ಬಿಹಾರದಲ್ಲಿ ಬಿಜೆಪಿಗೆ ಬಲ:ಎನ್‌ಡಿಎಯಲ್ಲೇ ಉಳಿಯಲಿರುವ ನಿತೀಶ್!
Team Udayavani, Jul 8, 2018, 3:01 PM IST
ಪಟ್ನಾ: ಜೆಡಿಯು ಎನ್‌ಡಿಎ ಮೈತ್ರಿಕೂಟದಿಂದ ಹೊರ ನಡೆಯುತ್ತದೆ ಎನ್ನುವ ಎಲ್ಲಾ ಊಹಾಪೋಹಗಳಿಗೆ ತೆರೆ ಬಿದ್ದಿದ್ದು, 2019 ರ ಚುನಾವಣೆಯನ್ನು ಬಿಜೆಪಿ ಜೊತೆಯಲ್ಲೇ ಎದುರಿಸಲು ಬಿಹಾರ ಸಿಎಂ ನಿತೀಶ್ ಕುಮಾರ್ ನಿರ್ಧರಿಸಿದ್ದಾರೆ.
ಶನಿವಾರ ಸಂಜೆ ಮತ್ತು ಭಾನುವಾರ ಬೆಳಗ್ಗೆ ಹೊಸದಿಲ್ಲಿಯಲ್ಲಿ ನಡೆದ ಜೆಡಿಯು ಪ್ರಮುಖ ನಾಯಕರ ಮಹತ್ವದ ಸಭೆಯಲ್ಲಿ ನಿತೀಶ್ ಎಲ್ಲಾ ನಾಯಕರೊಂದಿಗೆ ಚರ್ಚಿಸಿ ಬಿಜೆಪಿಯೊಂದಿಗೆ ಮೈತ್ರಿ ಮುಂದುವರಿಸಲು ನಿರ್ಧರಿಸಿದ್ದಾರೆ.
2019ರ ಲೋಕಸಭಾ ಚುನಾವಣೆಯೊಂದಿಗೆ 2020 ರ ಬಿಹಾರ ವಿಧಾಸಭಾ ಚುನಾವಣೆಯಲ್ಲೂ ಸೀಟು ಹಂಚಿಕೆ ಮಾಡಿಕೊಳ್ಳಲು ಜೆಡಿಯು ಮುಂದಾಗಿದೆ.
2019 ರ ಲೋಕಸಭಾ ಚುನಾವಣೆಯಲ್ಲಿ 17 ಸ್ಥಾನಗಳಲ್ಲಿ ಸ್ಪರ್ಧಿಸಲು ಜೆಡಿಯು ನಿರ್ಧರಿಸಿದೆ. ಉಳಿದ 23 ಸ್ಥಾನಗಳನ್ನು ಬಿಜೆಪಿ,ಎಲ್‌ಜೆಪಿ ಮತ್ತು ಆರ್‌ಎಲ್‌ಎಸ್‌ಪಿಗೆ ಬಿಟ್ಟುಕೊಡಲು ತೀರ್ಮಾನಿಸಿದೆ.
2014 ರ ಚುನಾವಣೆಯಲ್ಲಿ ಮೋದಿ ವಿರುದ್ಧ ಮುನಿಸಿಕೊಂಡು ಹೊರ ನಡೆದಿದ್ದು ನಿತೀಶ್ ಭಾರೀ ಹೊಡೆತ ಅನುಭವಿಸಿದ್ದರು. 40 ಲೋಕಸಭಾ ಸ್ಥಾನಗಳ ಪೈಕಿ ಕೇವಲ 2 ರಲ್ಲಿ ಜಯ ಗಳಿಸಿದ್ದರು.
ಈ ಬಾರಿ ಆರ್‌ಜೆಡಿ ಕಾಂಗ್ರೆಸ್ ಮೈತ್ರಿ ಕೂಟ ಮತ್ತು ಆಡಳಿತಾರೂಢ ಜೆಡಿಯು- ಬಿಜೆಪಿಯ ಎನ್‌ಡಿಎ ಮೈತ್ರಿಕೂಟದ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ನಡೆಯುವುದು ಖಚಿತವಾಗಿದೆ.
ಸೀಟು ಹೊಂದಾಣಿಕೆ ಸಾಧ್ಯವೆ?
ಬಿಜೆಪಿ 2014 ರಲ್ಲಿ 22 ಸ್ಥಾನಗಳು,ಮೈತ್ರಿ ಪಕ್ಷಗಳಾದ ಎಲ್‌ಜೆಪಿ 6 , ಆರ್‌ಎಲ್‌ಎಸ್‌ಪಿ 3 ಸೇರಿ 31 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಜೆಡಿಯು 17 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ ಉಳಿಯುವುದು 23 ಸ್ಥಾನಗಳು ಆಗ 8 ಕ್ಷೇತ್ರಗಳನ್ನು ಮೂರೂ ಪಕ್ಷಗಳು ಕಳೆದುಕೊಳ್ಳಬೇಕಾದ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ
Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು
Navy: ಜ.15ಕ್ಕೆ ನೌಕಾಪಡೆಗೆ 2 ಯುದ್ಧ ನೌಕೆ, 1 ಸಬ್‌ಮರೀನ್ ಸೇರ್ಪಡೆ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ
Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆ
Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ
ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ
ESI ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸಂಕಷ್ಟ:ಸಂಸದ ಬ್ರಿಜೇಶ್ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.