ಜಾರ್ಖಂಡ್; ಜೆಎಂಎಂ ಚುನಾವಣಾ ಟಿಕೆಟ್ ಬೆಲೆ ಎಷ್ಟು ಗೊತ್ತಾ? ಬಿಜೆಪಿ ಟೀಕೆ
Team Udayavani, Nov 7, 2019, 6:30 PM IST
ರಾಂಚಿ(ಜಾರ್ಖಂಡ್):ಜಾರ್ಖಂಡ್ ವಿಧಾನಸಭಾ ಚುನಾವಣೆ ಘೋಷಣೆಯಾದ ನಂತರ ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಸಿದ್ಧತೆಯಲ್ಲಿದ್ದರೆ, ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) ಚುನಾವಣಾ ಟಿಕೆಟ್ ಗೆ(ಅಭ್ಯರ್ಥಿ ನಾಮಪತ್ರ)ಗೆ 51 ಸಾವಿರ ರೂಪಾಯಿ ಶುಲ್ಕ ನಿಗದಿಪಡಿಸಿರುವುದಾಗಿ ಜೀ ಬಿಹಾರ್-ಜಾರ್ಖಂಡ್ ನ್ಯೂಸ್ ತಿಳಿಸಿದೆ.
ಜಾರ್ಖಂಡ್ ಮುಕ್ತಿ ಮೋರ್ಚಾ ಪ್ರಾದೇಶಿಕ ಪಕ್ಷವಾಗಿದ್ದು, ಅದು ಯಾವಾಗಲೂ ಬಡ ಬುಡಕಟ್ಟು ಜನಾಂಗದ ಹಕ್ಕುಗಳ ಬಗ್ಗೆಯೇ ಮಾತನಾಡುತ್ತದೆ. ಆದರೆ ಪಕ್ಷದ ಟಿಕೆಟ್ ಅನ್ನು ಮಾರಾಟ ಮಾಡುತ್ತಿರುವುದು ಪ್ರಜಾಪ್ರಭುತ್ವದ ಅಣಕವಾಗಿದೆ ಎಂದು ಬಿಜೆಪಿ ವಕ್ತಾರ ಪ್ರತುಲ್ ಶಾಹದೇವ್ ಟೀಕಿಸಿದ್ದಾರೆ.
ಶಿಬು ಸೋರೇನ್ ನೇತೃತ್ವದ ಜೆಎಂಎಂ ಪಕ್ಷ ಬಡ ಬುಡಕಟ್ಟು ಜನಾಂಗದ ಹತ್ಯೆಯನ್ನು ಖಂಡಿಸಿ, ಅವರ ಹಕ್ಕುಗಳ ಬಗ್ಗೆ ಹೋರಾಟ ನಡೆಸುತ್ತಿತ್ತು. ಆದರೆ ಜೆಎಂಎಂನ ಹಾಲಿ ನಾಯಕತ್ವ ಬುಡಕಟ್ಟು ಜನಾಂಗದ ಬಗ್ಗೆ ಯಾವುದೇ ಕಾಳಜಿಯನ್ನು ಹೊಂದಿಲ್ಲ. ಇದೀಗ ಪಕ್ಷದ ಟಿಕೆಟ್ ಅನ್ನು ಮಾರಾಟ ಮಾಡುವ ಮಟ್ಟಕ್ಕೆ ಇಳಿದಿದೆ ಎಂದು ಶಾಹದೇವ್ ದೂರಿದ್ದಾರೆ.
ನವೆಂಬರ್ 30ರಿಂದ ಜಾರ್ಖಂಡ್ ವಿಧಾನಸಭಾ ಚುನಾವಣಾ ಐದು ಹಂತಗಳಲ್ಲಿ ನಡೆಯಲಿದೆ. ಡಿಸೆಂಬರ್ 23ರಂದು ಫಲಿತಾಂಶ ಪ್ರಕಟವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.