ಜೈಶ್‌ ಅಸುರ ಸಾವು?


Team Udayavani, Mar 4, 2019, 12:30 AM IST

fierce-maulana-masood-azhar.jpg

ನವದೆಹಲಿ/ಇಸ್ಲಾಮಾಬಾದ್‌: ಭಾರತದ ಮಣ್ಣಲ್ಲಿ ಅನೇಕ ವಿಧ್ವಂಸಕ ಕೃತ್ಯಗಳನ್ನು ಕೈಗೊಂಡು,  ಹಲವು ಅಮಾಯಕರ ಸಾವಿಗೆ ಕಾರಣನಾದ ಜೈಶ್‌ ರಕ್ಕಸ ಮೌಲಾನಾ ಮಸೂದ್‌ ಅಜರ್‌ನ ಸಂಹಾರವಾಯಿತೇ?

ಹೌದು ಎನ್ನುತ್ತಿವೆ ಮೂಲಗಳು. ಪಾಕಿಸ್ತಾನದ ರಾವಲ್ಪಿಂಡಿಯ ಸೇನಾ ಆಸ್ಪತ್ರೆಯಲ್ಲಿ ಶನಿವಾರವೇ ಆತ ಮೃತಪಟ್ಟಿದ್ದಾನೆ ಎಂಬ ವದಂತಿಯು ಭಾನುವಾರವಿಡೀ ಹಬ್ಬಿದ್ದು, ಹಲವು ಚರ್ಚೆಗಳಿಗೆ ಗ್ರಾಸವಾಗಿದೆ. ಪಾಕಿಸ್ತಾನದ ಬಾಲಕೋಟ್‌ ಮೇಲೆ ಭಾರತದ ವಾಯುಪಡೆ ನಡೆಸಿದ ವೈಮಾನಿಕ ದಾಳಿ ವೇಳೆ ಉಗ್ರರ ಶಿಬಿರದಲ್ಲಿ ಮಲಗಿದ್ದ ಜೈಶ್‌-ಎ-ಮೊಹಮ್ಮದ್‌ ಸಂಸ್ಥಾಪಕ ಮಸೂದ್‌ ಅಜರ್‌ ತೀವ್ರ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದ. ಈತನಿಗೆ ಮೊದಲೇ ಕಿಡ್ನಿ ವೈಫ‌ಲ್ಯವಾಗಿದ್ದ ಕಾರಣ, ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಆದರೆ, ಮತ್ತೂಂದು ಮೂಲಗಳ ಪ್ರಕಾರ, ಮೂತ್ರಪಿಂಡ ಸಮಸ್ಯೆಯಿಂದ 2 ದಿನಗಳ ಹಿಂದಷ್ಟೇ ಆಸ್ಪತ್ರೆಗೆ ದಾಖಲಾಗಿದ್ದ ಅಜರ್‌, ಚಿಕಿತ್ಸೆಗೆ ಸ್ಪಂದಿಸದೇ ಕಿಡ್ನಿ ವೈಫ‌ಲ್ಯಗೊಂಡು ಸಾವಿಗೀಡಾಗಿದ್ದಾನೆ ಎನ್ನಲಾಗಿದೆ.  ಈತನ ಸಾವಿನ ಕುರಿತು ಪಾಕಿಸ್ತಾನ ಸರ್ಕಾರವಾಗಲೀ, ಸೇನೆಯಾಗಲೀ ಅಧಿಕೃತ ಮಾಹಿತಿ ಹೊರಹಾಕಿಲ್ಲ. ಆದರೆ, ಉನ್ನತ ಗುಪ್ತಚರ ಮೂಲಗಳು ಅಜರ್‌ ಸತ್ತಿರುವುದು ನಿಜ ಎಂದು ಹೇಳುತ್ತಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಶುಕ್ರವಾರವಷ್ಟೇ ಪಾಕಿಸ್ತಾನದ ವಿದೇಶಾಂಗ ಸಚಿವೆ ಶಾ ಮೆಹಮೂದ್‌ ಖುರೇಷಿ ಅವರು, ಮಸೂದ್‌ ಅಜರ್‌ ಪಾಕಿಸ್ತಾನ ದಲ್ಲಿರುವುದನ್ನು ಒಪ್ಪಿಕೊಂಡಿದ್ದರು. ಅಲ್ಲದೆ, ಉಗ್ರ ಅಜರ್‌ ಅನಾರೋಗ್ಯ ಪೀಡಿತನಾಗಿದ್ದು, ಅತ್ತಿತ್ತ ನಡೆಯಲೂ ಆಗದ ಸ್ಥಿತಿಯಲ್ಲಿದ್ದಾನೆ ಎಂದೂ ಹೇಳಿದ್ದರು. ಇದಾದ ಮಾರನೇ ದಿನವೇ ಅಂದರೆ, ಶನಿವಾರ ಅಜರ್‌ನನ್ನು ರಾವಲ್ಪಿಂಡಿ ಸೇನಾ ಆಸ್ಪತ್ರೆಯಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂಬ ವರದಿಗಳು ಪ್ರಕಟವಾಗಿದ್ದವು.

ಮಾಹಿತಿ ಕಲೆ ಹಾಕುತ್ತಿರುವ ಗುಪ್ತಚರ ಇಲಾಖೆ
ಭಾನುವಾರ ಬೆಳಗ್ಗೆಯಿಂದಲೇ ಸಾಮಾಜಿಕ ಜಾಲತಾಣಗಳಲ್ಲಿ ಜೈಶ್‌ ಉಗ್ರ ಮಸೂದ್‌ ಅಜರ್‌ ಸತ್ತ ಎಂಬ ಸುದ್ದಿಗಳು ಹರಿದಾಡತೊಡಗಿವೆ. ಸಂಜೆ ವೇಳೆಗೆ ಈ ಸುದ್ದಿಯನ್ನು ಕೆಲವು ಮಾಧ್ಯಮಗಳೂ ಪ್ರಕಟಿಸಿವೆ. ಈ ಹಿನ್ನೆಲೆಯಲ್ಲಿ, ಆತನ ಸಾವಿನ ಬಗ್ಗೆ ಖಚಿತಪಡಿಸಲು ಗುಪ್ತಚರ ಸಂಸ್ಥೆಗಳು ಮಾಹಿತಿ ಕಲೆ ಹಾಕುತ್ತಿವೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಈ ಕುರಿತು ಮಾತನಾಡಿದ ಅಧಿಕಾರಿಗಳು, ಉಗ್ರ ಅಜರ್‌ ಪಾಕ್‌ನ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂಬ ಮಾಹಿತಿ ಬಿಟ್ಟರೆ ಬೇರ್ಯಾವ ಮಾಹಿತಿಯೂ ನಮಗೆ ಸಿಕ್ಕಿಲ್ಲ. ಸಾವಿನ ಕುರಿತ ಸತ್ಯಾಸತ್ಯತೆಯನ್ನು ಅರಿಯಲು ಪ್ರಯತ್ನಿಸುತ್ತಿದ್ದೇವೆ ಎಂದಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ದಿನವಿಡೀ ಚರ್ಚೆ
ಫೇಸ್‌ಬುಕ್‌, ಟ್ವಿಟರ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಭಾನುವಾರ ದಿನವಿಡೀ ಉಗ್ರ ಅಜರ್‌ ಸಾವಿನ ಕುರಿತು ಚರ್ಚೆಯಾಗಿದೆ. ಟ್ವಿಟರ್‌ನಲ್ಲಿ ಮಸೂದ್‌ಅಜರ್‌ ಡೆಡ್‌ ಎಂಬ ಹ್ಯಾಷ್‌ಟ್ಯಾಗ್‌ನಲ್ಲಿ ಈ ಕುರಿತು ಹಲವರು ತಮ್ಮ ಅಭಿಪ್ರಾಯ, ಮಾಹಿತಿ ಹೊರಹಾಕಿದ್ದಾರೆ. ಫೆ.26ರಂದು ಭಾರತದ ವಾಯುಪಡೆ ನಡೆಸಿದ ದಾಳಿಯಲ್ಲೇ ಆತ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಆದರೆ, ಪಾಕಿಸ್ತಾನ ಸರ್ಕಾರವು ಆತನದ್ದು ಸಹಜ ಸಾವು ಎಂದು ಸದ್ಯದಲ್ಲೇ ಘೋಷಿಸಲಿದೆ ಎಂದು ಕೆಲವರು ಟ್ವೀಟ್‌ ಮಾಡಿದರೆ, ಇನ್ನು ಕೆಲವರು, “ಮಸೂದ್‌ ಅಜರ್‌ ಸ್ಥಿತಿ ಗಂಭೀರವಾಗಿದೆ. ಆತ ಸದ್ಯ ವೆಂಟಿಲೇಟರ್‌ನಲ್ಲಿದ್ದು, 2ರಿಂದ 3 ದಿನವಷ್ಟೇ ಬದುಕುಳಿಯಬಹುದು ಎಂದು ವೈದ್ಯರು ತಿಳಿಸಿದ್ದಾರೆ’ ಎಂದು ಬರೆದುಕೊಂಡಿದ್ದಾರೆ. ಮತ್ತೆ ಕೆಲವರು, ಮಸೂದ್‌ ಅಜರ್‌ ಸತ್ತಿರುವುದು ನಿಜ. ಆದರೆ, ಅದನ್ನು ಸರ್ಕಾರ ಬಹಿರಂಗಪಡಿಸಿಲ್ಲ ಎಂದಿದ್ದಾರೆ.

ಮಸೂದ್‌ ಆರೋಗ್ಯವಾಗಿದ್ದಾನೆ ಎನ್ನುತ್ತಿದೆ ಜೈಶ್‌
ಉಗ್ರನ ಅಂತ್ಯವಾಯಿತು ಎಂಬ ಸುದ್ದಿ ವಿಶ್ವಾದ್ಯಂತ ಹಬ್ಬುತ್ತಿದ್ದಂತೆ, ಎಚ್ಚೆತ್ತಿರುವ ಜೈಶ್‌ ಉಗ್ರ ಸಂಘಟನೆ ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿದೆ. ಮಸೂದ್‌ ಅಜರ್‌ ಜೀವಂತವಾಗಿದ್ದು, ಆರೋಗ್ಯವೂ ಚೇತರಿಸಿದೆ ಎಂದು ಭಾನುವಾರ ರಾತ್ರಿ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಇದೇ ವೇಳೆ, ಇಮ್ರಾನ್‌ ಖಾನ್‌ ಸಂಪುಟದ ಸಚಿವರೊಬ್ಬರು, ಉಗ್ರ ಕಮಾಂಡರ್‌ನ ಆರೋಗ್ಯ ಚಿಂತಾಜನಕವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಹೇಳಿದ್ದಾರೆ.

ಭಯೋತ್ಪಾದಕ ಪಟ್ಟಿಗೆ ಅಜರ್‌ ಹೆಸರು ಸೇರಿಸಲು ಒಪ್ಪಿಗೆ?
ಜೈಶ್‌ ಉಗ್ರ ಮಸೂದ್‌ ಅಜರ್‌ ಹೆಸರನ್ನು ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಭಯೋತ್ಪಾದಕರ ಪಟ್ಟಿಗೆ ಸೇರ್ಪಡೆ ಮಾಡುವುದಕ್ಕೆ ವಿರೋಧಿಸುತ್ತಾ ಬಂದಿರುವ ಪಾಕಿಸ್ತಾನವು, ತನ್ನ ವಿರೋಧವನ್ನು ವಾಪಸ್‌ ಪಡೆಯುವ ಸಾಧ್ಯತೆಯಿದೆ ಎಂದು ವರದಿಗಳು ಹೇಳಿವೆ. ಅಮೆರಿಕ, ಯುಕೆ ಮತ್ತು ಫ್ರಾನ್ಸ್‌ ಕಳೆದ ಬುಧವಾರ ಅಜರ್‌ನನ್ನು ಉಗ್ರರ ಪಟ್ಟಿಗೆ ಸೇರಿಸುವಂತೆ ಹೊಸ ಪ್ರಸ್ತಾಪ ಸಲ್ಲಿಸಿದ ಬೆನ್ನಿಗೇ ಇಂಥದ್ದೊಂದು ವರದಿ ಹೊರಬಿದ್ದಿದೆ. ಮಹತ್ವದ ಬೆಳವಣಿಗೆ ಎಂಬಂತೆ, ಪಾಕಿಸ್ತಾನವು ಎಲ್ಲ ಉಗ್ರ ಸಂಘಟನೆಗಳು ಹಾಗೂ ಜೆಇಎಂ ಉಗ್ರ ಅಜರ್‌ ವಿರುದ್ಧ ನಿರ್ಣಾಯಕ ಕ್ರಮ ಕೈಗೊಳ್ಳಲು ಚಿಂತನೆ ನಡೆಸಿದೆ ಎಂದು ಮೂಲಗಳನ್ನು ಉಲ್ಲೇಖೀಸಿ ದಿ ಎಕ್ಸ್‌ಪ್ರೆಸ್‌ ಟ್ರಿಬ್ಯೂನ್‌ ವರದಿ ಮಾಡಿದೆ. ಇದು ನಿಜವಾದಲ್ಲಿ, ಈ ಬೆಳವಣಿಗೆಯು ಭಾರತಕ್ಕೆ ಅತಿದೊಡ್ಡ ರಾಜತಾಂತ್ರಿಕ ಗೆಲುವಾಗುತ್ತದೆ. ಪಾಕಿಸ್ತಾನವೇ ತನ್ನ ನಿಲುವು ಸಡಿಲಿಸಿದರೆ, ಚೀನಾ ಕೂಡ ಅದಕ್ಕೆ ಬೆಂಬಲ ವ್ಯಕ್ತಪಡಿಸುವುದು ಖಚಿತ. ಆಗ, ಜಾಗತಿಕವಾಗಿ ಪಾಕಿಸ್ತಾನದ ಮೇಲೆ ಭಾರತ ತಂದ ಒತ್ತಡವೂ ಫ‌ಲನೀಡಿದಂತಾಗುತ್ತದೆ.

ಪಾಕಿಸ್ತಾನದಲ್ಲಿರುವ ಸರ್ಕಾರದ ಉನ್ನತ ಮೂಲಗಳು ಉಗ್ರ ಮಸೂದ್‌ ಅಜರ್‌ ಸತ್ತಿದ್ದಾನೆಂಬ ಮಾಹಿತಿಯನ್ನು ದೃಢಪಡಿಸಲು ನಿರಾಕರಿಸುತ್ತಿವೆ. ಆತ ಡಯಾಲಿಸಿಸ್‌ನಲ್ಲಿದ್ದಾನೆ ಎಂದಷ್ಟೇ ಹೇಳುತ್ತಿವೆ. ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
– ರಾಜ್‌ದೀಪ್‌ ಸರ್ದೇಸಾಯಿ

ಟಾಪ್ ನ್ಯೂಸ್

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.