ಜಯಲಲಿತಾ ಸಹೋದರ ಪುತ್ರಿ ದೀಪಾ ಜಯಕುಮಾರ್ ರಾಜಕೀಯಕ್ಕೆ
Team Udayavani, Jan 17, 2017, 12:05 PM IST
ಚೆನ್ನೈ : ತಮಿಳು ನಾಡಿನ ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಏಕೈಕ ಸಹೋದರ, ದಿ. ಜಯಕುಮಾರ್ ಪುತ್ರಿ, 42ರ ಹರೆಯದ ದೀಪಾ ಜಯಕುಮಾರ್ ರಾಜಕೀಯ ರಂಗಪ್ರವೇಶ ಮಾಡಿದ್ದಾರೆ. ಎಐಎಡಿಎಂಕೆ ಕಾರ್ಯಕರ್ತರ ಆಶೋತ್ತರಗಳನ್ನು ನೆರವೇರಿಸುವುದಕ್ಕೆ ತಾನು ಪರಿಶ್ರಮಿಸುವುದಾಗಿ ಆಕೆ ಹೇಳಿದ್ದಾರೆ.
ದೀಪಾ ಅವರ ರಾಜಕೀಯ ರಂಗಪ್ರವೇಶದೊಂದಿಗೆ, ತಮಿಳು ನಾಡಿನ ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರು ನಿಧನ ಹೊಂದಿ ತಿಂಗಳಾಗುತ್ತಲೇ ಈಗ ಆಕೆಯ ಬಳುವಳಿಗಾಗಿ ವಸ್ತುತಃ ಸಮರವೇ ಆರಂಭವಾದಂತಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
ದೀಪಾ ಜಯಕುಮಾರ್ ಅವರು ತನ್ನ ರಾಜಕೀಯ ರಂಗ ಪ್ರವೇಶಕ್ಕೆ ಜನವರಿ 17ರ ತೇದಿಯನ್ನೇ ಆಯ್ಕೆ ಮಾಡಿರುವುದಕ್ಕೆ ಕಾರಣವಿದೆ. ಅಂದ ಹಾಗೆ ಜ.17 ಎಐಎಡಿಎಂಕೆ ಸ್ಥಾಪಕ ಎಂ ಜಿ ರಾಮಚಂದ್ರನ್ ಅವರ 100ನೇ ಹುಟ್ಟುಹಬ್ಬದ ದಿನವಾಗಿದೆ. ಮೇಲಾಗಿ ವಿ ಕೆ ಶಶಿಕಲಾ ಅವರು ಅಮ್ಮನ ಉತ್ತರಾಧಿಕಾರಿಯಾಗುವುದರ ವಿರುದ್ಧ ಹೋರಾಡುವುದು ದೀಪಾ ಅವರ ಉದ್ದೇಶವಾಗಿರುವುದು ಸ್ಪಷ್ಟವಿದೆ ಎನ್ನಲಾಗಿದೆ.
ದೀಪಾ ಅವರಿಂದು ತನ್ನ ನೂರಾರು ಬೆಂಬಲಿಗರೊಂದಿಗೆ ಮರೀನಾ ಬೀಚ್‌ನಲ್ಲಿರುವ ಎಂಜಿಆರ್ ಮತ್ತು ಜಯಲಲಿತಾ ಅವರ ಸಮಾಧಿ ಸ್ಥಳಕ್ಕೆ ತೆರಳಿ ಅಲ್ಲಿ ಶ್ರದ್ಧಾಂಜಲಿ ಅರ್ಪಿಸಲಿದ್ದಾರೆ. ದೀಪಾ ಅವರು ಲಂಡನ್‌ನಲ್ಲಿ ಶಿಕ್ಷಣ ಪಡೆದವರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
MUST WATCH
ಹೊಸ ಸೇರ್ಪಡೆ
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.