ಪ್ರಧಾನಿ ನರೇಂದ್ರ ಮೋದಿ ‘ ನಮಕ್ ಹರಾಮ್ ‘ ಎಂದ ಜಿಗ್ನೇಶ್ ಮೇವಾನಿ
Team Udayavani, Oct 26, 2018, 3:35 PM IST
ಹೊಸದಿಲ್ಲಿ : ಗುಜರಾತ್ ನಲ್ಲಿ ಈಚೆಗೆ ಹೊರ ರಾಜ್ಯಗಳ ವಲಸೆ ಕಾರ್ಮಿಕರ ಮೇಲೆ ದೌರ್ಜನ್ಯ ನಡೆದಾಗ ಜಾಣ ಮೌನ ವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು “ನಮಕ್ ಹರಾಮ್” ಎಂದು ಕರೆಯುವ ಮೂಲಕ ದಲಿತ ನಾಯಕ ಮತ್ತು ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಅವರು ಪ್ರಧಾನಿ ಮೋದಿಯನ್ನು ಅವಮಾನಿಸಿದ್ದಾರೆ.
ಪಟ್ನಾದಲ್ಲಿ ರಾಲಿಯೊಂದರಲ್ಲಿ ಮಾತನಾಡುತ್ತಿದ್ದ ಮೇವಾನಿ ಅವರು ಗುಜರಾತ್ ಮತ್ತು ಬಿಹಾರದಿಂದ ಗುಜರಾತಿಗೆ ವಲಸೆ ಬಂದ ಕಾರ್ಮಿಕರ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸುವ ಭರದಲ್ಲಿ ಪ್ರಧಾನಿ ಮೋದಿಯನ್ನು “ನಮಕ್ ಹರಾಮ್” (ಅಪ್ರಾಮಾಣಿಕ) ಎಂದು ಅವಮಾನಿಸಿದರು.
ಗುಜರಾತ್‌ನ ಅಹ್ಮದಾಬಾದ್, ಸೂರತ್, ರಾಜ್‌ಕೋಟ್ ಮತ್ತು ಬರೋಡದಲ್ಲಿ ರಸ್ತೆ, ಸೇತುವೆ, ಫ್ಲೈ ಓವರ್‌ಗಳನ್ನು ನಿರ್ಮಿಸುವ ಕೆಲಸಕ್ಕಾಗಿ ಮಧ್ಯ ಪ್ರದೇಶ, ಜಾರ್ಖಂಡ್, ಯುಪಿ ಮತ್ತು ಬಿಹಾರದಿಂದ ಅಪಾರ ಸಂಖ್ಯೆಯ ಕಾರ್ಮಿಕರು ವಲಸೆ ಬರುತ್ತಾರೆ. ಈಚೆಗೆ ಸುಮಾರ 12ರಿಂದ 15 ದಿನಗಳ ಕಾಲ ಈ ವಲಸೆ ಕಾರ್ಮಿಕರ ಮೇಲೆ ದೌರ್ಜನ್ಯ ನಡೆದಿದೆ. ಆದರೆ ಈ ಬಗ್ಗೆ ಈ “ನಮಕ್ ಹರಾಮ್” ಚಕಾರವನ್ನೂ ಎತ್ತಿಲ್ಲ ಎಂದು ಮೇವಾನಿ ಹೇಳಿದರು.
ಪಟ್ನಾದ ಗಾಂಧಿ ಮೈದಾನದಲ್ಲಿ ನಡೆದಿದ್ದ “ಬಿಜೆಪಿ ಹರಾವೋ ದೇಶ್ ಬಚಾವೋ’ ಕಾರ್ಯಕ್ರಮದಲ್ಲಿ ಒಟ್ಟು 9 ನಿಮಿಷಗಳ ಕಾಲ ಮಾಡಿದ ಭಾಷಣದಲ್ಲಿ ಮೇವಾನಿ, “ಶೇಮ್ ಆನ್ ಯೂ ನರೇಂದ್ರ ಮೋದಿ, ಶೇಮ್ ಆನ್ ಯೂ” ಎಂದು ಕನಿಷ್ಠ ಆರು ಬಾರಿ ಕೂಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.