನ್ನು ಗಟ್ಟಿಗೊಳಿಸುವ ವಿಚಾರ ಮಾತ್ರವಲ್ಲದೇ ಉಕ್ರೇನ್ ಮೇಲೆ ರಷ್ಯಾ ನಡೆಸಿರುವ ಯುದ್ಧ ಸಹಿತ ವಿವಿಧ ಜಾಗತಿಕ ವಿಚಾರಗಳ ಕುರಿತೂ ಚರ್ಚಿಸಿದ್ದಾರೆ.
ಈಗಾಗಲೇ ಭಾರತದ ನಗರ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಹೈಸ್ಪೀಡ್ ರೈಲ್ವೇಗೆ ಸಹಕಾರ ನೀಡುತ್ತಿರುವ ಜಪಾನ್, ಈಗ 3.20 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಮಾಡಲು ಮುಂದಾಗಿರುವುದು ಎರಡೂ ದೇಶಗಳ ಉತ್ತಮ ಬಾಂಧವ್ಯಕ್ಕೆ ಸಾಕ್ಷಿ. ಜಪಾನ್ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಕಿಶಿದಾ ಅವರ ಮೊದಲ ಭಾರತ ಭೇಟಿ ಇದಾಗಿದೆ.
ರಷ್ಯಾ ಆಕ್ರಮಣ ಗಂಭೀರ: ಕಿಶಿದಾ :
ರಷ್ಯಾ ನಡೆಸಿರುವ ಆಕ್ರಮಣವು ಗಂಭೀರವಾದದ್ದು, ಅದು ಅಂತಾರಾಷ್ಟ್ರೀಯ ನಿಯಮಾವಳಿಗಳ ಬೇರನ್ನೇ ಅಲುಗಾಡಿಸಿದೆ ಎಂದು ಜಪಾನ್ ಪ್ರಧಾನಿ ಕಿಶಿದಾ ಹೇಳಿದ್ದಾರೆ. ರಷ್ಯಾದ ದಾಳಿಯ ಕುರಿತೂ ಚರ್ಚಿಸಿದ ಸಂದರ್ಭದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜತೆಗೆ ಒತ್ತಾಯಪೂರ್ವಕವಾಗಿ ಯಥಾಸ್ಥಿತಿಯನ್ನು ಬದಲಿಸಲು ನಡೆಸುವ ಏಕಪಕ್ಷೀಯ ಯತ್ನಕ್ಕೆ ಯಾರೂ ಅವಕಾಶ ನೀಡಬಾರದು. ಯುದ್ಧಕ್ಕೆ ಅಂತಾರಾಷ್ಟ್ರೀಯ ಕಾನೂನಿನ ಆಧಾರದಲ್ಲಿ ಶಾಂತಿಯುತ ಪರಿಹಾರ ಕಂಡುಕೊಳ್ಳಬೇಕು ಎಂದೂ ಹೇಳಿದ್ದಾರೆ.
ಚರ್ಚೆಯಲ್ಲಿ ಪ್ರಸ್ತಾವವಾದ ವಿಷಯ :
- ಮುಂದಿನ 5 ವರ್ಷಗಳಲ್ಲಿ ಭಾರತದಲ್ಲಿ 3.20 ಲಕ್ಷ ಕೋ.ರೂ. ಹೂಡಿಕೆಗೆ ಜಪಾನ್ ನಿರ್ಧಾರ
2 .ಸ್ವಚ್ಛ ಇಂಧನ ಪಾಲುದಾರಿಕೆ ಬಗ್ಗೆ ಉಭಯ ದೇಶಗಳ ಘೋಷಣೆ
3.ಸೈಬರ್ ಭದ್ರತೆ, ಸುಸ್ಥಿರ ಅಭಿವೃದ್ಧಿ ಮತ್ತು ತ್ಯಾಜ್ಯ ನೀರು ನಿರ್ವಹಣೆ ಸಂಬಂಧ 3 ಒಪ್ಪಂದಗಳಿಗೆ ಸಹಿ
4.ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ಆಕ್ರಮಣದ ಕುರಿತು ಪ್ರಸ್ತಾವ
5.ಲಡಾಖ್‌ನಲ್ಲಿ ಚೀನದ ಉದ್ಧಟತನ ಹಾಗೂ ಎರಡೂ ದೇಶಗಳ ನಡುವಿನ ಮಾತುಕತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.