ಜಯಲಲಿತಾ ಅಂತ್ಯಸಂಸ್ಕಾರಕ್ಕೆ 1 ಕೋಟಿ ರೂ. ಖರ್ಚು
Team Udayavani, Oct 22, 2018, 11:48 AM IST
ಚೆನ್ನೈ: ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಅಂತ್ಯಸಂಸ್ಕಾರಕ್ಕೆ ತಮಿಳುನಾಡು ಸರಕಾರ ಬರೋಬ್ಬರಿ 93.33 ಲಕ್ಷ ರೂ. ಖರ್ಚು ಮಾಡಿರುವ ವಿಚಾರ ಮಾಹಿತಿ ಹಕ್ಕು ಅರ್ಜಿಯೊಂದರಿಂದ ಬಹಿರಂಗಗೊಂಡಿದೆ. ಮಧುರೈಯ ಸಯೀದ್ ತಮೀಮ್ ಎಂಬವರು ಸಲ್ಲಿಸಿದ್ದ ಅರ್ಜಿಗೆ ಉತ್ತರಿಸಿರುವ ಸರಕಾರದ ಸಾರ್ವಜನಿಕ ಸಂಪರ್ಕಾಧಿಕಾರಿ ಈ ಮಾಹಿತಿ ನೀಡಿದ್ದಾರೆ. ಅದೇ ಅರ್ಜಿಯಲ್ಲಿ, ಜಯಲಲಿತಾ ಅವರ ನಿಧನ ವಾರ್ತೆಯನ್ನು ತಡವಾಗಿ ಬಹಿರಂಗ ಪಡಿಸಲಾಗಿತ್ತೇ ಎಂಬ ಪ್ರಶ್ನೆಯನ್ನು ಅಲ್ಲಗಳೆಯಲಾಗಿದ್ದು, ಚೆನ್ನೈಯ ಅಪೊಲೊ ಆಸ್ಪತ್ರೆಗೆ ದಾಖಲಾಗಿದ್ದಾಗ ಅವರ ಚಿಕಿತ್ಸೆ ಖರ್ಚನ್ನು ತಮಿಳುನಾಡು ಸರಕಾರ ಭರಿಸಿಲ್ಲ ಎಂದಿದ್ದಾರೆ. “ಜಯಲಲಿತಾ ಅವರ ಶಾಸಕತ್ವದ ಪಿಂಚಣಿ ಯಾರಿಗೆ ಹೋಗುತ್ತಿದೆ’ ಎಂಬ ಪ್ರಶ್ನೆಗೆ ಉತ್ತರವಾಗಿ, ಈ ಬಗ್ಗೆ ತಮಿಳುನಾಡು ವಿಧಾನಸಭೆಯ ಕಾರ್ಯದರ್ಶಿಯನ್ನು ಸಂಪರ್ಕಿಸ ಬೇಕೆಂದು ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.