ಮೂಗು,ಕಿವಿಯಲ್ಲಿ ರಕ್ತ;ಜೆಟ್ ಏರ್ವೇಸ್ ನಲ್ಲಿ ಪ್ರಯಾಣಿಕರು ಕಂಗಾಲು!
Team Udayavani, Sep 20, 2018, 10:25 AM IST
ಮುಂಬಯಿ: ಜೆಟ್ ಏರ್ವೇಸ್ ಸಿಬಂದಿಗಳ ಯಡವಟ್ಟಿನಿಂದಾಗಿ ಪ್ರಯಾಣಿಕರು ಕಂಗಾಲಾದ ಘಟನೆ ಗುರುವಾರ ನಡೆದಿದೆ.
ಕ್ಯಾಬಿನ್ ಒತ್ತಡವನ್ನು ಸಿಬಂದಿಗಳು ನಿಯಂತ್ರಿಸದೆ ಇದ್ದ ಕಾರಣ , ಪ್ರಯಾಣಿಕರು ಏನಾಗುತ್ತಿದೆ ಎಂದು ತೋಚದೆ ಕಂಗಾಲಾಗಿದ್ದಾರೆ. 30 ಕ್ಕೂ ಹೆಚ್ಚು ಪ್ರಯಾಣಿಕರು ಅಸ್ವಸ್ಥಗೊಂಡಿದ್ದಾರೆ. ಒತ್ತಡ ತಾಳಲಾರದೆ ಕೆಲ ಪ್ರಯಾಣಿಕರಿಗೆ ತಲೆ ನೋವು ಕಾಣಿಸಿಕೊಂಡಿದೆ. ಕೆಲವರ ಮೂಗು ಮತ್ತು ಕಿವಿಗಳಿಂದ ರಕ್ತಸ್ರಾವವೂ ಆಗಿದೆ ಎಂದು ವರದಿಯಾಗಿದೆ.
ಮುಂಬಯಿಂದ ಜೈಪುರಕ್ಕೆ ಹಾರಾಟ ಆರಂಭಿಸಿದ ವಿಮಾನದಲ್ಲಿ ಈ ಘಟನೆ ನಡೆದಿದ್ದು, ಒಟ್ಟು 166 ಮಂದಿ ಪ್ರಯಾಣಿಕರಿದ್ದರು.
ಪ್ರಯಾಣಿಕರು ಅಸ್ವಸ್ಥರಾಗುತ್ತಿದ್ದಂತೆ 45 ನಿಮಿಷದ ಹಾರಾಟದ ಬಳಿಕ ಮುಂಬಯಿ ವಿಮಾನ ನಿಲ್ದಾಣದಲ್ಲಿ ವಾಪಾಸ್ ಇಳಿಸಲಾಗಿದ್ದು, ಸದ್ಯ ಅಸ್ವಸ್ಥಗೊಂಡಿರುವ ಪ್ರಯಾಣಿಕರಿಗೆ ವೈದ್ಯರು ಚಿಕಿತ್ಸೆ ನೀಡಿದ್ದಾರೆ.
ವಿಮಾನದೊಳಗೆ ಒತ್ತಡ ನಿಯಂತ್ರಿಸುವ ಸ್ವಿಚ್ ಹಾಕಲು ಸಿಬಂದಿ ಮರೆತ ಕಾರಣ ಈ ಘಟನೆ ನಡೆದಿದೆ.
ಈ ಘಟನೆ ಕುರಿತು ಎಎಐಬಿ ತನಿಖೆಗೆ ಆದೇಶಿಸಿದ್ದು, ಡಿಜಿಸಿಎಗೆ ದೂರನ್ನೂ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.