ಪೌರತ್ವ ಮಸೂದೆ ಪ್ರತಿಭಟಿಸಲು ಜೆಡಿಯು, ಈಶಾನ್ಯದ 11 ಪಕ್ಷಗಳ ನಿರ್ಧಾರ
Team Udayavani, Jan 29, 2019, 9:56 AM IST
ಶಿಲ್ಲಾಂಗ್ : 2016ರ ಪೌರತ್ವ ತಿದ್ದುಪಡಿ ಮಸೂದೆಯನ್ನು ಸರ್ವಾನುಮತದಿಂದ ವಿರೋಧಿಸಲು ಜೆಡಿಯು ಜತೆಗೆ ಈಶಾನ್ಯದ ಹತ್ತು ರಾಜಕೀಯ ಪಕ್ಷಗಳು ಕೈಜೋಡಿಸಲು ನಿರ್ಧರಿಸಿವೆ.
ಬಿಜೆಪಿಯ ಮಿತ್ರ ಪಕ್ಷವಾಗಿರುವ ಜೆಡಿಯು ಮತ್ತು ಈಶಾನ್ಯದ ಹತ್ತು ರಾಜಕೀಯ ಪಕ್ಷಗಳು ಸರ್ವಾನುಮತದಿಂದ ಪೌರತ್ವ ಮಸೂದೆಯನ್ನು ವಿರೋಧಿಸಲು ನಿರ್ಧರಿಸಿವೆ ಎಂದು ಮೇಘಾಲಯ ಸಿಎಂ ಕೊನ್ರಾಡ್ ಸಂಗ್ಮಾ ಮಾಧ್ಯಮಕ್ಕೆ ತಿಳಿಸಿದ್ದಾರೆ.
ವಿವಾದಿತ ಮಸೂದೆಯನ್ನು ರದ್ದು ಮಾಡುವಂತೆ ಕೇಂದ್ರ ಸರಕಾರವನ್ನು ಕೋರಲು 11 ಪಕ್ಷಗಳು ನಿರ್ಧರಿಸಿರುವುದಾಗಿ ಸಂಗ್ಮಾ ಹೇಳಿದರು.
ಪ್ರಸ್ತಾವಿತ ಪೌರತ್ವ ಮಸೂದೆಯಿಂದ ಸ್ಥಳೀಯರ ಬದುಕು ಮತ್ತು ಅಸ್ಮಿತೆಗೆ ಅಪಾಯ ಒದಗಲಿರುವುದರಿಂದ ಅದನ್ನು ರದ್ದುಪಡಿಸುವಂತೆ ಮನನ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮ ನಾಥ್ ಕೋವಿಂದ್ ಅವರನ್ನು ಭೇಟಿಯಾಗಲು ನಿಯೋಗವೊಂದನ್ನು ಕಳುಹಿಸಲು 11 ಪಕ್ಷಗಳು ನಿರ್ಧರಿಸಿವೆ ಎಂದು ಸಂಗ್ಮಾ ಹೇಳಿದರು.
ಬಾಂಗ್ಲಾದೇಶ, ಪಾಕಿಸ್ಥಾನ ಮತ್ತು ಅಫ್ಘಾನಿಸ್ಥಾನದಿಂದ ಧಾರ್ಮಿಕ ದೌರ್ಜನ್ಯಕ್ಕೆ ತುತ್ತಾಗಿ ಭಾರತಕ್ಕೆ
ವಲಸೆ ಬಂದಿರುವ ಆರು ಮುಸ್ಲಿಮೇತರ ಅಲ್ಪಸಂಖ್ಯಾಕ ಸಮೂಹಗಳಿಗೆ ಭಾರತೀಯ ಪೌರತ್ವವನ್ನು ಪ್ರಸ್ತಾವಿತ ವಿವಾದಿತ ಮಸೂದೆಯು ನೀಡಲಿದ್ದು ಇದನ್ನು ಕಳೆದ ಜನವರಿ 8ರಂದು ಲೋಕಸಭೆಯಲ್ಲಿ ಪಾಸು ಮಾಡಲಾಗಿದೆ.
ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಮಣಿಪುರ, ಮಿಜೋರಾಂ, ನಾಗಾಲ್ಯಾಂಡ್ ಮತ್ತು ತ್ರಿಪುರ ದ ರಾಜಕೀಯ ಪಕ್ಷಗಳು ಎರಡು ದಿನಗಳ ಸಮಾವೇಶದಲ್ಲಿ ಪಾಲ್ಗೊಂಡು ವಿವಾದಿತ ಪೌರತ್ವ ಮಸೂದೆಯನ್ನು ವಿರೋಧಿಸಲು ಸರ್ವಾನುಮತದಿಂದ ನಿರ್ಧರಿಸಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.