ಕಾನೂನು ಜೀವನಕ್ಕೆ ಜೇಠ್ಮಲಾನಿ ವಿದಾಯ
Team Udayavani, Sep 11, 2017, 8:35 AM IST
ಹೊಸದಿಲ್ಲಿ: ದೇಶದ ಖ್ಯಾತ ನ್ಯಾಯವಾದಿ, ಕೇಂದ್ರದ ಮಾಜಿ ಸಚಿವ ರಾಮ್ ಜೇಠ್ಮಲಾನಿ (94) ವಕೀಲ ವೃತ್ತಿಯಿಂದ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ. ಒಟ್ಟು ಏಳು ದಶಕಗಳ ಕಾಲ ಸಮರ್ಥವಾಗಿ ಕಾನೂನು ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಿದ ಹೆಗ್ಗಳಿಕೆ ಅವರದ್ದು.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ದೀಪಕ್ ಮಿಶ್ರಾ ನೇಮಕವಾಗಿರುವ ಹಿನ್ನೆಲೆಯಲ್ಲಿ ಬಾರ್ ಕೌನ್ಸಿಲ್ ಆಫ್ ಇಂಡಿಯಾ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಘೋಷಣೆ ಮಾಡಿದ್ದಾರೆ. ಈ ವೇಳೆ, ಕೇಂದ್ರದ ಹಾಲಿ ಎನ್ಡಿಎ ಮತ್ತು ಹಿಂದಿನ ಯುಪಿಎ ಸರಕಾರಗಳ ವಿರುದ್ಧ ಹರಿಹಾಯ್ದ ಜೇಠ್ಮಲಾನಿ, ದೇಶ ಈಗ ಸಮಸ್ಯೆ ಎದುರಿಸುತ್ತಿದೆ. ಎರಡೂ ಸರಕಾರಗಳು ದೇಶದ ಘನತೆಯನ್ನೇ ತಗ್ಗಿಸಿವೆ ಎಂದು ಆರೋಪಿಸಿದ್ದಾರೆ. ಜತೆಗೆ, ಭ್ರಷ್ಟ ರಾಜಕಾರಣಿಗಳ ವಿರುದ್ಧ ಹೋರಾಟ ಮುಂದುವರಿಸುವುದಾಗಿ ಹೇಳಿದ್ದಾರೆ. ನ್ಯಾಯವಾದಿಗಳು ಮತ್ತು ದೇಶದ ಪ್ರಜೆಗಳು ಸಮಸ್ಯೆ ವಿರುದ್ಧ ಹೋರಾಟ ನಡೆಸಲು ಮುಂದಾಗಬೇಕಾಗಿದೆ ಎಂದು ಹೇಳಿದ್ದಾರೆ. ಅಧಿಕಾರದಲ್ಲಿರುವವರನ್ನು ಶೀಘ್ರವೇ ಕೆಳಕ್ಕೆ ಇಳಿಸಬೇಕು ಎಂದು ಪ್ರತಿಪಾದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಹಂತಕ
Ambulance ಇಂಜಿನ್ ಗೆ ಬೆಂಕಿ-ಆಕ್ಸಿಜನ್ ಸಿಲಿಂಡರ್ ಸ್ಫೋಟ;ಗರ್ಭಿಣಿ ಪ್ರಾಣಾಪಾಯದಿಂದ ಪಾರು!
Alert: ವಾಟ್ಸ್ಆ್ಯಪ್ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್ ಗೆದ್ದ ವಿಜ್ಞಾನಿ!
By Election: ವಯನಾಡ್ ಉಪಸಮರ: ಶೇ.65ರಷ್ಟು ಮತದಾನ
MUST WATCH
ಹೊಸ ಸೇರ್ಪಡೆ
Bantwala: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು
Kanguva Movie: ಪ್ರೇಕ್ಷಕರ ಮನದಲ್ಲಿ ಕಂಗೊಳಿಸಿದ ʼಕಂಗುವʼ..ಸಿನಿಮಾ ನೋಡಿದವರು ಹೇಳಿದ್ದೇನು?
IPL 2025: ಸಾತಂತ್ರ್ಯ ನೀಡುವ ತಂಡವೇ ನನ್ನ ಆದ್ಯತೆ: ಕೆ.ಎಲ್.ರಾಹುಲ್
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.