Jharkhand: ಅನಾರೋಗ್ಯದಿಂದ ಬಳಲುತ್ತಿದ್ದ ಜಾರ್ಖಂಡ್ ಶಿಕ್ಷಣ ಸಚಿವ ಜಗರ್ನಾಥ್ ಮಹತೋ ನಿಧನ
Team Udayavani, Apr 6, 2023, 11:43 AM IST
ರಾಂಚಿ: ಜಾರ್ಖಂಡ್ ಶಿಕ್ಷಣ ಸಚಿವ ಜಗರ್ನಾಥ್ ಮಹತೋ ಗುರುವಾರ ಬೆಳಗ್ಗೆ( ಏ.6 ರಂದು) ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಾ. 14 ರಿಂದ ಚೆನ್ನೈ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ.
ಈ ಹಿಂದೆ ಸಚಿವರಿಗೆ ಕೋವಿಡ್ ಸೋಂಕು ತಗುಲಿತ್ತು. ಆ ಕಾರಣದಿಂದ ಅವರ ಶ್ವಾಸಕೋಶವನ್ನು ಕಸಿ ಮಾಡಲಾಗಿತ್ತು. ಅಂದಿನಿಂದ ಅವರ ಆರೋಗ್ಯದಲ್ಲಿ ನಾನಾ ತೊಂದರೆ ಕಾಣಿಸಿಕೊಂಡಿತ್ತು. ಇತ್ತೀಚೆಗೆ ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಜಗರ್ನಾಥ್ ಮಹತೋ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆ ನಂತರ ಅವರನ್ನು ಆಂಬ್ಯುಲೆನ್ಸ್ ಮೂಲಕ ಚೆನ್ನೈಗೆ ಕರೆದೊಯ್ಯಲಾಗಿತ್ತು.
ಜಗರ್ನಾಥ್ ಮಹತೋ ಜೆಎಂಎಂ ಪಕ್ಷದ, ಗಿರಿದಿಹ್‌ನ ಡುಮ್ರಿ ಕ್ಷೇತ್ರದ ಹಿರಿಯ ಶಾಸಕರಾಗಿದ್ದರು. ಶಿಬು ಸೊರೆನ್ ನೇತೃತ್ವದ ಪ್ರತ್ಯೇಕ ರಾಜ್ಯ ಚಳುವಳಿಯಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.