ಜಯಾ ಎಐಎಡಿಎಂಕೆ ಶಾಶ್ವತ ಕಾರ್ಯದರ್ಶಿ, ಶಶಿಕಲಾ, ದಿನಕರನ್‌ ವಜಾ

Team Udayavani, Sep 13, 2017, 8:30 AM IST

jaya.jpg

ಚೆನ್ನೈ: ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ಅವರೇ ಪಕ್ಷದ “ಶಾಶ್ವತ ಪ್ರಧಾನ ಕಾರ್ಯದರ್ಶಿ’ ಎಂದು ಆಡಳಿತ ಪಕ್ಷ ಎಐಎಡಿಎಂಕೆ ಘೋಷಿಸಿದೆ. ಹಾಗೇ ನಿರೀಕ್ಷೆಯಂತೆ ವಿ.ಕೆ.ಶಶಿಕಲಾ ಹಾಗೂ ಅವರ ಸಂಬಂಧಿ ಟಿ.ಟಿ.ವಿ.ದಿನಕರನ್‌ರನ್ನು ಪಕ್ಷದಿಂದ ವಜಾ ಮಾಡಿ, ಮಂಗಳವಾರ ನಡೆದ ಪಕ್ಷದ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಈ ಮೂಲಕ ಡಿಸಿಎಂ ಓ.ಪನ್ನೀರ್‌ಸೆಲ್ವಂ ನೇತೃತ್ವದಲ್ಲಿ ಪಕ್ಷದ ಎಲ್ಲ ವ್ಯವಹಾರಗಳು ನಡೆಯಲಿದ್ದು, ಸಿಎಂ ಇ.ಪಳನಿಸ್ವಾಮಿ ಸಹಾಯಕರಾಗಿರಲಿದ್ದಾರೆ. ಇದರೊಂದಿಗೆ ಪಕ್ಷದ ಚಟುವಟಿಕೆಗಳ ನಿರ್ವಹಣೆಗೆ 11 ಸದಸ್ಯರ ಸಮಿತಿಯನ್ನು ರಚಿಸಲಾಗಿದೆ. ಪ್ರಸ್ತುತ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಶಶಿಕಲಾರನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಹಾಗೂ ಉಪ ಕಾರ್ಯದರ್ಶಿ ಸ್ಥಾನದಿಂದ ದಿನಕರನ್‌ ವಜಾಗೊಂಡಿದ್ದಾರೆ.

ಮಂಗಳವಾರ ನಡೆಯಲಿದ್ದ ಸಭೆಗೆ ಅವಕಾಶ ನೀಡದಂತೆ ಕೋರಿ ದಿನಕರನ್‌ ಬಣ ಮದ್ರಾಸ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಆದರೆ ಸೋಮವಾರ ಈ ಅರ್ಜಿ ವಜಾಗೊಳಿಸಿದ್ದ ನ್ಯಾಯಾಲಯ, ಸಭೆ ನಡೆಸಲು ಅನುಮತಿ ನೀಡಿತ್ತು. ಸಭೆ ನಡೆದರೆ ತಮ್ಮನ್ನು ಪಕ್ಷದಿಂದ ಕಿತ್ತೆಸೆಯುತ್ತಾರೆ ಎಂಬ ಶಶಿಕಲಾ ಬಣದ ಆತಂಕ ನಿಜವಾಗಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಬಂಡಾಯ ಬಣದ ಇಬ್ಬರೂ ನಾಯಕರನ್ನು ವಜಾ ಮಾಡಲಾಗಿದೆ. ಮಂಗಳವಾರ ನಡೆದ ಸಭೆಗೆ ಶಶಿಕಲಾ ಬಣದ 18 ಬೆಂಬಲಿಗರು ಬಂದಿರಲಿಲ್ಲ. ಆದರೂ ಈ ಪೈಕಿ 9 ಮಂದಿ ಸಿಎಂ ಪಳನಿಸ್ವಾಮಿ ಅವರಿಗೆ ಬೆಂಬಲ ಸೂಚಿಸಿದ್ದಾರೆ ಎಂದು ಎಐಎಡಿಎಂಕೆ ಹೇಳಿಕೊಂಡಿದೆ.

ಬಹುಮತ ಖಚಿತ? 234 ಸದಸ್ಯ ಬಲದ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಪಳನಿಸ್ವಾಮಿ ನೇತೃತ್ವದ ಸರ್ಕಾರಕ್ಕೆ 117 ಸದಸ್ಯರ ಬೆಂಬಲ ಬೇಕಿದೆ. ಪಕ್ಷದ ಪ್ರಕಾರ ಸರ್ಕಾರಕ್ಕೆ 124 ಶಾಸಕರ ಬೆಂಬಲವಿದ್ದು, ವಿಶ್ವಾಸಮತ ಪರೀಕ್ಷೆ ನಡೆದರೆ ಸರ್ಕಾರಕ್ಕೇನೂ ಧಕ್ಕೆಯಿಲ್ಲ ಎನ್ನಲಾಗಿದೆ. ಆದರೆ ಸರ್ಕಾರ ಅಧಿವೇಷನ ಕರೆದರೆ ಮಾತ್ರ ಪ್ರತಿಪಕ್ಷ ಡಿಎಂಕೆ ಅವಿಶ್ವಾಸ ನಿರ್ಣಯ ಮಂಡಿಸಲು ಅವಕಾಶವಿರಲಿದೆ.

ಕೊಡಗಿನಲ್ಲಿ ತಮಿಳುನಾಡು ಶಾಸಕರಿಗೆ ಶೋಧ
ಮಡಿಕೇರಿ:
ಕೊಡಗು ಜಿಲ್ಲೆಯ ಕುಶಾಲನಗರ ಬಳಿಯಲ್ಲಿನ ಪ್ಯಾಡಿಗ¾ಂಟನ್‌ ರೆಸಾರ್ಟ್‌ನಲ್ಲಿ ತಮಿಳುನಾಡು ಶಾಸಕರ ಹೈಡ್ರಾಮ ನಡೆದಿದೆ. ಟಿ.ಟಿ.ವಿ. ದಿನಕರನ್‌ ಬಣಕ್ಕೆ ಸೇರಿದ 17 ಶಾಸಕರು ಕೆಲವು ದಿನಗಳಿಂದ ಇಲ್ಲಿ ರಹಸ್ಯವಾಗಿ ಆಶ್ರಯ ಪಡೆದಿದ್ದಾರೆ. ಆದರೆ, ಶಾಸಕರೊಬ್ಬರ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿ, ಅಕ್ರಮವಾಗಿ ಕೂಡಿ ಹಾಕಲಾಗಿದೆ ಎಂದು ಆರೋಪಿಸಿದ್ದರು. ಹೀಗಾಗಿ  ತಮಿಳುನಾಡು ಪೊಲೀಸ್‌ ತಂಡ ಮಂಗಳವಾರ ಮಧ್ಯಾಹ್ನ ರೆಸಾರ್ಟ್‌ಗೆ ಧಾವಿಸಿ ಮಾಹಿತಿ ಸಂಗ್ರಹಿ ಸಿದೆ. ಮಂಗಳವಾರ ಸಂಜೆ ಸುಂಟಿಕೊಪ್ಪ ಪೊಲೀಸ್‌ ಠಾಣೆಗೆ ಬಂದ ತಮಿಳುನಾಡು ಪೊಲೀಸರು ತಮ್ಮ ತಪಾಸಣೆ ಸಂಬಂಧಿತ ಮಾಹಿತಿ ನೀಡಿದ್ದಾರೆ.

ಕೊಯಮತ್ತೂರಿನ ಡಿಸಿಪಿ ಸೇರಿ ಇಬ್ಬರು ಎಸ್ಪಿ ಗಳು, 5 ಇನ್ಸ್‌ಪೆಕ್ಟರ್‌ ಗಳು, 20 ಪೊಲೀಸ್‌ ಅಧಿಕಾರಿ ಗಳು ತಮಿಳುನಾಡು ಪೊಲೀಸ್‌ ತಂಡದಲ್ಲಿದ್ದಾರೆ ಎನ್ನಲಾಗಿದೆ. ಆದರೆ, ತಮಿಳುನಾಡು ಪೊಲೀಸ್‌ ತಂಡ ತಪಾಸಣೆ ಮಾಡಿರುವ ಬಗ್ಗೆ ಅಧಿಕೃತ ಮಾಹಿತಿ ಲಭಿಸಿಲ್ಲ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್‌ ತಿಳಿಸಿದ್ದಾರೆ.

ಶಾಸಕನಿಗಾಗಿ ಹುಡುಕಾಟ: ಮತ್ತೂಂದು ಬೆಳವಣಿಗೆಯಲ್ಲಿ ಪ್ರಕರಣವೊಂದರ ವಿಚಾರಣೆಗೆ ಅಗತ್ಯವಾಗಿದ್ದು, ತಲೆಮರೆಸಿಕೊಂಡಿರುವ ತಮಿಳು ನಾಡಿನ ಶಾಸಕರೊಬ್ಬರ ಪತ್ತೆಗಾಗಿ ನೆರೆ ರಾಜ್ಯದ ಪೊಲೀಸರು ಏಳನೇಹೊಸಕೋಟೆಯ ರೆಸಾರ್ಟ್‌ ನಲ್ಲಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.