Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ, ನೂತನ ಸರಕಾರ ರಚನೆಗೆ ಹಕ್ಕು ಮಂಡಿಸಿದ ಜೆಎಂಎಂ ನೇತೃತ್ವದ ಮೈತ್ರಿಕೂಟ
Team Udayavani, Nov 24, 2024, 7:04 PM IST
ರಾಂಚಿ (ಜಾರ್ಖಂಡ್): ರಾಜ್ಯದ ಮತದಾರರು ಮತ್ತೊಮ್ಮೆ ಹಾಲಿ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ), ಕಾಂಗ್ರೆಸ್, ಆರ್‌ಜೆಡಿ ಮೈತ್ರಿಕೂಟಕ್ಕೆ ಬಹುಮತ ನೀಡಿರುವುದರಿಂದ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ. 28 ರಂದು ಜಾರ್ಖಂಡ್ ನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ರವಿವಾರ ಸಂಜೆ ರಾಜಭವನದಲ್ಲಿ ರಾಜ್ಯಪಾಲ ಸಂತೋಷ್ ಗಂಗ್ವಾರ್ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಹೇಮಂತ್ ಸೊರೇನ್, ನೂತನ ಸರ್ಕಾರ ರಚನೆಯ ಹಕ್ಕು ಮಂಡಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರ ರಚನೆ ಪ್ರಕ್ರಿಯೆ ಆರಂಭವಾಗಿದ್ದು, ನವೆಂಬರ್ 28 ರಂದು ಪದ ಗ್ರಹಣ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.
ಶಾಸಕಾಂಗ ಪಕ್ಷದ ನಾಯಕನಾಗಿ ಹೇಮಂತ್ ಸೊರೇನ್ ಆಯ್ಕೆ :
ಇದಕ್ಕೂ ಮುನ್ನಾ ಪಕ್ಷದ ಕಚೇರಿಯಲ್ಲಿ ನಡೆದ ಜೆಎಂಎಂ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಹೇಮಂತ್ ಸೊರೆನ್ ರನ್ನು ನೂತನ ಶಾಸಕರ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಇತ್ತೀಚಿಗೆ ನಡೆದ ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಹೇಮಂತ್ ಸೊರೆನ್‌ರ ಪಕ್ಷ 34, ಕಾಂಗ್ರೆಸ್ 16, ಆರ್ ಜೆಡಿ 4 ಮತ್ತು ಸಿಪಿಐಎಂಎಲ್ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿ 81 ಸ್ಥಾನಗಳ ವಿಧಾನಸಭೆಯಲ್ಲಿ 56 ಸ್ಥಾನಗಳ ಗೆಲ್ಲುವ ಮೂಲಕ ಎರಡನೇ ಅವಧಿಯಲ್ಲೂ ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಕೂಟದ ಸರ್ಕಾರ ರಚಿಸುವಲ್ಲಿ ಹಾದಿ ಸುಗಮವಾಗಿದೆ. ಈ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 21 ಸ್ಥಾನಗಳ ಗಳಿಸಿದೆ.
#WATCH | Ranchi: Leaders of INDIA alliance shows unity outside the Raj Bhawan in Ranchi
Hemant Soren tendered his resignation to the Governor and staked a claim to form Government pic.twitter.com/K4CXMmmjkJ
— ANI (@ANI) November 24, 2024
ನ.28ರಂದು ನಡೆಯುವ ಅದ್ದೂರಿ ಮುಖ್ಯಮಂತ್ರಿ ಹಾಗೂ ಸಚಿವರ ಪ್ರಮಾಣ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಸೇರಿ ವಿರೋಧ ಪಕ್ಷದ ಪ್ರಮುಖ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.